Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:44 - ಕನ್ನಡ ಸತ್ಯವೇದವು C.L. Bible (BSI)

44 “ಇಲ್ಲಿ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೆ, ಕಾಡಿನ ಮೃಗಗಳಿಗೆ ಹಂಚಿಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 “ಇಲ್ಲಿ ಬಾ, ನಿನ್ನ ಮಾಂಸವನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಇಲ್ಲಿ ಬಾ; ನಿನ್ನ ಮಾಂಸವನ್ನು ಮೃಗಪಕ್ಷಿಗಳಿಗೆ ಹಂಚಿಕೊಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಗೊಲ್ಯಾತನು ದಾವೀದನಿಗೆ, “ಬಾ ಇಲ್ಲಿಗೆ, ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಪ್ರಾಣಿಗಳಿಗೂ ಆಹಾರವನ್ನಾಗಿ ಮಾಡುತ್ತೇನೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ದಾವೀದನಿಗೆ, “ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:44
12 ತಿಳಿವುಗಳ ಹೋಲಿಕೆ  

ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.


“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದುಬರುವುದು.


ಅನಂತರ ದೇವದೂತನೊಬ್ಬ ಸೂರ್ಯನ ಮೇಲೆ ನಿಂತಿರುವುದನ್ನು ಕಂಡೆ. ಆತನು ಗಟ್ಟಿಯಾದ ಧ್ವನಿಯಿಂದ ಮಧ್ಯಾಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಹೀಗೆ ಹೇಳಿದನು: “ದೇವರ ದೊಡ್ಡ ಔತಣಕ್ಕೆ ಕೂಡಿಬನ್ನಿ;


ಆ ಫಿಲಿಷ್ಟಿಯರು ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ, “ಹತ್ತಿ ನಮ್ಮ ಬಳಿಗೆ ಬನ್ನಿ; ನಿಮಗೆ ತೋರಿಸಬೇಕಾದದ್ದೊಂದಿದೆ,” ಎಂದರು. ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ನೀನೂ ನನ್ನ ಸಂಗಡ ಹತ್ತಿ ಬಾ; ಸರ್ವೇಶ್ವರ ಅವರನ್ನು ಇಸ್ರಯೇಲರ ಕೈಗೆ ಒಪ್ಪಿಸಿದ್ದಾರೆ,” ಎಂದು ಹೇಳಿದನು.


ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯ ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಆ ಗೋಣಿತಟ್ಟಿನ ಮೇಲೆ ಕುಳಿತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳಾಗಲಿ ಇರುಳಿನಲ್ಲಿ ಕಾಡುಮೃಗಗಳಾಗಲಿ ಆ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.


ಇವರೆಲ್ಲರನ್ನು ಶತ್ರುಗಳ ವಶಕ್ಕೆ ಒಪ್ಪಿಸುವೆನು. ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು. ಇವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು