1 ಸಮುಯೇಲ 17:55 - ಕನ್ನಡ ಸತ್ಯವೇದವು C.L. Bible (BSI)55 ದಾವೀದನು ಆ ಫಿಲಿಷ್ಟಿಯನೊಡನೆ ಯುದ್ಧಮಾಡಲು ಹೊರಟಿದ್ದನ್ನು ಸೌಲನು ನೋಡಿದನು. ತನ್ನ ಸೇನಾಪತಿಯಾದ ಅಬ್ನೇರನನ್ನು ಉದ್ದೇಶಿಸಿ, “ಅಬ್ನೇರನೇ, ಈ ತರುಣ ಯಾರ ಮಗ?” ಎಂದು ವಿಚಾರಿಸಿದನು. ಅದಕ್ಕೆ ಅಬ್ನೇರನು, “ಅರಸರೇ, ತಮ್ಮ ಜೀವದಾಣೆ, ನನಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ದಾವೀದನು ಫಿಲಿಷ್ಟಿಯರೊಡನೆ ಯುದ್ಧಮಾಡುವುದಕ್ಕೆ ಹೊರಟದ್ದನ್ನು ಸೌಲನು ಕಂಡು ತನ್ನ ಸೇನಾಪತಿಯಾದ ಅಬ್ನೇರನನ್ನು, “ಅಬ್ನೇರನೇ ಈ ಹುಡುಗನು ಯಾರ ಮಗನು?” ಎಂದು ಕೇಳಿದ್ದಕ್ಕೆ ಅವನು ಸೌಲನಿಗೆ, “ಅರಸನೇ ನಿನ್ನ ಜೀವದಾಣೆ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ದಾವೀದನು ಫಿಲಿಷ್ಟಿಯನೊಡನೆ ಯುದ್ಧಮಾಡುವದಕ್ಕೆ ಹೊರಟದ್ದನ್ನು ಸೌಲನು ಕಂಡು ತನ್ನ ಸೇನಾಪತಿಯಾದ ಅಬ್ನೇರನನ್ನು - ಅಬ್ನೇರನೇ, ಈ ಹುಡುಗನು ಯಾರ ಮಗನು ಎಂದು ಕೇಳಿದ್ದಕ್ಕೆ ಅವನು ಸೌಲನಿಗೆ - ಅರಸನೇ, ನಿನ್ನ ಜೀವದಾಣೆ ನನಗೆ ಗೊತ್ತಿಲ್ಲ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್55 ದಾವೀದನು ಗೊಲ್ಯಾತನೊಂದಿಗೆ ಯುದ್ಧಕ್ಕೆ ಹೊರಟಿದ್ದನ್ನು ಸೌಲನು ಗಮನಿಸುತ್ತಿದ್ದನು. ಸೌಲನು ತನ್ನ ಸೇನಾಧಿಪತಿಯಾದ ಅಬ್ನೇರನನ್ನು, “ಆ ಯುವಕನ ತಂದೆ ಯಾರು?” ಎಂದು ಪ್ರಶ್ನಿಸಿದನು. ಅಬ್ನೇರನು, “ಅರಸನೇ, ನಿನ್ನ ಜೀವದಾಣೆ, ಅವನು ಯಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟು ಹೋಗುವುದನ್ನು ಸೌಲನು ಕಂಡಾಗ, ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ, “ಅಬ್ನೇರನೇ, ಈ ಯುವಕನು ಯಾರ ಮಗನು?” ಎಂದನು. ಅದಕ್ಕೆ ಅಬ್ನೇರನು, “ಅರಸನೇ, ನಿನ್ನ ಪ್ರಾಣದಾಣೆ ನಾನರಿಯೆ,” ಎಂದನು. ಅಧ್ಯಾಯವನ್ನು ನೋಡಿ |