Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:1 - ಕನ್ನಡ ಸತ್ಯವೇದವು C.L. Bible (BSI)

1 ದಾವೀದನ ಮತ್ತು ಸೌಲನ ಸಂಭಾಷಣೆ ಮುಗಿಯಿತು. ಇದಾದ ಕೂಡಲೆ ಯೋನಾತಾನನು ಹಾಗು ದಾವೀದನು ಪ್ರಾಣ ಗೆಳೆಯರಾದರು. ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನು ಸೌಲನೊಡನೆ ಮಾತಾಡಿ ತೀರಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ಇವನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನು ಸೌಲನೊಂದಿಗೆ ಮಾತನಾಡಿದ ಬಳಿಕ ಯೋನಾತಾನನು ದಾವೀದನೊಂದಿಗೆ ಒಂದಾದನು. ಯೋನಾತಾನನು ತನ್ನನ್ನು ಪ್ರೀತಿಸುವಷ್ಟೇ ದಾವೀದನನ್ನು ಪ್ರೀತಿಸಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನು ಸೌಲನ ಸಂಗಡ ಮಾತನಾಡಿ ಮುಗಿಸಿದ ಮೇಲೆ, ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:1
17 ತಿಳಿವುಗಳ ಹೋಲಿಕೆ  

ಗೆಳೆಯರಂತೆ ನಟಿಸಿ ನಾಶಗೊಳಿಸುವವರು ಅನೇಕರುಂಟು; ಸಹೋದರನಿಗಿಂತ ಪ್ರಿಯನಾದ ಸ್ನೇಹಿತನೂ ಉಂಟು.


ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಾ ಇದ್ದುದರಿಂದ, ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು.


ಯೋನಾತಾನನೇ, ಸಹೋದರನೇ, ಮನೋಹರನೇ, ನಿನ್ನ ಮರಣ ತಂದಿದೆ ಅತೀವ ಸಂಕಟ ನನಗೆ, ನನ್ನ ಮೇಲೆ ನಿನಗಿದ್ದ ಪ್ರೀತಿ ಅದೆಷ್ಟು ಆಶ್ಚರ್ಯಕರ! ಸತಿಪ್ರೇಮಕ್ಕಿಂತಲೂ ಅದು ಅಮೋಘಕರ!


ಯೋನಾತಾನನು ದಾವೀದನನ್ನು ತನ್ನ ಪ್ರಾಣಸ್ನೇಹಿತನನ್ನಾಗಿ ಪ್ರೀತಿಸುತ್ತಿದ್ದುದರಿಂದ ಅವನೊಂದಿಗೆ ಒಂದು ಒಪ್ಪಂದಮಾಡಿಕೊಂಡನು.


ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ.


"ತಮ್ಮ ಸೇವಕರಾದ ನನ್ನ ತಂದೆಯ ಬಳಿಗೆ ನಾನು ಸೇರಿದಾಗ, ಅವರ ಪ್ರಾಣದ ಪ್ರಾಣವಾಗಿರುವ ಈ ಹುಡುಗ ನನ್ನ ಸಂಗಡ ಇಲ್ಲದೆ ಹೋದರೆ, ಹುಡುಗ ಬರಲಿಲ್ಲವೆಂದು ಅವರು ಕೂಡಲೆ ಸಾಯುವರು.


“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.


ದಾವೀದನು ಅವರನ್ನು ಎದುರುಗೊಂಡು “ಸ್ನೇಹಿತರಂತೆ ನನಗೆ ಸಹಾಯ ಮಾಡಲು ಬಂದಿದ್ದರೆ ನಿಮಗೆ ಇಲ್ಲಿ ಸ್ವಾಗತ. ನಮ್ಮೊಂದಿಗೆ ಸೇರಿಕೊಳ್ಳಿ, ನಾನು ನಿಮಗೆ ಯಾವ ತೊಂದರೆಯನ್ನು ಕೊಟ್ಟಿಲ್ಲ. ಆದರೆ ನೀವು ನನ್ನನ್ನು ನನ್ನ ವೈರಿಗಳಿಗೆ ಹಿಡಿದುಕೊಡಲು ಬಂದಿದ್ದರೆ ನಮ್ಮ ಪಿತೃಗಳ ದೇವರು ಅದನ್ನು ಬಲ್ಲವರಾಗಿದ್ದು ನಿಮ್ಮನ್ನು ದಂಡಿಸುವರು,” ಎಂದು ಹೇಳಿದನು.


ಆದುದರಿಂದ ಅವನು ದಾವೀದನಿಗೆ, “ನನ್ನ ತಂದೆ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾರೆ. ನೀನು ಜಾಗರೂಕತೆಯಿಂದಿರು; ನಾಳೆ ಬೆಳಿಗ್ಗೆ ಒಂದು ಗುಟ್ಟಾದ ಸ್ಥಳದಲ್ಲಿ ಅಡಗಿಕೊಂಡಿರು.


ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರುದ್ಧವಾಗಿ ಕೂಡಿಕೊಂಡರು.


ನಿನ್ನ ಸತ್ಯಪಥದಲಿ ನಾ ನಡೆವಂತೆ I ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು II ನಿನ್ನ ನಾಮದಲಿ ಭಯಭಕ್ತಿಯಿರುವಂತೆ I ಅನುಗ್ರಹಿಸೆನಗೆ ನೀ ಏಕಾಗ್ರತೆಯನು II


ಜನರು ಅವನಿಗೆ, “ದೇವರ ಸಹಾಯದಿಂದ ಈ ದಿನ ಇಸ್ರಯೇಲರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೇ? ಕೂಡದು; ಸರ್ವೇಶ್ವರನಾಣೆ. ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು,” ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು.


ದಾವೀದನನ್ನು ಕೊಲ್ಲಬೇಕೆಂದು ಸೌಲನು ತನ್ನ ಮಗ ಯೋನಾತಾನನಿಗೂ ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.


ಸೇವಕನ ಮೇಲೆ ದಯವಿರಲಿ. ನೀನು ಸರ್ವೇಶ್ವರನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿರುವೆಯಲ್ಲವೆ? ನಾನು ಅಪರಾಧಿಯಾಗಿದ್ದರೆ, ನನ್ನನ್ನು ನಿನ್ನ ತಂದೆಗೆ ಒಪ್ಪಿಸಬೇಕಾಗಿಲ್ಲ, ನೀನೆ ಕೊಂದುಹಾಕು,” ಎಂದು ಹೇಳಿದನು.


ನನ್ನ ಮಗನು ಜೆಸ್ಸೆಯನ ಮಗನೊಡನೆ ಒಪ್ಪಂದಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲ. ನನ್ನ ಸೇವಕನೊಬ್ಬ ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ ಅವನನ್ನು ಎತ್ತಿಕಟ್ಟಿದ್ದಾನೆಂದು ಒಬ್ಬನಾದರೂ ನನಗೆ ಏಕೆ ತಿಳಿಸಲಿಲ್ಲ? ನನ್ನ ಹಿತಚಿಂತೆ ನಿಮಗೆ ಕಿಂಚಿತ್ತೂ ಇಲ್ಲ,” ಎಂದನು.


ಅವರಿಬ್ಬರೂ ಸರ್ವೇಶ್ವರನ ಸನ್ನಿಧಿಯಲ್ಲಿ ಒಪ್ಪಂದಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು