Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:10 - ಕನ್ನಡ ಸತ್ಯವೇದವು C.L. Bible (BSI)

10 ಮಾರನೆಯ ದಿನ ದೇವರಿಂದ ಬಂದ ದುರಾತ್ಮವೊಂದು ಸೌಲನನ್ನು ಆವರಿಸಿತು. ಅವನು ಬುದ್ಧಿಗೆಟ್ಟು ಮನೆಯೊಳಗೇ ಕೂಗಾಡತೊಡಗಿದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ವಾಡಿಕೆಯ ಪ್ರಕಾರ ದಾವೀದನು ಕಿನ್ನರಿ ಬಾರಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ಕ್ರಮದ ಪ್ರಕಾರ ಕಿನ್ನರಿಯನ್ನು ಬಾರಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮಾರನೆಯ ದಿನ, ದೇವರಿಂದ ಬಂದ ದುರಾತ್ಮವು ಸೌಲನನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿತು. ಸೌಲನು ತನ್ನ ಮನೆಯಲ್ಲಿ ಹುಚ್ಚನಂತೆ ಕೂಗಿಕೊಳ್ಳುತ್ತಿದ್ದನು. ಆಗ ದಾವೀದನು ಎಂದಿನಂತೆ ಕಿನ್ನರಿಯನ್ನು ಬಾರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮಾರನೆಯ ದಿವಸದಲ್ಲಿ ದೇವರಿಂದ ಅನುಮತಿಸಿದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಬುದ್ಧಿಗೆಟ್ಟು ಮನೆಯಲ್ಲಿ ಕೂಗಾಡತೊಡಗಿದನು. ಆಗ ದಾವೀದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಕಿನ್ನರಿಯನ್ನು ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:10
17 ತಿಳಿವುಗಳ ಹೋಲಿಕೆ  

ಆದಕಾರಣ, ಅಸತ್ಯವನ್ನು ನಂಬುವಂಥ ಗಾಢಭ್ರಮೆಗೆ ದೇವರು ಅವರನ್ನು ಒಳಪಡಿಸುವರು.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಿದ್ದರು. ಆದರೂ ಯಾವ ವಾಣಿಯೂ ಕೇಳಿಸಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ; ಅವರನ್ನು ಯಾವನೂ ಲಕ್ಷಿಸಲೂ ಇಲ್ಲ.


ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಆಗ ಸರ್ವೇಶ್ವರನಿಂದ ಬಂದ ದುರಾತ್ಮವೊಂದು ಅವನನ್ನು ಆವರಿಸಿತು.


ಒಂದು ದಿನ ನಾವು ಪ್ರಾರ್ಥನಾ ಸ್ಥಳಕ್ಕೆ ಹೋಗುತ್ತಿದ್ದೆವು. ಗಾರುಡಗಾತಿಯಾದ ಒಬ್ಬ ದಾಸಿ ನಮ್ಮನ್ನು ಎದುರುಗೊಂಡಳು. ಆ ಹುಡುಗಿ ಕಣಿಶಕುನ ಹೇಳಿ ತನ್ನ ಯಜಮಾನನಿಗೆ ತುಂಬಾ ಹಣ ಸಂಪಾದಿಸುತ್ತಿದ್ದಳು.


ದೇವರಿಂದ ಕಳುಹಿಸಲಾಗಿದ್ದ ದುರಾತ್ಮ ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ಆಗ ಆ ದುರಾತ್ಮ ಸೌಲನನ್ನು ಬಿಟ್ಟುಹೋಗುತ್ತಿತ್ತು. ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.


ನೆರೆದಿದ್ದ ಜನರೆಲ್ಲರ ಮುಂದೆ, “ಸರ್ವೇಶ್ವರನೇ ಹೇಳಿದ್ದಾರೆ - ಇದೇ ಪ್ರಕಾರ, ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಹೊರಿಸಿರುವ ನೊಗವನ್ನು ಇನ್ನೆರಡು ವರ್ಷದೊಳಗೆ ಸಮಸ್ತ ರಾಷ್ಟ್ರಗಳ ಹೆಗಲಿನಿಂದ ತೆಗೆದು ಮುರಿದು ಹಾಕಲಾಗುವುದು,” ಎಂದು ಹೇಳಿದನು. ಇದನ್ನು ಕೇಳಿದ ಪ್ರವಾದಿ ಯೆರೆಮೀಯನು ಅಲ್ಲಿಂದ ಹೊರಟುಹೋದನು.


ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗಿ; ನೀವು ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಅದನ್ನು ಅರಸರ ಕೈಗೆ ಒಪ್ಪಿಸುವರು,” ಎಂದರು.


ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!


ಅಂದಿನಿಂದ ಸೌಲನು ದಾವೀದನ ಮೇಲೆ ಕಣ್ಣಿಟ್ಟನು.


ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರೆದುತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲೇ ಇರುವಂತೆ ಏರ್ಪಾಡಾಯಿತು.


ಅವನ ಶಕ್ತಿ ಇಂಗಿಹೋಯಿತು. ಆಗ ಅವಳು, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತು, “ಮುಂಚಿನಂತೆಯೇ ಈಗಲೂ ಕೊಸರಿಕೊಂಡು ಹೋಗುವೆನು,” ಎಂದುಕೊಂಡನು. ಆದರೆ ಸರ್ವೇಶ್ವರ ತನ್ನನ್ನು ಬಿಟ್ಟುಹೋಗಿ ಇದ್ದಾರೆಂಬುದು ಅವನಿಗೆ ತಿಳಿಯಲಿಲ್ಲ.


ಒಡನೆ ಕಿನ್ನರಿಯನ್ನು ಬಾರಿಸುತ್ತಿದ್ದ ದಾವೀದನನ್ನು ಗೋಡೆಗೆ ಕಚ್ಚಿಕೊಳ್ಳುವಂತೆ ತಿವಿಯಬೇಕೆಂದು ಅವನು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಫಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು