Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:18 - ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ದಾವೀದನು, “ಅರಸರ ಅಳಿಯನಾಗಲು ನಾನು ಎಷ್ಟರವನು? ಇಸ್ರಯೇಲರಲ್ಲಿ ನನ್ನ ಕುಲವಾಗಲಿ, ಕುಟುಂಬವಾಗಲಿ ಎಷ್ಟರದು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕೆ ದಾವೀದನು “ಅರಸನ ಅಳಿಯನಾಗುವುದಕ್ಕೆ ನಾನು ಎಷ್ಟರವನು? ಇಸ್ರಾಯೇಲರಲ್ಲಿ ನನ್ನ ತಂದೆಯ ಕುಟುಂಬವೂ ಸಮಾನವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದಕ್ಕೆ ದಾವೀದನು - ಅರಸನ ಅಳಿಯನಾಗುವದಕ್ಕೆ ನಾನೆಷ್ಟರವನು? ಇಸ್ರಾಯೇಲ್ಯರಲ್ಲಿ ನನ್ನ ಕುಲವೂ ಕುಟುಂಬವೂ ಎಷ್ಟರವು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ದಾವೀದನು, “ನಾನು ಪ್ರಮುಖ ಕುಲದವನೂ ಅಲ್ಲ; ಪ್ರಮುಖನಾದ ವ್ಯಕ್ತಿಯೂ ಅಲ್ಲ! ರಾಜನ ಮಗಳನ್ನು ಮದುವೆಯಾಗಲು ನಾನು ಯೋಗ್ಯನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದಾವೀದನು ಸೌಲನಿಗೆ, “ಅರಸನಿಗೆ ಅಳಿಯನಾಗಿರುವುದಕ್ಕೆ ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು? ಇಸ್ರಾಯೇಲಿನಲ್ಲಿ ನನ್ನ ತಂದೆಯ ಗೋತ್ರವು ಎಷ್ಟು ಮಾತ್ರವು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:18
9 ತಿಳಿವುಗಳ ಹೋಲಿಕೆ  

ಬಳಿಕ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ಹೇ ಸರ್ವೇಶ್ವರಾ, ಸರ್ವೇಶ್ವರಾ, ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!


ಅಂತೆಯೇ ಆ ಸೇವಕರು ದಾವೀದನಿಗೆ ತಿಳಿಯಪಡಿಸಿದರು. ಅದಕ್ಕೆ ದಾವೀದನು, “ಅರಸರ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿ ಎಂದು ನೆನೆಸುತ್ತೀರೋ? ನಾನೊಬ್ಬ ಬಡವ, ದೀನದಲಿತ,” ಎಂದುಬಿಟ್ಟನು.


ಅದಕ್ಕೆ ಸೌಲನು, “ಇಸ್ರಯೇಲ್ ಕುಲಗಳಲ್ಲಿ ಅತ್ಯಲ್ಪವಾಗಿರುವ ಬೆನ್ಯಾಮೀನ್ ಕುಲಕ್ಕೆ ಸೇರಿದವನು ನಾನು; ಮಾತ್ರವಲ್ಲ, ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಏಕೆ ಹೇಳುತ್ತಿರುವಿರಿ?” ಎಂದನು.


ಆಗ ರೂತಳು ಅವನಿಗೆ ಸಾಷ್ಟಾಂಗವೆರಗಿ ನಮಸ್ಕರಿಸಿ, “ಒಡೆಯಾ, ನನ್ನ ಮೇಲೆ ಏಕೆ ಇಷ್ಟು ಕನಿಕರ? ಪರದೇಶಿಯಾದ ನನಗೆ ತಾವಿಷ್ಟು ದಯೆತೋರಿಸುವುದೇಕೆ?” ಎಂದಳು.


ಮೋಶೆ ದೇವರಿಗೆ, “ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕಾಗಲಿ ಇಸ್ರಯೇಲರನ್ನು ಈಜಿಪ್ಟಿನಿಂದ, ಕರೆದುಕೊಂಡು ಬರುವುದಕ್ಕಾಗಲಿ ನಾನು ಎಷ್ಟರವನು?” ಎಂದನು.


ಅದಕ್ಕೆ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನಾನು ಮಾತುಬಲ್ಲವನಲ್ಲ, ಇನ್ನೂ ತರುಣ,” ಎಂದು ಬಿನ್ನವಿಸಿದೆ.


ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಿಗೆ ಜ್ಞಾನೋದಯ; ಘನತೆಗೌರವಕ್ಕೆ ಮುಂಚೆ ಸವಿನಯ.


ಅಹೀಮಾಚ - ನಫ್ತಾಲಿ ಪ್ರದೇಶ (ಇವನು ಸೊಲೊಮೋನನ ಮಗಳು ಬಾಸೆಮತಳನ್ನು ವಿವಾಹವಾಗಿದ್ದನು);


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು