1 ಸಮುಯೇಲ 18:21 - ಕನ್ನಡ ಸತ್ಯವೇದವು C.L. Bible (BSI)21 “ಇವಳನ್ನು ಅವನಿಗೆ ಕೊಡುತ್ತೇನೆ. ಈಕೆ ಅವನಿಗೆ ಉರುಲಾಗಿರಬಲ್ಲಳು; ಫಿಲಿಷ್ಟಿಯರ ಕೈಗೆ ಇವನು ಸಿಕ್ಕಿಬೀಳುವಂತೆ ಮಾಡಬಲ್ಲಳು,” ಎಂದುಕೊಂಡನು. ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೇ ಸಂದರ್ಭ ಬಂದೊದಗಿದೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವಳು ದಾವೀದನಿಗೆ ಉರಲಾಗಿರುವಂತೆಯೂ, ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ, “ನೀನು ನನ್ನ ಅಳಿಯನಾಗುವುದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಸೌಲನು - ದಾವೀದನಿಗೆ ಉರಲಾಗಿರುವಂತೆಯೂ ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ - ನೀನು ನನ್ನ ಅಳಿಯನಾಗುವದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಸೌಲನು, “ನಾನು ದಾವೀದನನ್ನು ಬಲೆಗೆ ಬೀಳಿಸಲು ಮೀಕಲಳನ್ನು ಬಳಸಿಕೊಳ್ಳುತ್ತೇನೆ. ದಾವೀದನನ್ನು ಮದುವೆಯಾಗಲು ನಾನು ಮೀಕಲಳಿಗೆ ಅವಕಾಶ ಕೊಡುತ್ತೇನೆ. ನಂತರ ಅವನನ್ನು ಕೊಲ್ಲಲು ಫಿಲಿಷ್ಟಿಯರಿಗೆ ಬಿಟ್ಟುಕೊಡುತ್ತೇನೆ” ಎಂದು ಯೋಚಿಸಿದನು. ಹೀಗೆ ಸೌಲನು ಎರಡನೆಯ ಸಲ ದಾವೀದನಿಗೆ, “ನೀನು ನನ್ನ ಮಗಳನ್ನು ಇಂದು ಮದುವೆಯಾಗು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಅವನಿಗೆ ಉರುಲಾಗಿರುವ ಹಾಗೆಯೂ, ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು,” ಎಂದುಕೊಂಡನು. ಆದ್ದರಿಂದ ಸೌಲನು ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೆಯ ಅವಕಾಶ,” ಎಂದನು. ಅಧ್ಯಾಯವನ್ನು ನೋಡಿ |