Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:23 - ಕನ್ನಡ ಸತ್ಯವೇದವು C.L. Bible (BSI)

23 ಅಂತೆಯೇ ಆ ಸೇವಕರು ದಾವೀದನಿಗೆ ತಿಳಿಯಪಡಿಸಿದರು. ಅದಕ್ಕೆ ದಾವೀದನು, “ಅರಸರ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿ ಎಂದು ನೆನೆಸುತ್ತೀರೋ? ನಾನೊಬ್ಬ ಬಡವ, ದೀನದಲಿತ,” ಎಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಸೇವಕರು ದಾವೀದನಿಗೆ ಹಾಗೆಯೇ ಹೇಳಿದಾಗ ಅವನು, “ಅರಸನ ಅಳಿಯನಾಗುವುದು ಸಾಧಾರಣವಾದ ಸಂಗತಿಯೆಂದು ನೆನಸುತ್ತೀರೋ? ನಾನು ದರಿದ್ರನೂ, ಅಲ್ಪನೂ ಆಗಿರುತ್ತೆನಲ್ಲಾ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ಸೇವಕರು ದಾವೀದನಿಗೆ ಹಾಗೆಯೇ ಹೇಳಿದಾಗ ಅವನು - ಅರಸನ ಅಳಿಯನಾಗುವದು ಸಾಧಾರಣವಾದ ಸಂಗತಿಯೆಂದು ನೆನಸುತ್ತೀರೋ? ನಾನು ದರಿದ್ರನೂ ಅಲ್ಪನೂ ಆಗಿರುತ್ತೇನಲ್ಲಾ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸೌಲನ ಅಧಿಕಾರಿಗಳು ದಾವೀದನಿಗೆ ಆ ವಿಚಾರಗಳನ್ನು ತಿಳಿಸಿದರು. ಆದರೆ ದಾವೀದನು, “ರಾಜನ ಅಳಿಯನಾಗುವುದು ಸುಲಭವೆಂದು ನೀವು ತಿಳಿದಿರುವಿರಾ? ರಾಜನ ಮಗಳಿಗೆ ಕೊಡಲು ನನ್ನ ಹತ್ತಿರ ಹಣವೇ ಇಲ್ಲ! ನಾನು ಕೇವಲ ಬಡವ, ಸಾಮಾನ್ಯ ಮನುಷ್ಯ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು, “ನಾನು ದರಿದ್ರನೂ ಅಲ್ಪನೂ ಆಗಿರುವಾಗ, ನಾನು ಅರಸನಿಗೆ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿಯೆಂದು ನೆನಸುತ್ತೀರೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:23
12 ತಿಳಿವುಗಳ ಹೋಲಿಕೆ  

ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.


ಬಡವನನ್ನು ನೆರೆಯವರೂ ತುಚ್ಛವಾಗಿ ಕಾಣುವರು; ಹಣವಂತನಿಗಾದರೊ ಬಹುಜನ ಮಿತ್ರರು.


ನಾನಲ್ಪನು, ತಿರಸ್ಕಾರ ಹೊಂದಿದವನು I ಆದರೂ ಮರೆತಿಲ್ಲ ನಿನ್ನ ನೇಮಗಳನು II


ಅದಕ್ಕೆ ಸೌಲನು, “ಇಸ್ರಯೇಲ್ ಕುಲಗಳಲ್ಲಿ ಅತ್ಯಲ್ಪವಾಗಿರುವ ಬೆನ್ಯಾಮೀನ್ ಕುಲಕ್ಕೆ ಸೇರಿದವನು ನಾನು; ಮಾತ್ರವಲ್ಲ, ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಏಕೆ ಹೇಳುತ್ತಿರುವಿರಿ?” ಎಂದನು.


ಅಂತೆಯೇ ಯಕೋಬನು ರಾಖೇಲಳಿಗಾಗಿ ಏಳು ‌ವರ್ಷ‌ಕಾಲ ಸೇವೆಮಾಡಿದನು. ಆಕೆಯ ಮೇಲೆ ಅವನಿಗೆ ಬಹಳ ಪ್ರೀತಿಯಿದ್ದುದರಿಂದ ಅದು ಅವನಿಗೆ ಕೇವಲ ಕೆಲವೇ ದಿನಗಳಂತೆ ಕಾಣಿಸಿತು.


ಹೆಣ್ಣಿಗಾಗಿ ತೆರವನ್ನೂ ಕಾಣಿಕೆಯನ್ನೂ ನೀವು ಹೇಳುವ ಮೇರೆಗೆ ಎಷ್ಟಾದರೂ ಕೊಡುತ್ತೇನೆ. ಹೇಗೂ ಆ ಹುಡುಗಿಯನ್ನು ನನಗೆ ಮದುವೆ ಮಾಡಿಕೊಡಿ,” ಎಂದು ಕೇಳಿಕೊಂಡನು.


ಅದಕ್ಕೆ ದಾವೀದನು, “ಅರಸರ ಅಳಿಯನಾಗಲು ನಾನು ಎಷ್ಟರವನು? ಇಸ್ರಯೇಲರಲ್ಲಿ ನನ್ನ ಕುಲವಾಗಲಿ, ಕುಟುಂಬವಾಗಲಿ ಎಷ್ಟರದು?” ಎಂದನು.


ಅಲ್ಲದೆ ತನ್ನ ಸೈನಿಕರಿಗೆ, "ನೀವು ದಾವೀದನಿಗೆ, 'ಅರಸರು ನಿಮ್ಮನ್ನು ಮೆಚ್ಚಿಕೊಂಡಿದ್ದಾರೆ; ಅವರ ಎಲ್ಲ ಸೇವಕರಿಗೂ ನಿಮ್ಮ ಮೇಲೆ ಪ್ರೀತಿಯಿದೆ; ನೀವು ಅರಸರ ಅಳಿಯರಾಗಲೇಬೇಕು,” ಎಂದು ಪುಸಲಾಯಿಸಿರಿ,” ಎಂದು ಗುಟ್ಟಾಗಿ ತಿಳಿಸಿದನು.


ದಾವೀದನ ಪ್ರತಿಕ್ರಿಯೆಯನ್ನು ಸೇವಕರು ಸೌಲನಿಗೆ ತಿಳಿಸಿದರು.


ನೆರೆಯವನನ್ನು ಅಳತೆಮೀರಿ ಹೊಗಳುವವನು ಅವನ ಕಾಲಿಗೆ ಬಲೆಯನ್ನು ಒಡ್ಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು