Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:27 - ಕನ್ನಡ ಸತ್ಯವೇದವು C.L. Bible (BSI)

27 ನೇಮಕವಾದ ದಿನಗಳು ಮುಗಿಯುವ ಮೊದಲೇ ತನ್ನ ಸೈನಿಕರೊಡನೆ ಹೊರಟು ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ ಇನ್ನೂರು ಮಂದಿಯನ್ನು ಕೊಂದು, ಮುಂದೊಗಲುಗಳನ್ನು ತಂದು ಅರಸನ ಅಳಿಯನಾಗಲು ಬೇಕಾಗಿದ್ದ ಲೆಕ್ಕಾಚಾರವನ್ನು ಪೂರ್ತಿ ಆಗಿ ಒಪ್ಪಿಸಿದನು. ಆಗ ಸೌಲನು ತನ್ನ ಮಗಳು ಮೀಕಲಳನ್ನು ದಾವೀದನಿಗೆ ಮದುವೆಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದಾವೀದನು ತನ್ನ ಸೇವಕರೊಡನೆ ಹೊರಟು, ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ ಇನ್ನೂರು ಜನರನ್ನು ಕೊಂದು, ಮುಂದೊಗಲುಗಳನ್ನು ತಂದು, ಅರಸನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ತನ್ನ ಸೈನಿಕರೊಡನೆ ಹೊರಟು ಫಿಲಿಷ್ಟಿಯರ ದೇಶಕ್ಕೆ ಹೋಗಿ ಅಲ್ಲಿನ ಇನ್ನೂರು ಜನರನ್ನು ಕೊಂದು ಮುಂದೊಗಲುಗಳನ್ನು ತಂದು ಅರಸನ ಅಳಿಯನಾಗುವದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದಾವೀದನು ಮತ್ತು ಅವನ ಜನರು ಫಿಲಿಷ್ಟಿಯರೊಂದಿಗೆ ಹೋರಾಡಲು ಹೋದರು. ಅವರು ಇನ್ನೂರು ಜನ ಫಿಲಿಷ್ಟಿಯರನ್ನು ಕೊಂದು ಅವರ ಮುಂದೊಗಲುಗಳನ್ನು ತೆಗೆದುಕೊಂಡು ಬಂದು ರಾಜನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಸಂಪೂರ್ಣವಾಗಿ ಸೌಲನಿಗೆ ಒಪ್ಪಿಸಿದರು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ದಾವೀದನಿಗೆ ಮದುವೆ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದ್ದರಿಂದ ನೇಮಿಸಿದ ದಿವಸಗಳು ಈಡೇರುವುದಕ್ಕಿಂತ ಮುಂಚೆ ದಾವೀದನು ಎದ್ದು, ತನ್ನ ಜನರನ್ನು ಕರಕೊಂಡು ಹೋಗಿ, ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಹೊಡೆದು, ಅವರ ಮುಂದೊಗಲುಗಳನ್ನು ತಂದು, ತಾನು ಅರಸನಿಗೆ ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಪುತ್ರಿಯಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:27
8 ತಿಳಿವುಗಳ ಹೋಲಿಕೆ  

ಇದಲ್ಲದೆ, ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ನಾನು ನೂರುಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದುಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು,” ಎಂಬುದಾಗಿ ಆಜ್ಞಾಪಿಸಿದನು.


ಅವನನ್ನು ತನ್ನ ಸಾನ್ನಿಧ್ಯ ಸೇವೆಯಿಂದ ತೆಗೆದು ಸೈನ್ಯದ ಒಬ್ಬ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ದಾವೀದನು ದಳಪತಿಯಾಗಿ ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇದ್ದನು.


ಸರ್ವೇಶ್ವರನ ಆತ್ಮ ಫಕ್ಕನೆ ಅವನ ಮೇಲೆ ಬಂದಿತು. ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲಿದುಕೊಂಡು ಒಗಟನ್ನು ಬಿಡಿಸಿದವರಿಗೆ ತಂದುಕೊಟ್ಟನು. ಬಳಿಕ ಕೋಪಗೊಂಡು ತನ್ನ ತಂದೆಯ ಮನೆಗೆ ಹೋದನು.


ಸೌಲನ ಗಂಡುಮಕ್ಕಳ ಹೆಸರು ಇವು: ಯೋನಾತಾನ್, ಇಷ್ವಿ ಹಾಗು ಮಲ್ಕೀಷೂವ; ಅವನ ಹೆಣ್ಣುಮಕ್ಕಳ ಹೆಸರು ಮೇರಬ್ ಹಾಗು ಮೀಕಲ್.


ಒಂದು ದಿನ ಸೌಲನು, “ಇವನು ನನ್ನ ಕೈಯಿಂದ ಸಾಯಬಾರದು; ಫಿಲಿಷ್ಟಿಯರ ಕೈಯಿಂದಲೇ ಸಾಯಲಿ,” ಎಂದು ಒಂದು ಉಪಾಯ ಹೂಡಿದನು. ದಾವೀದನಿಗೆ, “ನೀನು ನನ್ನ ವೀರನಾಗಿ ಹೋಗಿ ಸರ್ವೇಶ್ವರನ ಯುದ್ಧಗಳನ್ನು ನಡೆಸು; ನಾನು ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಮದುವೆಮಾಡಿಕೊಡುತ್ತೇನೆ,” ಎಂದನು.


ಸರ್ವೇಶ್ವರ ದಾವೀದನೊಂದಿಗಿದ್ದಾರೆಂದು ಸೌಲನಿಗೆ ಮನದಟ್ಟಾಯಿತು. ತನ್ನ ಮಗಳು ಅವನನ್ನು ಬಹಳವಾಗಿ ಪ್ರೀತಿಸುತ್ತಾಳೆಂದು ಸಹ ಗೊತ್ತಾಯಿತು.


ಈ ಮಧ್ಯೆ ಸೌಲನು, ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಗಲ್ಲೀಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟಿದ್ದನು.


ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಪ್ಪಂದಮಾಡಿಕೊಳ್ಳುತ್ತೇನೆ; ಆದರೆ ನೀನು ಒಂದು ಕಾರ್ಯವನ್ನು ಮಾಡಬೇಕು; ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ ನೀನು ನನ್ನ ಮುಖವನ್ನು ನೋಡಕೂಡದು,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು