Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:6 - ಕನ್ನಡ ಸತ್ಯವೇದವು C.L. Bible (BSI)

6 ದಾವೀದನು ಫಿಲಿಷ್ಟಿಯರನ್ನು ಸಂಹರಿಸಿ ಸರ್ವಸೈನಿಕರೊಡನೆ ಹಿಂದಿರುಗಿ ಬರುವಾಗ ಇಸ್ರಯೇಲರ ಎಲ್ಲ ಪಟ್ಟಣಗಳಿಂದ ಮಹಿಳೆಯರು ಹೊರಗೆ ಬಂದು, ತಾಳ ತಮ್ಮಟೆಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸ ಸೌಲನನ್ನು ಎದುರುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ, ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರೂ ಹೊರಗೆ ಬಂದು ದಮ್ಮಡಿತಾಳಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸನಾದ ಸೌಲನನ್ನು ಎದುರುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರು ಹೊರಗೆ ಬಂದು ದಮ್ಮಡಿತಾಳಗಳನ್ನು ಹಿಡಿದು ಸಂತೋಷದಿಂದ ಹಾಡುತ್ತಾ ಕುಣಿಯುತ್ತಾ ಅರಸನಾದ ಸೌಲನನ್ನು ಎದುರುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನು ಫಿಲಿಷ್ಟಿಯರೊಡನೆ ಹೋರಾಡಲು ಹೋಗುತ್ತಿದ್ದನು. ಯುದ್ಧದ ನಂತರ ಅವನು ಮನೆಗೆ ಹಿಂದಿರುಗುತ್ತಿದ್ದನು. ಇಸ್ರೇಲಿನ ಎಲ್ಲ ಪಟ್ಟಣಗಳಲ್ಲೂ ಹೆಂಗಸರು ದಾವೀದನನ್ನು ನೋಡುವುದಕ್ಕಾಗಿ ಹೊರಬರುತ್ತಿದ್ದರು. ಅವರು ಡೋಲು ಮುಂತಾದ ವಾದ್ಯಗಳನ್ನು ಬಾರಿಸುತ್ತಾ ಕೇಕೆ ಹಾಕಿ ನಗುತ್ತಾ ನರ್ತಿಸುತ್ತಿದ್ದರು. ಅವರು ಸೌಲನ ಸಮ್ಮುಖದಲ್ಲಿಯೇ ಇವನ್ನೆಲ್ಲ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದಾವೀದನು ಫಿಲಿಷ್ಟಿಯರನ್ನು ಹೊಡೆದು ಜನರಸಹಿತವಾಗಿ ಬರುವಾಗ, ಇಸ್ರಾಯೇಲರ ಸಮಸ್ತ ಪಟ್ಟಣಗಳಿಂದ ಸ್ತ್ರೀಯರು ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಸಂತೋಷದಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:6
11 ತಿಳಿವುಗಳ ಹೋಲಿಕೆ  

ಯೆಪ್ತಾಹನು ಮಿಚ್ಫೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿ ಬಡಿಯುತ್ತಾ ನಾಟ್ಯವಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆ ಅವನ ಒಬ್ಬಳೇ ಮಗಳು. ಆಕೆಯ ಹೊರತು ಅವನಿಗೆ ಬೇರೆ ಗಂಡುಹೆಣ್ಣು ಮಕ್ಕಳೇ ಇರಲಿಲ್ಲ.


ಆರೋನನ ಅಕ್ಕ ಮಿರ್ಯಾಮಳು ಒಬ್ಬ ಪ್ರವಾದಿನಿ. ಆಕೆ ತಮ್ಮಟೆಯನ್ನು ಕೈಗೆ ತೆಗೆದುಕೊಂಡಳು. ಮಹಿಳೆಯರೆಲ್ಲರು ತಮ್ಮಟೆ ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೊರಟರು.


ಮುಂಗಡೆಯಲಿದೋ ಹಾಡುಗಾರರು I ಹಿಂಗಡೆಯಲಿದೋ ವಾದ್ಯಗಾರರು I ನಡುವೆ ದಮ್ಮಡಿ ಬಡಿವ ಮಹಿಳೆಯರು II


ಮಿರ್ಯಾಮಳು ಅವರ ಹಾಡಿಗೆ ಈ ಪಲ್ಲವಿಯನ್ನು ಕೂಡಿಸಿದಳು: ಮಾಡಿರಿ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕಡಲಲ್ಲಿ ಕೆಡವಿ ನಾಶಮಾಡಿಹನು ಕುದುರೆಗಳನು, ರಾಹುತರನು


ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಎಲ್ಲವನ್ನು ವಿವೇಕದಿಂದ ಮಾಡಿ ಯಶಸ್ಸು ಪಡೆಯುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇದರಿಂದ ಎಲ್ಲ ಅಧಿಕಾರಿಗಳಿಗೂ ಜನಸಾಮಾನ್ಯರಿಗೂ ಸಂತೋಷವಾಯಿತು.


ಸಾರಬೇಡಿ ಈ ಸುದ್ದಿಯನು ‘ಗತ್’ ಊರಿನಲಿ ಘೋಷಿಸಬೇಡಿ ಅಷ್ಕೆಲೋನಿನ ಬೀದಿಗಳಲಿ. ಏಕೆನೆ, ಉಲ್ಲಾಸಿಸಿಯಾರು ಆ ಫಿಲಿಷ್ಟಿಯ ಮಹಿಳೆಯರು; ಜಯಘೋಷ ಮಾಡಿಯಾರು ಸುನ್ನತಿಯಿಲ್ಲದವರಾ ಸ್ತ್ರೀಯರು!


ದಾವೀದನೂ ಎಲ್ಲ ಇಸ್ರಯೇಲರೂ ಕಿನ್ನರಿ, ಸ್ವರಮಂಡಲ, ತಮಟೆ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು, ಪೂರ್ಣಾವೇಶದಿಂದ ಗೀತೆಗಳನ್ನು ಹಾಡುತ್ತಾ, ಸರ್ವೇಶ್ವರನ ಮುಂದೆ ನರ್ತನ ಮಾಡುತ್ತಾ ಹೋದರು.


ಹೊರಡಿಸಿದನು ಪ್ರಭು ಶುಭವಾರ್ತೆಯೊಂದನು I ಹರಡಿತು ಜನಸ್ತೋಮ ಆ ಸಂದೇಶವನು II


ಆತನ ನಾಮವನು ಕೀರ್ತಿಸಲಿ ಕುಣಿತದಿಂದ I ಆತನನು ಭಜಿಸಲಿ ತಮಟೆ, ಕಿನ್ನರಿಗಳಿಂದ II


ಸರ್ವೇಶ್ವರ ಸ್ವಾಮಿ ವಿಧಿಸುವ ಪ್ರತಿಯೊಂದು ಪೆಟ್ಟು ತಾಳ ತಮ್ಮಟೆಯಂತೆ ಅವರ ಮೇಲೆ ಬೀಳುವುದು. ಸರ್ವೇಶ್ವರ ತಾವೇ ಅವರ ವಿರುದ್ಧವಾಗಿ ಕೈಬೀಸಿ ಯುದ್ಧಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು