1 ಸಮುಯೇಲ 18:8 - ಕನ್ನಡ ಸತ್ಯವೇದವು C.L. Bible (BSI)8 ಈ ಮಾತುಗಳು ಸೌಲನಿಗೆ ಹಿಡಿಸಲಿಲ್ಲ. ಅವನು ಕೋಪದಿಂದ, “ದಾವೀದನು ಹತ್ತು ಸಾವಿರಗಟ್ಟಳೆ ಕೊಂದನೆಂದೂ ನಾನು ಸಾವಿರಗಟ್ಟಳೆ ಮಾತ್ರ ಕೊಂದೆನೆಂದು ಹಾಡುತ್ತಾರಲ್ಲಾ! ಹಾಗಾದರೆ ಅವನನ್ನು ರಾಜನನ್ನಾಗಿ ಮಾಡುವುದೊಂದೇ ಕಡಿಮೆ!” ಎಂದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹುವ್ಯಸನವೂ ಕೋಪವೂ ಉಂಟಾಗಿ ಅವನು - ದಾವೀದನು ಹತ್ತು ಸಾವಿರ ಗಟ್ಟಳೆಯಾಗಿ ಕೊಂದನೆಂದೂ ನಾನು ಸಾವಿರಗಟ್ಟಳೆಯಾಗಿ ಕೊಂದೆನೆಂದೂ ಹಾಡುತ್ತಾರಲ್ಲಾ! ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾದ ಹಾಗಾಯಿತು ಅಂದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹೆಂಗಸರ ಈ ಹಾಡಿನಿಂದ ಸೌಲನು ಬಹಳವಾಗಿ ವ್ಯಸನಗೊಂಡನು ಮತ್ತು ರೋಷಗೊಂಡನು. “ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು ಎಂದು ಇವರು ಹಾಡುತ್ತಾರಲ್ಲಾ, ಇವನಿಗೆ ರಾಜ್ಯವೊಂದನ್ನು ಬಿಟ್ಟು ಬೇರೆ ಏನು ಕಡಿಮೆಯಾಯಿತು?” ಎಂದು ಆಲೋಚಿಸತೊಡಗಿದನು. “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದ ಹೆಂಗಸರ ಮಾತುಗಳಿಂದ ಸೌಲನು ಚಿಂತೆಗೀಡಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದರಿಂದ ಸೌಲನಿಗೆ ಬಹು ಕೋಪವಾಯಿತು. ಆ ಹಾಡಿನಿಂದ ಅವನಿಗೆ ಬಹುಬೇಸರವಾಯಿತು. “ಇವರು ದಾವೀದನಿಗೆ ಹತ್ತು ಸಾವಿರಗಳಷ್ಟು ಎಂದು ಹಾಡಿದ್ದಾರೆ; ನನಗೆ ಸಾವಿರಗಳಷ್ಟೇ ಎಂದು ಹಾಡಿದ್ದಾರೆ; ಹಾಗಾದರೆ, ಅವನಿಗೆ ರಾಜ್ಯವಲ್ಲದೆ ಇನ್ನು ಆಗಬೇಕಾದದ್ದೇನು?” ಎಂದುಕೊಂಡನು. ಅಧ್ಯಾಯವನ್ನು ನೋಡಿ |