Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:9 - ಕನ್ನಡ ಸತ್ಯವೇದವು C.L. Bible (BSI)

9 ಅಂದಿನಿಂದ ಸೌಲನು ದಾವೀದನ ಮೇಲೆ ಕಣ್ಣಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಂದಿನಿಂದ ಅವನು ದಾವೀದನನ್ನು ಸಂಶಯದಿಂದ ನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಂದಿನಿಂದ ಅವನ ಮೇಲೆ ಕಣ್ಣಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸೌಲನು ಅಂದಿನಿಂದ ದಾವೀದನನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ದಿವಸ ಮೊದಲುಗೊಂಡು ಸೌಲನು ದಾವೀದನ ಮೇಲೆ ಮತ್ಸರದ ಕಣ್ಣಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:9
11 ತಿಳಿವುಗಳ ಹೋಲಿಕೆ  

ಸೈತಾನನಿಗೆ ಅವಕಾಶ ಕೊಡಬೇಡಿ.


ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ.


ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.


ಇದಲ್ಲದೆ, ಯಕೋಬನ ಕಣ್ಣಿಗೆ ಲಾಬಾನನ ಮನೋಭಾವವು ಮೊದಲಿದ್ದಂತೆ ತೋರಲಿಲ್ಲ.


ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.


ಈ ಮಾತುಗಳು ಸೌಲನಿಗೆ ಹಿಡಿಸಲಿಲ್ಲ. ಅವನು ಕೋಪದಿಂದ, “ದಾವೀದನು ಹತ್ತು ಸಾವಿರಗಟ್ಟಳೆ ಕೊಂದನೆಂದೂ ನಾನು ಸಾವಿರಗಟ್ಟಳೆ ಮಾತ್ರ ಕೊಂದೆನೆಂದು ಹಾಡುತ್ತಾರಲ್ಲಾ! ಹಾಗಾದರೆ ಅವನನ್ನು ರಾಜನನ್ನಾಗಿ ಮಾಡುವುದೊಂದೇ ಕಡಿಮೆ!” ಎಂದುಕೊಂಡನು.


ಮಾರನೆಯ ದಿನ ದೇವರಿಂದ ಬಂದ ದುರಾತ್ಮವೊಂದು ಸೌಲನನ್ನು ಆವರಿಸಿತು. ಅವನು ಬುದ್ಧಿಗೆಟ್ಟು ಮನೆಯೊಳಗೇ ಕೂಗಾಡತೊಡಗಿದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ವಾಡಿಕೆಯ ಪ್ರಕಾರ ದಾವೀದನು ಕಿನ್ನರಿ ಬಾರಿಸುತ್ತಾ ಇದ್ದನು.


ದಾವೀದನನ್ನು ಕೊಲ್ಲಬೇಕೆಂದು ಸೌಲನು ತನ್ನ ಮಗ ಯೋನಾತಾನನಿಗೂ ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.


ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರದ ಮುಂದೆ ನಿಲ್ಲಬಲ್ಲವರಾರು?


ಮಾನವನು ಪಡುವ ಸಮಸ್ತ ಪರಿಶ್ರಮವನ್ನು ಹಾಗೂ ಸಾಧಿಸುವ ಸಕಲ ಕಾರ್ಯಗಳನ್ನು ಅವಲೋಕಿಸಿದೆ. ಇವಕ್ಕೆಲ್ಲ ಪರರ ಬಗ್ಗೆ ಅವನಿಗಿರುವ ಮತ್ಸರವೇ ಕಾರಣವೆಂದು ತೋರಿಬಂತು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು