Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:10 - ಕನ್ನಡ ಸತ್ಯವೇದವು C.L. Bible (BSI)

10 ಒಡನೆ ಕಿನ್ನರಿಯನ್ನು ಬಾರಿಸುತ್ತಿದ್ದ ದಾವೀದನನ್ನು ಗೋಡೆಗೆ ಕಚ್ಚಿಕೊಳ್ಳುವಂತೆ ತಿವಿಯಬೇಕೆಂದು ಅವನು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಫಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನು ಒಡನೆ ಕಿನ್ನರಿಯನ್ನು ನುಡಿಸುತ್ತಿದ್ದ ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಪಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ, ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ಒಡನೆ ಕಿನ್ನರಿಯನ್ನು ಬಾರಿಸುತ್ತಿದ್ದ ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಫಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ಸೌಲನು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಸರಿದುಕೊಂಡಿದ್ದರಿಂದ ಈಟಿಯು ಗೋಡೆಗೆ ನಾಟಿಕೊಂಡಿತು. ದಾವೀದನು ಆ ದಿನ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಹುಡುಕಿದನು. ಆದರೆ ದಾವೀದನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಅವನ ಈಟಿಯು ಗೋಡೆಯಲ್ಲಿ ಹತ್ತಿಕೊಳ್ಳುವಂತೆ ಹೊಡೆದನು. ದಾವೀದನು ಓಡಿಹೋಗಿ ಆ ರಾತ್ರಿಯಲ್ಲಿ ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:10
20 ತಿಳಿವುಗಳ ಹೋಲಿಕೆ  

ಕೂಡಲೆ ಸೌಲನು ಅವನನ್ನು ತಿವಿಯುವವನಂತೆ ಈಟಿಯನ್ನೆಸೆದನು. ತನ್ನ ತಂದೆ ನಿಜವಾಗಿಯೂ ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನನಿಗೆ ಅರಿವಾಯಿತು.


ಆಗ ಸೌಲನು, “ಗೋಡೆಗೆ ಕಚ್ಚಿಕೊಳ್ಳುವಂತೆ ಈ ದಾವೀದನನ್ನು ತಿವಿಯುವೆನು,” ಎಂದುಕೊಂಡು ಅವನತ್ತ ಈಟಿಯನ್ನು ಎರಡುಸಾರಿ ಎಸೆದನು. ಎರಡು ಸಾರಿಯೂ ದಾವೀದನು ತಪ್ಪಿಸಿಕೊಂಡನು.


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ಮತ್ತೊಮ್ಮೆ ಯೇಸುವನ್ನು ಬಂಧಿಸಲು ಆ ಯೆಹೂದ್ಯರು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡರು.


ಯೇಸುವಾದರೋ, ಅವರ ನಡುವೆಯೇ ನಡೆದು, ತಮ್ಮ ದಾರಿ ಹಿಡಿದುಹೋದರು.


ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.


ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ.


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು I ಹರಿದುಹೋಯಿತಿದೊ ಬಲೆಯು, ಹಾರಿಹೋದೆವು ನಾವು II


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ಬಿಡಿಸಿ ರಕ್ಷಿಸಿದನೆನ್ನಾ ಶತ್ರುಗಳಿಂದ I ನನಗಿಂತ ಪುಷ್ಟ, ಬಲಿಷ್ಟ ಹಗೆಗಳಿಂದ II


ಸೌಲನು ಯೋನಾತಾನನ ಮಾತುಗಳನ್ನು ಆಲಿಸಿದನು. “ಸರ್ವೇಶ್ವರನಾಣೆ, ಅವನನ್ನು ಕೊಲ್ಲುವುದಿಲ್ಲ,” ಎಂದು ಪ್ರಮಾಣಮಾಡಿದನು.


ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು.


ಅವರ ಕಾಲು ಕೇಡನ್ನು ಹಿಂಬಾಲಿಸಿ ಓಡುತ್ತವೆ ರಕ್ತಪಾತಕ್ಕಾಗಿ ಅವರು ತುಡಿಯುತ್ತಿರುತ್ತಾರೆ.


ಮಾರನೆಯ ದಿನ ದೇವರಿಂದ ಬಂದ ದುರಾತ್ಮವೊಂದು ಸೌಲನನ್ನು ಆವರಿಸಿತು. ಅವನು ಬುದ್ಧಿಗೆಟ್ಟು ಮನೆಯೊಳಗೇ ಕೂಗಾಡತೊಡಗಿದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ವಾಡಿಕೆಯ ಪ್ರಕಾರ ದಾವೀದನು ಕಿನ್ನರಿ ಬಾರಿಸುತ್ತಾ ಇದ್ದನು.


ದುಷ್ಟನಿಟ್ಟಿರುವನು ಕಣ್ಣನು ಸಜ್ಜನರ ಮೇಲೆ I ಹೊಂಚುಹಾಕಿ ನೋಡುತಿಹನು ಮಾಡಲವರ ಕೊಲೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು