Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:11 - ಕನ್ನಡ ಸತ್ಯವೇದವು C.L. Bible (BSI)

11 ಸೌಲನು ಕೂಡಲೆ ದೂತರನ್ನು ಕರೆಯಿಸಿ, “ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕು,” ಎಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀವು ಈ ರಾತ್ರಿಯೇ ತಪ್ಪಿಸಿಕೊಳ್ಳದೆ ಇದ್ದರೆ ನಾಳೆ ಬೆಳಿಗ್ಗೆ ಹತರಾಗುವಿರಿ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೌಲನು ಕೂಡಲೇ ದೂತರನ್ನು ಕರಿಸಿ ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೌಲನು ಕೂಡಲೆ ದೂತರನ್ನು ಕರಿಸಿ - ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ - ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸೌಲನು ದಾವೀದನ ಮನೆಗೆ ತನ್ನ ಜನರನ್ನು ಕಳುಹಿಸಿದನು. ಅವರು ದಾವೀದನ ಮನೆಯನ್ನು ಕಾಯ್ದರು. ಅವರು ರಾತ್ರಿಯೆಲ್ಲಾ ಅಲ್ಲಿಯೇ ಇದ್ದರು. ಅವರು ದಾವೀದನನ್ನು ಬೆಳಿಗ್ಗೆ ಕೊಲ್ಲಲು ಕಾಯುತ್ತಿದ್ದರು. ಆದರೆ ದಾವೀದನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯೇ ಓಡಿಹೋಗಿ, ನಿನ್ನ ಜೀವವನ್ನು ಕಾಪಾಡಿಕೋ. ಇಲ್ಲವಾದರೆ, ನಿನ್ನನ್ನು ಅವರು ಕೊಂದುಬಿಡುತ್ತಾರೆ” ಎಂದು ಎಚ್ಚರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ದಾವೀದನನ್ನು ಕಾದುಕೊಂಡಿದ್ದು, ಉದಯದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ, ನಾಳೆ ಹತನಾಗುವಿ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:11
5 ತಿಳಿವುಗಳ ಹೋಲಿಕೆ  

ಸಂಸೋನನು ಬಂದಿರುವುದು ಗಾಜಾದವರಿಗೆ ಗೊತ್ತಾಯಿತು? ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೇ ಅವನನ್ನು ಕೊಂದು ಹಾಕಬೇಕೆಂದುಕೊಂಡು ರಾತ್ರಿಯೆಲ್ಲಾ ಊರಬಾಗಿಲಲ್ಲೇ ಹೊಂಚುಹಾಕುತ್ತಾ ಸುಮ್ಮನಿದ್ದರು.


ಕೂಡಲೆ ಅವನನ್ನು ಹಿಡಿದುತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿಸಮೂಹವು ಪರವಶವಾಗಿ ಮಾತಾಡುವುದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನೂ ಕಂಡರು. ಆಗ ದೇವರ ಆತ್ಮ ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.


ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಪ್ಪಂದಮಾಡಿಕೊಳ್ಳುತ್ತೇನೆ; ಆದರೆ ನೀನು ಒಂದು ಕಾರ್ಯವನ್ನು ಮಾಡಬೇಕು; ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ ನೀನು ನನ್ನ ಮುಖವನ್ನು ನೋಡಕೂಡದು,” ಎಂದು ಉತ್ತರಕೊಟ್ಟನು.


ಆ ಜೆಸ್ಸೆಯನ ಮಗ ಭೂಲೋಕದಲ್ಲಿ ಇರುವವರೆಗೆ ನಿನಗಾಗಲಿ, ರಾಜನಾಗುವ ಹಕ್ಕುಬಾಧ್ಯತೆಗಳಿಗಾಗಲಿ ಉಳಿವಿಲ್ಲ. ಆದುದರಿಂದ ಹೋಗು, ಅವನನ್ನು ಕರೆಯಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು