Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:23 - ಕನ್ನಡ ಸತ್ಯವೇದವು C.L. Bible (BSI)

23 ಅವನು ಅಲ್ಲಿಂದ ರಾಮಾದ ಮಠಕ್ಕೆ ಹೋಗುವಾಗ ದೇವರ ಆತ್ಮ ಅವನ ಮೇಲೆಯೂ ಬಂದಿತು. ಅವನು ಆ ಊರನ್ನು ಮುಟ್ಟುವವರೆಗೆ ಪರವಶನಾಗಿ ಮಾತಾಡುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನು ಅಲ್ಲಿಂದ ರಾಮದ ನಯೋತಿಗೆ ಹೋಗುವಾಗ ದೇವರ ಆತ್ಮವು ಅವನ ಮೇಲೆಯೂ ಬಂದಿತು. ಅವನು ಆ ಊರನ್ನು ಮುಟ್ಟುವ ತನಕ ಪ್ರವಾದಿಸುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನು ಅಲ್ಲಿಂದ ರಾಮದ ಮಠಕ್ಕೆ ಹೋಗುವಾಗ ದೇವರ ಆತ್ಮವು ಅವನ ಮೇಲೆಯೂ ಬಂದಿತು. ಅವನು ಆ ಊರನ್ನು ಮುಟ್ಟುವವರೆಗೆ ಪರವಶನಾಗಿ ಮಾತಾಡುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಂತರ ಸೌಲನು ರಾಮದ ಹತ್ತಿರವಿರುವ ಪಾಳೆಯಕ್ಕೆ ಹೋದನು. ದೇವರಾತ್ಮವು ಸೌಲನ ಮೈಮೇಲೂ ಬಂದಿತು. ಅವನೂ ಪ್ರವಾದಿಸಲಾರಂಭಿಸಿದನು. ಸೌಲನು ರಾಮದ ಪಾಳೆಯದವರೆಗೂ ಪ್ರವಾದಿಸುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹಾಗೆಯೇ ಅವನು ರಾಮದ ನಯೋತಿಗೆ ಹೋದನು. ಆಗ ದೇವರ ಆತ್ಮ ಮೇಲೆ ಬರಲು, ಅವನು ರಾಮದ ನಯೋತಿಗೆ ಸೇರುವವರೆಗೂ ಪ್ರವಾದಿಸುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:23
14 ತಿಳಿವುಗಳ ಹೋಲಿಕೆ  

ಮನುಷ್ಯ ಮನಬಂದಂತೆ ಮಾರ್ಗವನ್ನಾರಿಸಿಕೊಂಡರೂ ಸರ್ವೇಶ್ವರನೇ ಅವನ ನಡತೆಯನ್ನು ಪರಾಂಬರಿಸುವವನು.


ಅವನು ದೇವಗಿರಿಗೆ ಬಂದ ಕೂಡಲೆ ಪರವಶರಾದ ಪ್ರವಾದಿಗಳ ಗುಂಪೊಂದು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮ ಅವನ ಮೇಲೆ ಇಳಿದು ಬಂದುದರಿಂದ ಅವನೂ ಪರವಶನಾಗಿ ಅವರೊಳಗೆ ಸೇರಿ ಪ್ರವಾದಿಸಿದನು.


ಕೂಡಲೆ ಅವನನ್ನು ಹಿಡಿದುತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿಸಮೂಹವು ಪರವಶವಾಗಿ ಮಾತಾಡುವುದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನೂ ಕಂಡರು. ಆಗ ದೇವರ ಆತ್ಮ ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.


ಕುಲಗಳ ಅನುಸಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಯೇಲರು ಅವನಿಗೆ ಕಾಣಿಸಿದರು.


ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ಇದನ್ನು ಅವನು ತಾನಾಗಿಯೇ ಹೇಳಲಿಲ್ಲ. ಆ ವರ್ಷ ಆತನು ಪ್ರಧಾನಯಾಜಕನಾಗಿದ್ದ ಕಾರಣ, ಯೇಸು ಜನತೆಗಾಗಿ ಪ್ರಾಣತ್ಯಾಗ ಮಾಡಲಿದ್ದಾರೆ ಎಂದು ಹೀಗೆ ಪ್ರವಾದಿಸಿದನು.


ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ಸರ್ವೇಶ್ವರ ಬಿಳಾಮನಿಗೆ ಹೇಳಬೇಕಾದುದನ್ನು ಹೇಳಿ, “ನೀನು ಬಾಲಾಕನ ಬಳಿಗೆ ಹಿಂದಿರುಗಿ ಹೋಗಿ ನಾನು ಹೇಳಿದ್ದನ್ನು ತಿಳಿಸು,” ಎಂದು ಆಜ್ಞಾಪಿಸಿದರು.


ಆಗ ಸರ್ವೇಶ್ವರನ ಆತ್ಮ ನಿನ್ನ ಮೇಲೆ ಬರುವುದು. ನೀನೂ ಮಾರ್ಪಟ್ಟು ಪ್ರವಾದಿಸುವೆ.


ಆಗ ಆ ಸ್ಥಳೀಯರಲ್ಲಿ ಒಬ್ಬನು, “ಹಾಗಾದರೆ ಇವರ ತಂದೆ ಯಾರು?” ಎಂದು ಕೇಳಿದನು. ಈ ಘಟನೆಯಿಂದಾಗಿ, “ಏನು, ಸೌಲನೂ ಪ್ರವಾದಿಯಾಗಿಬಿಟ್ಟನೊ?” ಎಂಬ ಗಾದೆ ಹುಟ್ಟಿತು.


ಮಾರನೆಯ ದಿನ ದೇವರಿಂದ ಬಂದ ದುರಾತ್ಮವೊಂದು ಸೌಲನನ್ನು ಆವರಿಸಿತು. ಅವನು ಬುದ್ಧಿಗೆಟ್ಟು ಮನೆಯೊಳಗೇ ಕೂಗಾಡತೊಡಗಿದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ವಾಡಿಕೆಯ ಪ್ರಕಾರ ದಾವೀದನು ಕಿನ್ನರಿ ಬಾರಿಸುತ್ತಾ ಇದ್ದನು.


ಹೀಗೆ ದಾವೀದನು ತಪ್ಪಿಸಿಕೊಂಡು ರಾಮಾದಲ್ಲಿದ್ದ ಸಮುವೇಲನ ಬಳಿಗೆ ಬಂದನು. ಸೌಲನು ತನಗೆ ಮಾಡಿದ್ದೆಲ್ಲವನ್ನೂ ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ಒಂದು ಮಠದಲ್ಲಿ ವಾಸವಾಗಿ ಇದ್ದರು.


ಆಗ ಸೌಲನು ತಾನೇ ರಾಮಾಕ್ಕೆ ಹೋಗಬೇಕೆಂದು ಹೊರಟು ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, “ಸಮುವೇಲ ಹಾಗು ದಾವೀದನು ಎಲ್ಲಿರುತ್ತಾರೆ?” ಎಂದು ವಿಚಾರಿಸಿದನು. ಜನರು, “ರಾಮಾದ ಮಠದಲ್ಲಿ ಇದ್ದಾರೆ,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು