Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:24 - ಕನ್ನಡ ಸತ್ಯವೇದವು C.L. Bible (BSI)

24 ಅಲ್ಲಿಗೆ ಸೇರಿದ ಮೇಲೆ, ಅವನೂ ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪರವಶನಾಗಿ ಮಾತಾಡುತ್ತಾ ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಆದುದರಿಂದ “ಏನು, ಸೌಲನೂ ಪ್ರವಾದಿಯಾಗಿಬಿಟ್ಟನೋ?” ಎಂಬ ಗಾದೆಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಲ್ಲಿಗೆ ಸೇರಿದ ಮೇಲೆ ಅವನು ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪ್ರವಾದಿಸುತ್ತಾ, ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಇದರಿಂದ “ಸೌಲನೂ ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ” ಎಂಬ ಮಾತು ಪ್ರಚಲಿತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅಲ್ಲಿಗೆ ಸೇರಿದ ಮೇಲೆ ಅವನೂ ತನ್ನ ಬಟ್ಟೆಗಳನ್ನು ತೆಗೆದು ಹಾಕಿ ಸಮುವೇಲನ ಮುಂದೆ ಪರವಶನಾಗಿ ಮಾತಾಡುತ್ತಾ ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಆದದರಿಂದ - ಸೌಲನೂ ಪ್ರವಾದಿಗಳಲ್ಲಿದ್ದಾನೋ ಎಂಬ ಗಾದೆಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಂತರ ಸೌಲನು ತಾನು ಧರಿಸಿದ್ದ ಬಟ್ಟೆಗಳನ್ನು ತೆಗೆದುಹಾಕಿದನು. ಸಮುವೇಲನ ಎದುರಿನಲ್ಲಿ ಸೌಲನೂ ಸಹ ಪ್ರವಾದಿಸುತ್ತಿದ್ದನು. ಅಂದು ಹಗಲು ರಾತ್ರಿಯೆಲ್ಲ ಸೌಲನು ಬೆತ್ತಲೆಯಾಗಿ ಅಲ್ಲಿಯೇ ಮಲಗಿದ್ದನು. ಆದ್ದರಿಂದಲೇ ಜನರು, “ಸೌಲನೂ ಪ್ರವಾದಿಗಳಲ್ಲಿ ಒಬ್ಬನೇ?” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ, ತಾನೂ ಹಾಗೆಯೇ ಸಮುಯೇಲನ ಮುಂದೆ ಪ್ರವಾದಿಸಿದನು. ಆ ದಿನ ಹಗಲೆಲ್ಲವೂ, ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದ್ದರಿಂದ, “ಸೌಲನು ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ?” ಎಂಬ ಮಾತು ಪ್ರಚಲಿತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:24
10 ತಿಳಿವುಗಳ ಹೋಲಿಕೆ  

ಆಗ ಮೀಕನು: “ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು; ಬೆತ್ತಲೆಯಾಗಿ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವೆನು; ಗುಳ್ಳೆನರಿಗಳಂತೆ ಊಳಿಡುವೆನು, ಗೂಬೆಯಂತೆ ಘೂಂಕರಿಸುವೆನು.


ಅದಕ್ಕೆ ಮೂರು ವರ್ಷಗಳಿಗೆ ಮುಂಚೆಯೆ ಆಮೋಚನ ಮಗ ಯೆಶಾಯನಿಗೆ ಸರ್ವೇಶ್ವರ ಮುನ್ಸೂಚನೆಯಾಗಿ ಹೀಗೆಂದು ಹೇಳಿದ್ದರು : “ಎದ್ದೇಳು, ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು, ಕಾಲಿಗೆ ಹಾಕಿರುವ ಕೆರವನ್ನು ಕಳಚು.” ಅಂತೆಯೇ ಯೆಶಾಯನು ದಿಗಂಬರನಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.


ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದಳು. “ಈ ದಿನ ಇಸ್ರಯೇಲರ ಅರಸರು ಎಂಥ ಅಗೌರವದಿಂದ ನಡೆದುಕೊಂಡರು! ಹುಚ್ಚರಲ್ಲಿ ಒಬ್ಬರಂತೆ ತಮ್ಮ ಜನಸಾಮಾನ್ಯರಾದ ದಾಸಿಯರ ಮುಂದೆ ಬೆತ್ತಲೆಯಾಗಿದ್ದರಲ್ಲಾ!” ಎಂದಳು.


ಅವನ ಬೋಧನೆಯನ್ನು ಕೇಳಿದವರೆಲ್ಲರೂ ಚಕಿತರಾದರು. “ಜೆರುಸಲೇಮಿನಲ್ಲಿ ಯೇಸುವಿನ ನಾಮಸ್ಮರಣೆ ಮಾಡುತ್ತಿದ್ದವರನ್ನು ಬಲಿಹಾಕುತ್ತಿದ್ದವನು ಇವನೇ ಅಲ್ಲವೇ? ಅಂಥವರನ್ನು ಬಂಧಿಸಿ ಮುಖ್ಯಯಾಜಕರ ಬಳಿಗೆ ಎಳೆದೊಯ್ಯುವ ಉದ್ದೇಶದಿಂದಲೇ ಅಲ್ಲವೆ ಇವನು ಇಲ್ಲಿಗೆ ಬಂದಿರುವುದು?” ಎಂದು ಪ್ರಶ್ನಿಸತೊಡಗಿದರು.


ದಾವೀದನು ಏಫೋದೆಂಬ ನಾರುಮಡಿಯನ್ನು ಮಾತ್ರ ಉಟ್ಟುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ಪೂರ್ಣಾವೇಶದಿಂದ ಕುಣಿದಾಡಿದನು.


ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವ್ಯಕ್ತಿಯ ವಾಣಿ.


ಆಗ ಸರ್ವೇಶ್ವರನ ಆತ್ಮ ನಿನ್ನ ಮೇಲೆ ಬರುವುದು. ನೀನೂ ಮಾರ್ಪಟ್ಟು ಪ್ರವಾದಿಸುವೆ.


ಸಮುವೇಲನು ಜೀವದಿಂದಿರುವವರೆಗೂ ಸೌಲನನ್ನು ನೋಡಲು ಹೋಗಲಿಲ್ಲ. ಸೌಲನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ಸರ್ವೇಶ್ವರ ವಿಷಾದಿಸಿದರು; ಈ ಕಾರಣ ಸಮುವೇಲನು ಅವನ ವಿಷಯದಲ್ಲಿ ದುಃಖಪಡುತ್ತಿದ್ದನು.


ಮಾರನೆಯ ದಿನ ದೇವರಿಂದ ಬಂದ ದುರಾತ್ಮವೊಂದು ಸೌಲನನ್ನು ಆವರಿಸಿತು. ಅವನು ಬುದ್ಧಿಗೆಟ್ಟು ಮನೆಯೊಳಗೇ ಕೂಗಾಡತೊಡಗಿದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ವಾಡಿಕೆಯ ಪ್ರಕಾರ ದಾವೀದನು ಕಿನ್ನರಿ ಬಾರಿಸುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು