Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:5 - ಕನ್ನಡ ಸತ್ಯವೇದವು C.L. Bible (BSI)

5 ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯರನ್ನು ಕೊಂದನು; ಸರ್ವೇಶ್ವರ ಇಸ್ರಯೇಲರಿಗೆ ಮಹಾ ಜಯವನ್ನುಂಟುಮಾಡಿದರು. ನೀವೂ ಅದನ್ನು ನೋಡಿ ಸಂತೋಷಪಟ್ಟಿರಿ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿ ಅಪರಾಧಕ್ಕೆ ನೀವೇಕೆ ಗುರಿ ಆಗುತ್ತೀರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯನನ್ನು ಕೊಂದನು; ಯೆಹೋವನು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಫಿಲಿಷ್ಟಿಯನನ್ನು ಹೊಡೆದನು. ಯೆಹೋವ ದೇವರು ಸಮಸ್ತ ಇಸ್ರಾಯೇಲರಿಗೋಸ್ಕರ ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ನೀನೂ ಕಂಡು ಸಂತೋಷಪಟ್ಟೆ. ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರ್ದೋಷಿಯ ರಕ್ತಕ್ಕೆ ವಿರೋಧವಾಗಿ ಅಪರಾಧವನ್ನು ಮಾಡುವುದೇಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:5
26 ತಿಳಿವುಗಳ ಹೋಲಿಕೆ  

ಆಗ ಅವನೂ ಅವನ ಸಂಗಡಿಗರೂ ಹೊಲದ ಮಧ್ಯದಲ್ಲಿ ನಿಂತುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಕಾದಾಡಿದರು. ಸರ್ವೇಶ್ವರ ಅವನಿಗೆ ಮಹಾಜಯವನ್ನು ದಯಪಾಲಿಸಿದರು.


“ಸರ್ವೇಶ್ವರ ಈ ದಿನ ಇಸ್ರಯೇಲರಿಗೆ ಜಯವನ್ನುಂಟುಮಾಡಿರುವರು. ಆದ್ದರಿಂದ ಯಾರನ್ನೂ ಕೊಲ್ಲಬಾರದು,” ಎಂದು ಹೇಳಿದನು.


“ನಾನು ನಿರ್ದೋಷಿಯನ್ನು ಹಿಡಿದುಕೊಟ್ಟು ಪಾಪಕಟ್ಟಿಕೊಂಡೆ,” ಎಂದು ಹೇಳಿದನು. ಅದಕ್ಕೆ ಅವರು, ಅದರಿಂದ ನಮಗೇನು? ಅದನ್ನು ನೀನೇ ನೋಡಿಕೋ,’ ಎಂದುಬಿಟ್ಟರು.


ಅದಕ್ಕೆ ಯೋನಾತಾನನು, “ಅವನು ಏಕೆ ಸಾಯಬೇಕು? ಅವನು ಏನು ಮಾಡಿದ್ದಾನೆ?” ಎಂದು ತಂದೆಯನ್ನು ಕೇಳಿದನು.


ನನ್ನ ತಂದೆ ತನ್ನ ಪ್ರಾಣಾಶೆಯನ್ನು ತೊರೆದು ಹೋರಾಡಿ ನಿಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದನಲ್ಲವೆ?


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಕೈಯಲಿ ಜೀವ ಹಿಡಿದು ಕಳೆಯುತಿರುವೆ ಕಾಲವೆಲ್ಲ I ಆದರೂ ಪ್ರಭು, ನಾ ಧರ್ಮಶಾಸ್ತ್ರವನು ಮರೆತಿಲ್ಲ II


ಆ ಸ್ತ್ರೀ ಸೌಲನ ಹತ್ತಿರಕ್ಕೆ ಬಂದು ಅವನು ಬಹುಭೀತನಾಗಿದ್ದಾನೆಂದು ಕಂಡು, “ನಿಮ್ಮ ದಾಸಿಯಾದ ನಾನು ನಿಮ್ಮ ಮಾತು ಕೇಳಿದೆನು; ಕೈಯಲ್ಲಿ ಜೀವ ಹಿಡಿದವಳಾಗಿ ನಿಮ್ಮ ಅಪ್ಪಣೆಯನ್ನು ನೆರವೇರಿಸಿದೆನು.


ಕ್ರಿಸ್ತಯೇಸುವಿನ ಸೇವೆಯಲ್ಲಿ ಅವನು ಸತ್ತು ಬದುಕಿದ್ದಾನೆ. ನೀವು ಕೊಡಲು ಸಾಧ್ಯವಾಗದೆ ಹೋದ ನೆರವನ್ನು ಅವನು ನನಗೆ ಕೊಟ್ಟು ಸೇವೆಯನ್ನು ಪೂರ್ಣಗೊಳಿಸಿದ್ದಾನೆ.


“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


ಪಿಲಾತನು ತನ್ನ ಪ್ರಯತ್ನದಿಂದ ಏನೂ ಫಲಿಸುತ್ತಿಲ್ಲವೆಂದೂ ಅದಕ್ಕೆ ಬದಲಾಗಿ ದಂಗೆ ಏಳುವ ಸೂಚನೆಯಿದೆಯೆಂದೂ ಮನಗಂಡನು. ಆದುದರಿಂದ ನೀರನ್ನು ತರಿಸಿ, “ಈ ನಿರಪರಾಧಿಯ ರಕ್ತಪಾತಕ್ಕೆ ಹೊಣೆ ನಾನಲ್ಲ; ಅದಕ್ಕೆ ನೀವೇ ಹೊಣೆಗಾರರು,” ಎಂದು ಹೇಳಿ ಜನರೆದುರಿಗೆ ಕೈ ತೊಳೆದುಕೊಂಡನು.


ಆದರೆ ಒಂದು ವಿಷಯ ನಿಮಗೆ ಚೆನ್ನಾಗಿ ತಿಳಿದಿರಲಿ - ನೀವು ನನ್ನನ್ನು ಕೊಂದುಹಾಕಿದ್ದೇ ಆದರೆ, ನಿರ್ದೋಷಿಯ ರಕ್ತ ಸುರಿಸಿದ ಅಪರಾಧಕ್ಕೆ ನೀವೂ ಈ ನಗರವೂ ಇದರ ನಿವಾಸಿಗಳೂ ಗುರಿಯಾಗುವಿರಿ. ಏಕೆಂದರೆ ಈ ಮಾತುಗಳನ್ನೆಲ್ಲ ನಿಮ್ಮ ಕಿವಿಗೆ ಮುಟ್ಟಿಸುವಂತೆ ನನ್ನನ್ನು ಕಳಿಸಿದವರು ಸರ್ವೇಶ್ವರ ಎಂಬುದು ಸತ್ಯ,” ಎಂದು ಹೇಳಿದನು.


ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II


ಜನರು ಅವನಿಗೆ, “ದೇವರ ಸಹಾಯದಿಂದ ಈ ದಿನ ಇಸ್ರಯೇಲರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೇ? ಕೂಡದು; ಸರ್ವೇಶ್ವರನಾಣೆ. ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು,” ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು.


ನೀವು ಸಹಾಯ ಮಾಡುವುದಿಲ್ಲ ಎಂದು ತಿಳಿದು ಪ್ರಾಣವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆ; ಸರ್ವೇಶ್ವರ ಅವರನ್ನು ನನ್ನ ಕೈಗೆ ಒಪ್ಪಿಸಿದರು. ಹೀಗಿರಲು, ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಕೊಟ್ಟನು.


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ಆಗಲಿ ಆಶಾಭಂಗ ನಿನ್ನೆದುರಾಳಿಗಳಿಗೆ I ಹಾಗಾಗದಿರಲಿ ನಿನ್ನ ನಿರೀಕ್ಷಿಸುವವರಿಗೆ II


ಸೌಲನು ಯೋನಾತಾನನ ಮಾತುಗಳನ್ನು ಆಲಿಸಿದನು. “ಸರ್ವೇಶ್ವರನಾಣೆ, ಅವನನ್ನು ಕೊಲ್ಲುವುದಿಲ್ಲ,” ಎಂದು ಪ್ರಮಾಣಮಾಡಿದನು.


ಅಹೀಮೆಲೆಕನು, “ನಿಮ್ಮ ಎಲ್ಲಾ ಸೇವಕರಲ್ಲಿ, ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾರಿದ್ದಾನೆ? ದಾವೀದನು ನಿಮ್ಮ ಆಲೋಚಕರಲ್ಲೊಬ್ಬನೂ ತಮ್ಮ ಮನೆಯವರಲ್ಲಿ ಗೌರವಾನ್ವಿತನೂ ಆಗಿದ್ದಾನಲ್ಲವೇ?


ಇಸ್ರಯೇಲರು ಹೋದನಂತರ ಇವನು ಅಲ್ಲೇ ನಿಂತು, ಕತ್ತಿ ಹಿಡಿದು ಕೈಸೋತು ಮರಗಟ್ಟಿಹೋಗುವ ತನಕ, ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನ ಸರ್ವೇಶ್ವರ ಮಹಾಜಯವನ್ನುಂಟುಮಾಡಲು ಇಸ್ರಯೇಲರು ಸುಲಿದುಕೊಳ್ಳುವುದಕ್ಕಾಗಿಯೇ, ಹಿಂದಿರುಗಿದ್ದರು.


ಹೊಂಚುಹಾಕುವರವರು ನೀತಿವಂತರ ಪ್ರಾಣಕೆ I ಮರಣಶಿಕ್ಷೆ ವಿಧಿಸುವರವರು ನಿರಪರಾಧಿಗಳಿಗೆ II


ಪ್ರಸಿದ್ಧರಾದ ಮೂವರು ರಣವೀರರು ಫಿಲಿಷ್ಟಿಯರ ಪಾಳೆಯವನ್ನು ಹಾದುಹೋಗಿ ಬಾವಿಯಿಂದ ನೀರನ್ನು ಸೇದಿಕೊಂಡು ದಾವೀದನಿಗೆ ತಂದುಕೊಟ್ಟರು. “ನಾನು ಈ ನೀರನ್ನು ಎಂದೆಂದಿಗೂ ಕುಡಿಯಬಾರದು. ಇದನ್ನು ಕುಡಿದರೆ, ತಮ್ಮ ಪ್ರಾಣಗಳನ್ನೇ ಪಣವಾಗಿಟ್ಟ ಈ ಮೂವರ ರಕ್ತವನ್ನು ಕುಡಿದಂತಾಗುವುದು,” ಎಂದು ಹೇಳಿ,


ಉಪಕಾರಕ್ಕೆ ಅಪಕಾರವನ್ನೆಸಗಿಹರು I ಗೆಳೆತನಕ್ಕೆ ಹಗೆತನವನ್ನೇ ತೋರಿಹರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು