Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರೆದುತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲೇ ಇರುವಂತೆ ಏರ್ಪಾಡಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೋನಾತಾನನು ದಾವೀದನನ್ನು ಕರೆದು, ಅವನಿಗೆ ಈ ಮಾತುಗಳನ್ನು ತಿಳಿಸಿ, ಸೌಲನ ಬಳಿಗೆ ಕರೆದುಕೊಂಡು ಬಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಎಲ್ಲವನ್ನೂ ತಿಳಿಸಿದನು. ಬಳಿಕ ಯೋನಾತಾನನು ದಾವೀದನನ್ನು ಸೌಲನ ಹತ್ತಿರಕ್ಕೆ ಕರೆದುಕೊಂಡು ಬಂದನು. ದಾವೀದನು ಮೊದಲಿನಂತೆ ಸೌಲನ ಜೊತೆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೋನಾತಾನನು ದಾವೀದನನ್ನು ಕರೆದು, ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ, ದಾವೀದನನ್ನು ಸೌಲನ ಬಳಿಗೆ ಕರೆತಂದನು. ಅವನು ಮುಂಚಿನ ಹಾಗೆಯೇ ಸೌಲನ ಬಳಿಯಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:7
10 ತಿಳಿವುಗಳ ಹೋಲಿಕೆ  

ಅವನನ್ನು ತನ್ನ ಸಾನ್ನಿಧ್ಯ ಸೇವೆಯಿಂದ ತೆಗೆದು ಸೈನ್ಯದ ಒಬ್ಬ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ದಾವೀದನು ದಳಪತಿಯಾಗಿ ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇದ್ದನು.


ಅಂದಿನಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೂ ಹೋಗಗೊಡದೆ ತನ್ನ ಬಳಿಯಲ್ಲೇ ಇಟ್ಟುಕೊಂಡನು.


ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿದನು, ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.


ಮಾರನೆಯ ದಿನ ದೇವರಿಂದ ಬಂದ ದುರಾತ್ಮವೊಂದು ಸೌಲನನ್ನು ಆವರಿಸಿತು. ಅವನು ಬುದ್ಧಿಗೆಟ್ಟು ಮನೆಯೊಳಗೇ ಕೂಗಾಡತೊಡಗಿದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ವಾಡಿಕೆಯ ಪ್ರಕಾರ ದಾವೀದನು ಕಿನ್ನರಿ ಬಾರಿಸುತ್ತಾ ಇದ್ದನು.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಅರಸ ಸೌಲ ನಮ್ಮನ್ನು ಆಳುತ್ತಿದ್ದಾಗ ನೀವು ಇಸ್ರಯೇಲರ ದಳಪತಿಯಾಗಿ ಯುದ್ಧ ನಡೆಸಿದಿರಿ. ನಮ್ಮ ದೇವರಾದ ಸರ್ವೇಶ್ವರ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ” ಎಂದು ಹೇಳಿ ವಂದಿಸಿದರು.


ಆದರೆ ಮೋಶೆ ಸರ್ವೇಶ್ವರನಿಗೆ, “ಸ್ವಾಮಿ, ನಾನು ವಾಕ್ಚಾತುರ್ಯ ಇಲ್ಲದವನು; ಮೊದಲಿನಿಂದಲೂ ಹಾಗು ತಾವು ನಿಮ್ಮ ದಾಸನ ಸಂಗಡ ಮಾತಾಡಿದ ಮೇಲೆಯೂ ಹಾಗೆಯೇ ಇದ್ದೇನೆ. ನನ್ನ ಮಾತು ತೊದಲು, ನನ್ನ ನಾಲಿಗೆ ಮಂದ,” ಎಂದನು.


ಇದಲ್ಲದೆ, ಯಕೋಬನ ಕಣ್ಣಿಗೆ ಲಾಬಾನನ ಮನೋಭಾವವು ಮೊದಲಿದ್ದಂತೆ ತೋರಲಿಲ್ಲ.


ಸೌಲನು ಯೋನಾತಾನನ ಮಾತುಗಳನ್ನು ಆಲಿಸಿದನು. “ಸರ್ವೇಶ್ವರನಾಣೆ, ಅವನನ್ನು ಕೊಲ್ಲುವುದಿಲ್ಲ,” ಎಂದು ಪ್ರಮಾಣಮಾಡಿದನು.


ಫಿಲಿಷ್ಟಿಯರು ಮತ್ತೆ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಪೂರ್ತಿಯಾಗಿ ಸೋಲಿಸಿ ಓಡಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು