Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:1 - ಕನ್ನಡ ಸತ್ಯವೇದವು C.L. Bible (BSI)

1 ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹನ್ನಳು ದೇವರ ಬಳಿ ಹೀಗೆ ವಿಜ್ಞಾಪಿಸಿದಳು, “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ಧೈರ್ಯವಾಗಿ ಮಾತನಾಡುತ್ತದೆ, ಯಾಕೆಂದರೆ ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹನ್ನಳ ವಿಜ್ಞಾಪನೆ - ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ತೆರೆದಿರುವದು. ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹನ್ನಳು ಇಂತೆಂದಳು: “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ. ನಾನು ನನ್ನ ದೇವರಾದ ಯೆಹೋವನಲ್ಲಿ ಬಲಶಾಲಿಯಾಗಿದ್ದೇನೆ. ನಾನು ನನ್ನ ಶತ್ರುಗಳ ಬಗ್ಗೆ ನಗುವೆನು. ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹನ್ನಳು ಪ್ರಾರ್ಥಿಸಿ ಹೇಳಿದ್ದೇನೆಂದರೆ, “ನನ್ನ ಹೃದಯವು ಯೆಹೋವ ದೇವರಲ್ಲಿ ಸಂತೋಷಿಸಿತು. ನನ್ನ ಕೊಂಬು ಯೆಹೋವ ದೇವರಲ್ಲಿ ಉನ್ನತವಾಯಿತು. ನನ್ನ ಶತ್ರುಗಳ ಮುಂದೆ ನನ್ನ ಬಾಯಿ ಹೆಚ್ಚಳಪಟ್ಟಿತು. ಏಕೆಂದರೆ ನಾನು ನಿಮ್ಮ ರಕ್ಷಣೆಯಲ್ಲಿ ಹರ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:1
37 ತಿಳಿವುಗಳ ಹೋಲಿಕೆ  

ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II


ಅವರ ಶಕ್ತಿಸಾಮರ್ಥ್ಯದ ಪ್ರತಿಭೆ ನಿನ್ನದೆ I ನಿನ್ನ ದಯೆಯಿಂದ ನಮಗೆ ಕೋಡುಮೂಡಿದೆ II


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ಜಯಘೋಷ ಮಾಡುವೆವು, ನಿನ್ನ ಗೆಲುವಿನ ನಿಮಿತ್ತ I ಧ್ವಜ ಹಾರಿಪೆವು, ಎಮ್ಮ ದೇವನ ನಾಮದ ನಿಮಿತ್ತ I ನಿನ್ನ ಕೋರಿಕೆಗಳೆಲ್ಲವನು, ಕೈಗೂಡಿಸಲಿ ಆತ II


ಆಗ ಸಿಯೋನ್ ನಗರಿಯ ದ್ವಾರದಲೆ ನಿಲ್ಲುವೆನು I ನಿನ್ನ ಗುಣಾತಿಶಯಗಳನು ಪ್ರಸಿದ್ಧಪಡಿಸುವೆನು I ನೀನಿತ್ತ ಮುಕ್ತಿಗಾಗಿ ಆನಂದಗೊಳ್ಳುವೆನು II


ಆಗೆನ್ನ ಮನವು ಆನಂದಗೊಳ್ಳುವುದು ಪ್ರಭುವಿನಲಿ I ಆಹ್ಲಾದಗೊಳ್ಳುವುದು ಆತನಿತ್ತಾ ರಕ್ಷಣೆಯಲಿ II


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆಪಡುತ್ತೇವೆ.


ಸಂತೋಷಿಸುವೆ ನಾನು ಸರ್ವೇಶ್ವರನಲಿ ಆನಂದಿಸುವೆ ನನ್ನ ಉದ್ಧಾರಕ ದೇವನಲಿ.


ಪ್ರಭುವೇ ನನಗೆ ಬಲವು, ಧೈರ್ಯವು I ಆತನಿಂದಲೇ ನನಗೆ ಉದ್ಧಾರವು II


ನಿನ್ನ ಪ್ರೀತಿಸತ್ಯತೆಗಳು ಇರುವುವು ಅವನೊಂದಿಗೆ I ನನ್ನ ನಾಮ ಪ್ರಯುಕ್ತ ಕೋಡು ಮೂಡುವುದವನಿಗೆ II


ಮಿರ್ಯಾಮಳು ಅವರ ಹಾಡಿಗೆ ಈ ಪಲ್ಲವಿಯನ್ನು ಕೂಡಿಸಿದಳು: ಮಾಡಿರಿ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕಡಲಲ್ಲಿ ಕೆಡವಿ ನಾಶಮಾಡಿಹನು ಕುದುರೆಗಳನು, ರಾಹುತರನು


ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕುದುರೆಗಳನು ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ತೆರೆವಂತೆ ಮಾಡು ಪ್ರಭು ನನ್ನ ತುಟಿಗಳನು I ಸಾರುವುದೆನ್ನ ಬಾಯಿ ನಿನ್ನ ನುಡಿಗಳನು II


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಸರ್ವೇಶ್ವರಾ, ಕೇಳಿರುವೆ ನಿನ್ನ ಕೀರ್ತಿಯನು ಬೆರಗಾದೆ ಕೇಳಿ ನಿನ್ನ ಮಹತ್ಕಾರ್ಯವನು.


ಕತ್ತರಿಸುವನು ಕೆಡುಕರ ಕೋರೆಕೋಡುಗಳನು I ಎತ್ತರಿಸುವನು ಸಜ್ಜನರ ಕೋರೆಕೊಂಬುಗಳನು II


ನಿನ್ನ ಗುಣಗಾನ ನನ್ನ ಬಾಯ್ತುಂಬ I ನಿನ್ನ ಘೋಷಣೆ ನನಗೆ ದಿನವಾದ್ಯಂತ II


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು I ನಮಗೊಬ್ಬ ಶಕ್ತಿಯುತ ಮುಕ್ತಿದಾತನನು II


ಮೀಕನ ಮಗ ಜಬ್ದೀಯ ಮೊಮ್ಮಗ, ಆಸಾಫನ ಮರಿಮಗ ಪ್ರಾರ್ಥನಾ ಸಮಯದಲ್ಲಿ ಕೃತಜ್ಞತಾ ಸ್ತುತಿಮಾಡಿರಿ ಎಂದು ಹೇಳಿ ಭಜಕರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ‍ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನು; ಗಾಲಾಲನ ಮೊಮ್ಮಗನು, ಯೆದೂತೂನನ ಮರಿಮಗನು ಆದ ಅಬ್ದ ಎಂಬವರು.


ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”


ಗೋಣಿತಟ್ಟನ್ನು ಹೊಲಿದು ಮೈಗೆ ಹಾಕಿಕೊಂಡಿರುವೆ ನನ್ನ ಕೊಂಬನ್ನು ಬೂದಿಯೊಳಗೆ ಬಾಗಿಸಿಟ್ಟಿರುವೆ.


ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ I ಖ್ಯಾತಿ ತಂದಿಹನು ತನ್ನ ಭಕ್ತಾದಿಗಳಿಗೆ I ತನ್ನ ಆಪ್ತಜನರಾದ ಇಸ್ರಯೇಲರಿಗೆ I ಅಲ್ಲೆಲೂಯ! II


ಇದಲ್ಲದೆ, “ಸರ್ವೇಶ್ವರ ನಿನ್ನನ್ನು ಬಂಜೆಯಾಗಿ ಮಾಡಿದ್ದಾರೆ,” ಎಂಬ ಚುಚ್ಚು ಮಾತುಗಳಿಂದ ನೋಯಿಸುತ್ತಿದ್ದಳು ಅವಳ ಸವತಿಯಾದ ಪೆನಿನ್ನಳು.


ವರ್ಷ ವರ್ಷವೂ ಇದು ಹಾಗೆಯೆ ನಡೆಯುತ್ತಿತ್ತು; “ಸರ್ವೇಶ್ವರನ ಮಂದಿರಕ್ಕೆ ಹೋದಾಗಲೆಲ್ಲ ಪೆನಿನ್ನಳು ಹನ್ನಳನ್ನು ಕೆಣಕುತ್ತಿದ್ದಳು. ಇದರಿಂದಾಗಿ ಒಮ್ಮೆ ಹನ್ನಳು ಊಟ ಮಾಡಲೊಲ್ಲದೆ ಅಳುತ್ತಾ ಇದ್ದಳು.


ಆಮೇಲೆ ಯೆಹೂದ್ಯರು, ಜೆರುಸಲೇಮಿನವರು, ಅವರ ಮುಂಗಡೆಯಲ್ಲಿ ಯೆಹೋಷಾಫಾಟನು, ಸರ್ವೇಶ್ವರ ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾರೆಂದು ಜಯಘೋಷ ಮಾಡುತ್ತಾ ಜೆರುಸಲೇಮಿಗೆ ಹಿಂದಿರುಗಿದರು.


ಆತನ ಮನದಾಸೆಯನು ನೀ ಪೂರೈಸಿದೆ I ಆತನಧರ ಬಯಕೆಯನು ಅನುಗ್ರಹಿಸಿದೆ II


ಗುರಾಣಿಯಂತಿಹ ನಮ್ಮ ರಾಜನು ಪ್ರಭುವಿನವನೇ I ಇಸ್ರಯೇಲಿನ ಪರಮಪಾವನ ಸ್ವಾಮಿಗೆ ಸೇರಿದವನೇ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು