Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:10 - ಕನ್ನಡ ಸತ್ಯವೇದವು C.L. Bible (BSI)

10 ಚದರಿಹೋಗುವರು ಸರ್ವೇಶ್ವರನ ವಿರೋಧಿಗಳು ಆಗಸದಿಂದಾತ ಅವರ ವಿರುದ್ಧ ಗರ್ಜಿಸಲು! ನ್ಯಾಯ ತೀರಿಸುವನಾತ ಜಗದ ಕಟ್ಟಕಡೆಯವರೆಗೆ ಶಕ್ತಿಸಾಮರ್ಥ್ಯವನೀವನು ತಾ ನೇಮಿಸಿದರಸನಿಗೆ ಏರಿಸುವನು ತನ್ನಭಿಷಿಕ್ತನ ಒಲುಮೆಯನು ಉನ್ನತಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಯೆಹೋವನನ್ನು ವಿರೋಧಿಸುವವರು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂಮಿಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇಮಿಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನ ವಿರೋಧಿಗಳು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂವಿುಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇವಿುಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ತನ್ನ ಶತ್ರುಗಳನ್ನು ನಾಶಗೊಳಿಸುವನು. ಮಹೋನ್ನತನಾದ ದೇವರು ಪರಲೋಕದಲ್ಲಿ ಜನರಿಗೆ ವಿರುದ್ಧವಾಗಿ ಗುಡುಗುವನು. ಯೆಹೋವನು ಬಹುದೂರದ ದೇಶಗಳಿಗೂ ತೀರ್ಪನ್ನು ಕೊಡುವನು. ಆತನು ತನ್ನ ರಾಜನಿಗೆ ಶಕ್ತಿಯನ್ನು ಕೊಡುವನು. ತಾನು ಅಭಿಷೇಕಿಸಿದ ರಾಜನನ್ನು ಬಲಗೊಳಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರ ಸಂಗಡ ವಿವಾದಿಸುವವರು ಚದರಿಹೋಗುವರು. ಅವರು ಆಕಾಶದಲ್ಲಿಂದ ಅವರ ಮೇಲೆ ಗುಡುಗುವರು, ಯೆಹೋವ ದೇವರು ಲೋಕಾಂತ್ಯದವರೆಗೂ ನ್ಯಾಯತೀರಿಸುವರು. “ತಮ್ಮ ಅರಸನಿಗೆ ಬಲ ಕೊಡುವರು. ತಮ್ಮ ಅಭಿಷಿಕ್ತನ ಕೊಂಬನ್ನು ಉನ್ನತ ಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:10
50 ತಿಳಿವುಗಳ ಹೋಲಿಕೆ  

ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II


ನಿನ್ನ ಪ್ರೀತಿಸತ್ಯತೆಗಳು ಇರುವುವು ಅವನೊಂದಿಗೆ I ನನ್ನ ನಾಮ ಪ್ರಯುಕ್ತ ಕೋಡು ಮೂಡುವುದವನಿಗೆ II


ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ! ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ!


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ಒದಗುವನು ಪ್ರಭುವು ಅಭಿಷಿಕ್ತನಿಗೆ I ಓಗೊಡುವನು ಸ್ವರ್ಗದಿಂದಾತನಿಗೆ I ಗೆಲುವನೀವನು ಭುಜಬಲದಿಂದವನಿಗೆ II


ಹೇಗೆಂದರೆ, ಸಮುವೇಲನು ಬಲಿಯನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕಾಗಿ ಸಮೀಪಿಸಿದರು. ಸರ್ವೇಶ್ವರ ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ, ಇಸ್ರಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ಅರಸಗೆ ಹರ್ಷವಾಯಿತು ಪ್ರಭು, ನೀ ತೋರಿದ ಪರಾಕ್ರಮಕ್ಕಾಗಿ I ಪರಮಾನಂದಗೊಂಡನವನು, ನೀನಿತ್ತ ವಿಜಯೋತ್ಸವಕ್ಕಾಗಿ II


ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


“ಅಂತೆಯೇ, ನಿಮ್ಮ ಪರಮಪೂಜ್ಯದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು.


ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು I ನಮಗೊಬ್ಬ ಶಕ್ತಿಯುತ ಮುಕ್ತಿದಾತನನು II


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ಇಗೋ, ರಾಜನೊಬ್ಬನು ನೀತಿಗನುಸಾರ ರಾಜ್ಯವಾಳುವನು. ದೇಶಾಧಿಪತಿಗಳು ನ್ಯಾಯದಿಂದ ದೊರೆತನಮಾಡುವರು.


ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ I ಖ್ಯಾತಿ ತಂದಿಹನು ತನ್ನ ಭಕ್ತಾದಿಗಳಿಗೆ I ತನ್ನ ಆಪ್ತಜನರಾದ ಇಸ್ರಯೇಲರಿಗೆ I ಅಲ್ಲೆಲೂಯ! II


ಅವರ ಶಕ್ತಿಸಾಮರ್ಥ್ಯದ ಪ್ರತಿಭೆ ನಿನ್ನದೆ I ನಿನ್ನ ದಯೆಯಿಂದ ನಮಗೆ ಕೋಡುಮೂಡಿದೆ II


ಪ್ರಭುವೆ ತನ್ನ ಪ್ರಜೆಯ ಪ್ರಾಬಲ್ಯವು I ತನ್ನಭಿಷಿಕ್ತನಿಗೆ ಆಶ್ರಯ ದುರ್ಗವು II


ದೇವರಾದ ನನಗಿರುವಂಥ ಭುಜಬಲ ನಿನಗಿದೆಯೋ? ನನ್ನ ಧ್ವನಿಗೆ ಸಮನಾಗಿ ನೀನು ಗುಡುಗಬಲ್ಲೆಯೋ?


ಗುಡುಗಿದನು ಸರ್ವೇಶ್ವರ ಗಗನಮಂಡಲದಿಂದ ಮೊಳಗಿತು ವಾಣಿ ಆ ಪರಮೋನ್ನತನಿಂದ.


ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


“ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆಯೆಂದು ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.


ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


ಆಗ ಸಮುವೇಲನು ಅವನಿಗೆ, “ಸರ್ವೇಶ್ವರ ಈ ದಿನ ಇಸ್ರಯೇಲ್ ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮವಾದ ಇನ್ನೊಬ್ಬನಿಗೆ ಕೊಟ್ಟಿದ್ದಾರೆ.


ಅಂತೆಯೇ ಸಮುವೇಲನು ಮೊರೆ ಇಡಲು ಸರ್ವೇಶ್ವರ ಗುಡುಗು ಮಳೆಗಳನ್ನು ಕಳುಹಿಸಿದರು. ಜನರೆಲ್ಲರು ಸರ್ವೇಶ್ವರನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು,


“ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸ ಇವನೇ; ಸರ್ವೇಶ್ವರ ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ.


ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಗುಡುಗು, ಭೂಕಂಪ, ಮಹಾಗರ್ಜನೆ, ಬಿರುಗಾಳಿ, ಚಂಡಮಾರುತ, ಭಸ್ಮಮಾಡುವಂಥ ಅಗ್ನಿಜ್ವಾಲೆ - ಇವುಗಳ ಮೂಲಕ ಸರ್ವೇಶ್ವರ ನಿನ್ನ ಪರವಾಗಿ ಪ್ರತ್ಯಕ್ಷವಾಗುವರು.


“ಆ ದಿನದಲ್ಲಿ ನಾನು ಇಸ್ರಯೇಲ್ ವಂಶಕ್ಕೆ ಕೋಡುಮೂಡಿಸಿ ಆ ವಂಶದವರ ಮಧ್ಯೆ ನಿನ್ನ ಬಾಯನ್ನು ಬಿಚ್ಚುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಖಚಿತವಾಗುವುದು.


ನಾನು ಸರ್ವೇಶ್ವರನಿಗೆ ಮೊರೆಯಿಡುತ್ತೇನೆ; ಈಗ ಗೋದಿಯ ಸುಗ್ಗಿಕಾಲವಾಗಿದ್ದರೂ ಗುಡುಗನ್ನೂ ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತಮ್ಮ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬುದನ್ನು ಅವರು ತೋರಿಸಿಕೊಡುವರು,” ಎಂದು ಅವರಿಗೆ ಹೇಳಿದನು.


ಹೆಚ್ಚಳಪಡುತಿಹರು ಕೆಲವರು ರಥಗಳಲಿ, ಹಲವರು ಅಶ್ವಗಳಲಿ I ಹೆಮ್ಮೆಪಡುತಿಹೆವು ನಾವಾದರೋ, ನಮ್ಮ ದೇವರ ನಾಮದಲಿ II


ತೊರೆನದಿಗಳಿಂದ ಸಾಗರದವರೆಗೆ I ಅಧಿಕಾರ ನೀಡುವೆ ಅವನ ಕೈಗೆ II


ಕೋಡೊಂದು ಮೂಡುವಂತೆ ಮಾಡುವೆ ದಾವೀದನಿಗಿಲ್ಲೆ I ನಂದಾದೀಪ ಬೆಳಗುವಂತೆ ಮಾಡುವೆ ನನ್ನ ಅಭಿಷಿಕ್ತನಿಗಿಲ್ಲೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು