Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:14 - ಕನ್ನಡ ಸತ್ಯವೇದವು C.L. Bible (BSI)

14 ಅದನ್ನು ಮಾಂಸ ಬೇಯುತ್ತಿದ್ದ ಕೊಪ್ಪರಿಗೆಯಲ್ಲಾಗಲಿ, ಭಾಂಡದಲ್ಲಾಗಲಿ, ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದೆಲ್ಲವನ್ನು ಯಾಜಕನಿಗೆಂದು ಹೇಳಿ ತೆಗೆದುಕೊಳ್ಳುತ್ತಿದ್ದನು. ಶಿಲೋವಿಗೆ ಬರುವ ಇಸ್ರಯೇಲರೆಲ್ಲರಿಗು ಹೀಗೆಯೇ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡಲ್ಲಾಗಲಿ (ದೊಡ್ಡ ಹಂಡೆ), ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೆಂದು ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುತ್ತಿದ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದನ್ನು ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡದಲ್ಲಾಗಲಿ, ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೋಸ್ಕರ ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯಾಜಕರ ಸೇವಕನು ತ್ರಿಶೂಲವನ್ನು ಕೊಪ್ಪರಿಗೆಯಲ್ಲಾಗಲಿ ತಪ್ಪಲೆಯಲ್ಲಾಗಲಿ ಗಡಿಗೆಯಲ್ಲಾಗಲಿ ಭಾಂಡದಲ್ಲಾಗಲಿ ಚುಚ್ಚಿ ಹೊರ ತೆಗೆದಾಗ, ಅದರೊಂದಿಗೆ ಬರುವ ಮಾಂಸವನ್ನು ಮಾತ್ರ ಯಾಜಕನು ಸ್ವೀಕರಿಸಬೇಕು. ಶೀಲೋವಿಗೆ ಯಜ್ಞವನ್ನರ್ಪಿಸಲು ಬರುವ ಎಲ್ಲ ಇಸ್ರೇಲರೊಂದಿಗೆ ಇದೇ ರೀತಿ ಮಾಡಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದನ್ನು ತಪ್ಪಲೆಯಲ್ಲಾಗಲಿ, ಪಾತ್ರೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವುದನ್ನೆಲ್ಲಾ ಯಾಜಕನು ತನಗೆ ತೆಗೆದುಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲರಿಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:14
9 ತಿಳಿವುಗಳ ಹೋಲಿಕೆ  

ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.


ಆದರೆ ನನ್ನ ಪ್ರಜೆ ಇಸ್ರಯೇಲರು ನನ್ನ ಆಜ್ಞಾನುಸಾರ ನನ್ನ ಮಂದಿರಕ್ಕೆ ತರುವ ಬಲಿದಾನಗಳ ಹಾಗು ನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿದ್ದೀರಿ. ಅವುಗಳ ಶ್ರೇಷ್ಠಭಾಗಗಳಿಂದ ನಿಮ್ಮನ್ನೇ ಕೊಬ್ಬಿಸಿಕೊಳ್ಳುತ್ತಿದ್ದೀರಿ; ಏಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೇ?


ಶಾಂತಿಸಮಾಧಾನದ ಬಲಿಪ್ರಾಣಿಯ ಮಾಂಸದಲ್ಲಿ ನೈವೇದ್ಯರೂಪವಾಗಿ ಆರತಿಯೆತ್ತುವ ಎದೆಯ ಭಾಗವನ್ನು ಮತ್ತು ಯಾಜಕನಿಗಾಗಿ ಪ್ರತ್ಯೇಕಿಸುವ ತೊಡೆಯನ್ನು ಸರ್ವೇಶ್ವರ ಇಸ್ರಯೇಲ್ ಜನರಿಂದ ತೆಗೆದುಕೊಂಡು ಮಹಾಯಾಜಕ ಆರೋನನಿಗೂ ಅವನ ವಂಶಜರಿಗೂ ಕೊಟ್ಟು, ಅದು ಶಾಶ್ವತ ನಿಯಮವಾಗಿ ಅವರಿಗೆ ಸಲ್ಲುವಂತೆ ಮಾಡಿದ್ದಾರೆ.


“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಬಲಿಯರ್ಪಿಸುವುದಕ್ಕೆ ಬಂದ ಜನರಲ್ಲೂ ಯಾಜಕರಾದ ಇವರು ಸರಿಯಾಗಿ ವರ್ತಿಸುತ್ತಿರಲಿಲ್ಲ; ಬಲಿಮಾಂಸ ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲ ಹಿಡಿದು ಬರುತ್ತಿದ್ದನು.


ಇದಲ್ಲದೆ, ಕೊಬ್ಬನ್ನು ಹೋಮಮಾಡುವುದಕ್ಕೆ ಮುಂಚೆಯೇ ಯಾಜಕನ ಆಳು ಬಂದು ಬಲಿಯರ್ಪಿಸುತ್ತಿದ್ದವನಿಗೆ, “ಹುರಿಯತಕ್ಕ ಮಾಂಸವನ್ನು ಯಾಜಕನಿಗೆ ಕೊಡು; ನೀವು ಬೇಯಿಸಿದ ಮಾಂಸವನ್ನು ಅವರು ತೆಗೆದುಕೊಳ್ಳುವುದಿಲ್ಲ; ಅವರಿಗೆ ಹಸಿ ಮಾಂಸವೇ ಬೇಕು,” ಎನ್ನುತ್ತಿದ್ದನು.


ನನ್ನ ಪ್ರಜೆಯ ಮೈ ಚರ್ಮವನ್ನು ಸುಲಿಯುವುದಲ್ಲದೆ ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಆವಿಗೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು