Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:15 - ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ, ಕೊಬ್ಬನ್ನು ಹೋಮಮಾಡುವುದಕ್ಕೆ ಮುಂಚೆಯೇ ಯಾಜಕನ ಆಳು ಬಂದು ಬಲಿಯರ್ಪಿಸುತ್ತಿದ್ದವನಿಗೆ, “ಹುರಿಯತಕ್ಕ ಮಾಂಸವನ್ನು ಯಾಜಕನಿಗೆ ಕೊಡು; ನೀವು ಬೇಯಿಸಿದ ಮಾಂಸವನ್ನು ಅವರು ತೆಗೆದುಕೊಳ್ಳುವುದಿಲ್ಲ; ಅವರಿಗೆ ಹಸಿ ಮಾಂಸವೇ ಬೇಕು,” ಎನ್ನುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವುದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ, “ಯಾಜಕನಿಗೋಸ್ಕರ ಸುಡತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವುದಿಲ್ಲ; ಅವನಿಗೆ ಹಸಿಮಾಂಸವೇ ಬೇಕು” ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ - ಯಾಜಕನಿಗೋಸ್ಕರ ಕರಿಯತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವದಿಲ್ಲ; ಅವನಿಗೆ ಹಸೀ ಮಾಂಸವೇ ಬೇಕು ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಏಲಿಯ ಮಕ್ಕಳು ಈ ರೀತಿ ಮಾಡುತ್ತಿರಲಿಲ್ಲ. ಯಜ್ಞವೇದಿಕೆಯ ಮೇಲೆ ಕೊಬ್ಬನ್ನು ಹೋಮ ಮಾಡುವುದಕ್ಕಿಂತ ಮೊದಲೇ ಅವರ ಸೇವಕರು ಯಜ್ಞಗಳನ್ನು ಅರ್ಪಿಸುವ ಜನರ ಬಳಿಗೆ ಹೋಗುತ್ತಿದ್ದರು. ಯಾಜಕನ ಸೇವಕನು, “ಯಾಜಕನಿಗೆ ಕರಿದು ಕೊಡಲು ಸ್ವಲ್ಪ ಮಾಂಸವನ್ನು ಕೊಡಿ. ಬೇಯಿಸಿದ ಮಾಂಸವನ್ನು ಯಾಜಕನು ನಿಮ್ಮಿಂದ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಕೊಬ್ಬನ್ನು ಬಲಿ ಅರ್ಪಿಸುವುದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು, ಬಲಿಯನ್ನು ಅರ್ಪಿಸುವವನ ಸಂಗಡ, “ಯಾಜಕನಿಗೆ ಸುಡುವುದಕ್ಕೆ ಮಾಂಸವನ್ನು ಕೊಡು. ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತೆಗೆದುಕೊಳ್ಳುವುದಿಲ್ಲ. ಅದು ಹಸಿಯಾಗಿರಬೇಕು,” ಎನ್ನುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:15
8 ತಿಳಿವುಗಳ ಹೋಲಿಕೆ  

ಯಾಜಕನು ಅದನ್ನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸುಗಂಧಹೋಮ ರೂಪವಾಗಿ ಸರ್ವೇಶ್ವರನಿಗೆ ಆಹಾರವಾಗಿರುವುದು. ಬಲಿಪ್ರಾಣಿಗಳ ಕೊಬ್ಬೆಲ್ಲವು ಸರ್ವೇಶ್ವರನದು.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ತಮ್ಮ ಮಿತಿಮೀರಿದ ಮದ್ಯಪಾನಾಸಕ್ತಿಯಿಂದ ನಿಮ್ಮ ಪ್ರೇಮಭೋಜನ ಕೂಟಗಳಲ್ಲಿ ಇವರು ಕಳಂಕಪ್ರಾಯರಾಗಿದ್ದಾರೆ. ತಮ್ಮ ಕುರಿಗಳನ್ನು ತೊರೆದು ಹೊಟ್ಟೆಹೊರೆದುಕೊಳ್ಳುವ ಕುರುಬರಂತಿದ್ದಾರೆ. ಇವರು ಬಿರುಗಾಳಿಗೆ ಚದುರಿಹೋಗುವ ನೀರಿಲ್ಲದ ಮೋಡಗಳು; ಎಲೆಗಳು ಉದುರಿ, ಫಲಬಿಡದೆ, ಬಾಡಿಹೋಗಿ, ಬೇರುಸಹಿತ ಕಿತ್ತುಬೀಳುವ ಶರತ್ಕಾಲದ ಮರಗಳು;


ಅದನ್ನು ಹಸಿಯಾಗಿಯೋ ಅಥವಾ ನೀರಿನಲ್ಲಿ ಬೇಯಿಸಿಯೋ ತಿನ್ನಕೂಡದು. ಅದನ್ನೆಲ್ಲಾ, ತಲೆ, ಕಾಲು, ಒಳ ಭಾಗಗಳ ಸಹಿತವಾಗಿ, ಬೆಂಕಿಯಲ್ಲಿ ಸುಟ್ಟೇ ತಿನ್ನಬೇಕು.


ಅದನ್ನು ಮಾಂಸ ಬೇಯುತ್ತಿದ್ದ ಕೊಪ್ಪರಿಗೆಯಲ್ಲಾಗಲಿ, ಭಾಂಡದಲ್ಲಾಗಲಿ, ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದೆಲ್ಲವನ್ನು ಯಾಜಕನಿಗೆಂದು ಹೇಳಿ ತೆಗೆದುಕೊಳ್ಳುತ್ತಿದ್ದನು. ಶಿಲೋವಿಗೆ ಬರುವ ಇಸ್ರಯೇಲರೆಲ್ಲರಿಗು ಹೀಗೆಯೇ ಮಾಡುತ್ತಿದ್ದರು.


ಬಲಿಯರ್ಪಿಸುತ್ತಿದ್ದವನು ಅವನಿಗೆ, “ಮೊದಲು ಕೊಬ್ಬನ್ನು ಹೋಮಮಾಡೋಣ; ಅನಂತರ ನಿನಗೆ ಬೇಕಾದುದನ್ನು ತೆಗೆದುಕೊಳ್ಳುವಿಯಂತೆ,” ಎಂದು ಹೇಳಿದಾಗ, “ಕೂಡದು, ಈಗಲೇ ಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುತ್ತೇನೆ,” ಎಂದು ಪೀಡಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು