Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:18 - ಕನ್ನಡ ಸತ್ಯವೇದವು C.L. Bible (BSI)

18 ಬಾಲಕನಾದ ಸಮುವೇಲನು ‘ಏಫೋದ’ ಎಂಬ ಪ್ರತ್ಯೇಕ ಮಡಿಯಂಗಿಯನ್ನು ತೊಟ್ಟುಕೊಂಡು ಸರ್ವೇಶ್ವರನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬಾಲಕನಾದ ಸಮುವೇಲನು ಏಫೋದೆಂಬ ನಾರುಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಬಾಲಕನಾದ ಸಮುವೇಲನು ಏಫೋದ್ ಎಂಬ ನಾರುಬಟ್ಟೆಯನ್ನು ಧರಿಸಿ ಯೆಹೋವನ ಸೇವೆ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಬಾಲಕನಾದ ಸಮುಯೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಯೆಹೋವ ದೇವರ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:18
9 ತಿಳಿವುಗಳ ಹೋಲಿಕೆ  

ಬಾಲಕ ಸಮುವೇಲನು ಏಲಿಯ ನೇತೃತ್ವದಲ್ಲಿ ಸರ್ವೇಶ್ವರನ ಸೇವೆಮಾಡುತ್ತಾ ಬಂದನು. ಆ ಕಾಲದಲ್ಲಿ ದೇವೋಕ್ತಿಗಳು ವಿರಳ ಆಗಿದ್ದವು; ದೇವದರ್ಶನಗಳು ಅಪರೂಪವಾಗಿಬಿಟ್ಟಿದ್ದವು.


ತಯಾರಿಸಬೇಕಾದ ವಸ್ತ್ರಗಳು ಇವು: ಎದೆಕವಚ, ಏಫೋದ್ ಕವಚ, ಮೇಲಂಗಿ, ಕಸೂತಿ ನಿಲುವಂಗಿ, ಗುರುಪೇಟ ಮತ್ತು ನಡುಕಟ್ಟು, ನಿನ್ನ ಅಣ್ಣ ಆರೋನನು ಮತ್ತು ಅವನ ಮಕ್ಕಳು ನನ್ನ ಯಾಜಕರಾಗಿ ಸೇವೆ ಮಾಡುವಂತೆ ಅವರಿಗೆ ಈ ದೀಕ್ಷಾವಸ್ತ್ರಗಳನ್ನು ಮಾಡಿಸು.


ಎಲ್ಕಾನನು ರಾಮಾದಲ್ಲಿದ್ದ ತನ್ನ ಮನೆಗೆ ಹಿಂದಿರುಗಿದನು. ಹುಡುಗ ಸಮುವೇಲನು ಯಾಜಕ ಏಲಿಯನ ಕೈಕೆಳಗಿದ್ದು ಸರ್ವೇಶ್ವರನ ಸೇವೆಮಾಡುತ್ತಾ ಬಂದನು.


ದಾವೀದನು ಏಫೋದೆಂಬ ನಾರುಮಡಿಯನ್ನು ಮಾತ್ರ ಉಟ್ಟುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ಪೂರ್ಣಾವೇಶದಿಂದ ಕುಣಿದಾಡಿದನು.


ಆದುದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು,” ಎಂದು ಆಜ್ಞಾಪಿಸಿದನು. ಅವನು ನಾರುಮಡಿಯ ಏಫೋದನ್ನು ಧರಿಸಿಕೊಂಡಿದ್ದ ಎಂಬತ್ತೈದು ಮಂದಿ ಯಾಜಕರನ್ನು ಆ ದಿವಸ ಕೊಂದುಹಾಕಿದನು.


ದಾವೀದನು, ಮಂಜೂಷ ಹೊತ್ತವರು, ವಾದ್ಯ ಬಾರಿಸುವವರು ಹಾಗು ಅವರ ನಾಯಕ ಕೆನನ್ಯನು ಅತ್ಯುತ್ತಮ ನೂಲಿನಿಂದ ತಯಾರಿಸಿದ ನಿಲುವಂಗಿಗಳನ್ನು ಧರಿಸಿದ್ದರು. ದಾವೀದನು ಏಫೋದನ್ನು ಕೂಡ ಧರಿಸಿಕೊಂಡಿದ್ದನು.


ಇಸ್ರಯೇಲರ ಕುಟುಂಬಗಳಲ್ಲೆಲ್ಲಾ ಅವರನ್ನೇ, ಯಾಜಕ ಸೇವಾವೃತ್ತಿಗೆ ಆರಿಸಿಕೊಂಡೆ: ಅಂದರೆ, ಬಲಿಯರ್ಪಿಸುವುದಕ್ಕೆ, ಧೂಪಾರತಿ ಎತ್ತುವುದಕ್ಕೆ ಹಾಗು ‘ಏಫೋದ’ನ್ನು ಧರಿಸಿಕೊಳ್ಳುವುದಕ್ಕೆ ಆರಿಸಿಕೊಂಡೆ; ಇಸ್ರಯೇಲರು ಅರ್ಪಿಸುವ ಬಲಿಶೇಷದ ಹಕ್ಕನ್ನೂ ಅವರಿಗೆ ಅನುಗ್ರಹಿಸಿದೆ.


ಆಮೇಲೆ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿಸಿ, ಅದರಿಂದ ಅವನ ಕವಚವನ್ನು ಕಟ್ಟಿ,


‘ಏಫೋದ’ನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದನು. ಈ ಅಹೀಯನು ಶಿಲೋವಿನಲ್ಲಿ ಸರ್ವೇಶ್ವರನ ಯಾಜಕನಾಗಿದ್ದ ಏಲಿಯ ಮರಿಮಗನೂ ಫೀನೆಹಾಸನ ಮೊಮ್ಮಗನೂ ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು