Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:20 - ಕನ್ನಡ ಸತ್ಯವೇದವು C.L. Bible (BSI)

20 ಎಲ್ಕಾನನಿಗೆ ಏಲಿ, “ನೀನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟ ಈ ಮಗನಿಗೆ ಬದಲಾಗಿ ಈ ಹನ್ನಳಿಂದ ನಿನಗೆ ಬೇರೆ ಮಕ್ಕಳಾಗಲಿ!” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಏಲಿಯು ಎಲ್ಕಾನನಿಗೆ, “ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಏಲಿಯು ಎಲ್ಕಾನನಿಗೆ - ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ತಿರಿಗಿ ಸ್ವಸ್ಥಳಕ್ಕೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಏಲಿಯು ಎಲ್ಕಾನನನ್ನು ಮತ್ತು ಅವನ ಹೆಂಡತಿಯಾದ ಹನ್ನಳನ್ನು ಆಶೀರ್ವದಿಸಿ, “ಹನ್ನಳು ಯೆಹೋವನನ್ನು ಪ್ರಾರ್ಥಿಸಿ ಪಡೆದ ಮಗನನ್ನು ಆತನಿಗೆ ಒಪ್ಪಿಸಿದ್ದರಿಂದ ಯೆಹೋವನು ಅವಳಿಗೆ ಬೇರೆ ಮಕ್ಕಳನ್ನು ಅನುಗ್ರಹಿಸಲಿ” ಎಂದು ಹೇಳಿದನು. ಆಮೇಲೆ ಎಲ್ಕಾನ ಮತ್ತು ಹನ್ನ ಮನೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಏಲಿಯು ಎಲ್ಕಾನನನ್ನೂ, ಅವನ ಹೆಂಡತಿಯನ್ನೂ, “ಯೆಹೋವ ದೇವರಿಗೆ ಸಮರ್ಪಿಸಿಬಿಟ್ಟ ಈ ಮಗನಿಗೆ ಬದಲಾಗಿ ಈ ಹನ್ನಳಿಂದ ಯೆಹೋವ ದೇವರು ನಿನಗೆ ಬೇರೆ ಮಕ್ಕಳನ್ನು ದಯಪಾಲಿಸಲಿ,” ಎಂದು ಆಶೀರ್ವದಿಸುತ್ತಿದ್ದನು. ಅನಂತರ ಅವರು ತಿರುಗಿ ತಮ್ಮ ಮನೆಗೆ ಹಿಂದಿರುಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:20
9 ತಿಳಿವುಗಳ ಹೋಲಿಕೆ  

ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


ಆಗ ಊರಿನ ಹಿರಿಯರು ಮತ್ತು ನೆರೆದಿದ್ದ ಸಭಿಕರು: “ಹೌದು, ನಾವೆಲ್ಲರೂ ಸಾಕ್ಷಿಗಳು. ಇಸ್ರಯೇಲಿನ ಮನೆತನವನ್ನು ವೃದ್ಧಿಗೊಳಿಸಿದ ರಾಹೆಲ್ ಮತ್ತು ಲೆಯಾ ಎಂಬ ಕುಲೀನೆಯರನ್ನು ಸರ್ವೇಶ್ವರ ಆಶೀರ್ವದಿಸಲಿ! ಎಫ್ರಾತ ಕುಲದಲ್ಲಿ ಧನವಂತನಾಗು;


ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.


“ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!”


ದೇವರು ನಿನ್ನ ಮತ್ತು ಆಕೆಯ ತನುಮನಗಳನ್ನು ಒಂದಾಗಿ ಮಾಡಲಿಲ್ಲವೆ? ಅವರ ಉದ್ದೇಶವಾದರೂ ಏನಾಗಿತ್ತು? ದೇವರ ಮಕ್ಕಳಾಗಿ ಬಾಳುವ ಸಂತಾನಪ್ರಾಪ್ತಿಯೇ ಅವರ ಉದ್ದೇಶವಾಗಿತ್ತು. ಆದಕಾರಣ ಯೌವ್ವನದಲ್ಲಿ ಮಡದಿಗೆ ದ್ರೋಹವೆಸಗದಂತೆ, ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು