Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:21 - ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರನ ಅನುಗ್ರಹ ಹನ್ನಳಿಗೆ ಲಭಿಸಿತು. ಆಕೆಗೆ ಮೂರು ಗಂಡು, ಇಬ್ಬರು ಹೆಣ್ಣು ಮಕ್ಕಳಾದುವು. ಬಾಲಕ ಸಮುವೇಲನು ಸರ್ವೇಶ್ವರನ ಸನ್ನಿಧಿಯಲ್ಲಿ ಬೆಳೆದು ದೊಡ್ಡವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ಕಟಾಕ್ಷಿಸಿದ್ದರಿಂದ ಹನ್ನಳಿಗೆ ಮೂರು ಮಂದಿ ಗಂಡುಮಕ್ಕಳೂ, ಇಬ್ಬರು ಹೆಣ್ಣುಮಕ್ಕಳಾದರು. ಬಾಲಕನಾಗಿದ್ದ ಸಮುವೇಲನು ಯೆಹೋವನ ಸನ್ನಿಧಿಯಲ್ಲೇ ಬೆಳೆದು ದೊಡ್ಡವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ಕಟಾಕ್ಷಿಸಿದದರಿಂದ ಹನ್ನಳಿಗೆ ಮೂರು ಮಂದಿ ಗಂಡು ಮಕ್ಕಳೂ ಇಬ್ಬರು ಹೆಣ್ಣುಮಕ್ಕಳೂ ಆದರು. ಬಾಲಕನಾಗಿದ್ದ ಸಮುವೇಲನು ಯೆಹೋವನ ಸನ್ನಿಧಿಯಲ್ಲೇ ದೊಡ್ಡವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನು ಹನ್ನಳಿಗೆ ದಯೆತೋರಿದನು. ಅವಳಿಗೆ ಮೂರು ಮಂದಿ ಗಂಡುಮಕ್ಕಳೂ ಇಬ್ಬರು ಹೆಣ್ಣುಮಕ್ಕಳೂ ಆದರು. ಬಾಲಕನಾದ ಸಮುವೇಲನು ಯೆಹೋವನ ಸನ್ನಿಧಿಯಲ್ಲಿ ದೊಡ್ಡವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹಾಗೆಯೇ ಯೆಹೋವ ದೇವರು ಹನ್ನಳಿಗೆ ಕೃಪೆ ತೋರಿಸಿದ್ದರಿಂದ, ಅವಳು ಗರ್ಭಧರಿಸಿ ಮೂವರು ಪುತ್ರರನ್ನೂ, ಇಬ್ಬರು ಪುತ್ರಿಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುಯೇಲನು ಯೆಹೋವ ದೇವರ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:21
11 ತಿಳಿವುಗಳ ಹೋಲಿಕೆ  

ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನ ಸಂಪೂರ್ಣರೂ ಆದರು. (ಇದಲ್ಲದೆ) ದೈವಾನುಗ್ರಹ ಅವರ ಮೇಲಿತ್ತು.


ಸರ್ವೇಶ್ವರ ಸ್ವಾಮಿ ತಾವು ಹೇಳಿದ್ದಂತೆಯೇ ಸಾರಳಿಗೆ ನೆರವಾದರು. ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದರು.


ಸಮುವೇಲನು ದೊಡ್ಡವನಾಗುತ್ತಾ ಬಂದನು. ಸರ್ವೇಶ್ವರ ಅವನೊಡನೆ ಇದ್ದರು. ಆದುದರಿಂದಲೆ ಅವನು ಪ್ರವಾದನೆ ಮಾಡಿದವುಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.


ಬಾಲಕ ಸಮುವೇಲ ಈ ಮಧ್ಯೆ ಬೆಳೆಯುತ್ತಾ ಸರ್ವೇಶ್ವರನ ಹಾಗು ಮಾನವರ ಪ್ರೀತಿಗೆ ಪಾತ್ರನಾಗುತ್ತಿದ್ದನು.


ಆ ಮಹಿಳೆ ಒಬ್ಬ ಮಗನನ್ನು ಹೆತ್ತು ಅವನಿಗೆ ‘ಸಂಸೋನ’ ಎಂದು ಹೆಸರಿಟ್ಟಳು. ಹುಡುಗ ಬೆಳೆದು ದೊಡ್ಡವನಾದ. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು.


ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನಲ್ಲೇ ವಾಸಿಸುತ್ತಿದ್ದನು.


ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II


ಯೇಸು ಬೆಳೆದಂತೆ ಜ್ಞಾನದಲ್ಲಿ ಪ್ರವರ್ಧಿಸುತ್ತಾ ದೇವರಿಗೂ ಮಾನವರಿಗೂ ಅಚ್ಚುಮೆಚ್ಚಾಗುತ್ತಾ ಬಂದರು.


ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II


ಆಗ ದೇವರಿಗೂ ಮಾನವರಿಗೂ ಪ್ರಿಯನಾಗುವೆ, ದಯೆ ದಾಕ್ಷಿಣ್ಯವನ್ನು ಪಡೆಯುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು