Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:23 - ಕನ್ನಡ ಸತ್ಯವೇದವು C.L. Bible (BSI)

23 ಆದುದರಿಂದ ಅವರಿಗೆ, “ಜನರೆಲ್ಲರು ನಿಮ್ಮ ದುಷ್ಕೃತ್ಯಗಳ ಬಗ್ಗೆ ದೂರುವುದನ್ನು ಕೇಳಿದ್ದೇನೆ. ಹೀಗೇಕೆ ಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರಿಗೆ, “ಎಲ್ಲಾ ಜನರಿಂದಲೂ ನಿಮ್ಮ ದುಷ್ಕೃತ್ಯಗಳನ್ನು ಕೇಳುತ್ತೇನೆ. ಹೀಗೇಕೆ ಮಾಡುತ್ತೀರಿ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಎಲ್ಲಾ ಜನರಿಂದಲೂ ನಿಮ್ಮ ದುಷ್ಕೃತ್ಯಗಳನ್ನು ಕೇಳುತ್ತಿರುತ್ತೇನೆ. ಯಾಕೆ ಹೀಗೆ ಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಏಲಿಯು ತನ್ನ ಗಂಡುಮಕ್ಕಳಿಗೆ, “ಇಲ್ಲಿಯ ಜನರು ನೀವು ಮಾಡುವ ದುಷ್ಕೃತ್ಯಗಳ ಬಗ್ಗೆ ತಿಳಿಸಿದ್ದಾರೆ. ನೀವು ಇಂತಹ ದುಷ್ಕೃತ್ಯಗಳನ್ನು ಏಕೆ ಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ನೀವು ಇಂಥಾ ಕಾರ್ಯಗಳನ್ನು ಮಾಡುವುದೇನು? ನಾನು ಎಲ್ಲ ಜನರಿಂದ ಈ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:23
9 ತಿಳಿವುಗಳ ಹೋಲಿಕೆ  

ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.


ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


ಈಗ ಏಲಿ ಬಹಳ ಮುದುಕನಾಗಿದ್ದ. ತನ್ನ ಮಕ್ಕಳು ಇಸ್ರಯೇಲ್ ಜನರಿಗೆ ಮಾಡುತ್ತಿದ್ದುದೆಲ್ಲಾ ಅವನ ಕಿವಿಗೆ ಬೀಳುತ್ತಿತ್ತು. ದೇವದರ್ಶನದ ಗುಡಾರದ ಬಾಗಿಲಿನಲ್ಲಿ ಕೆಲಸಮಾಡುತ್ತಿದ್ದ ಸ್ತ್ರೀಯರೊಡನೆ ಮಲಗುತ್ತಿದ್ದಾರೆಂಬುದನ್ನೂ ಕೇಳಿದ್ದ.


ಮಕ್ಕಳೇ, ಹೀಗೆ ಮಾಡಬಾರದು. ನೀವು ಸರ್ವೇಶ್ವರನ ಜನರನ್ನು ದುರ್ಮಾರ್ಗಕ್ಕೆ ಎಳೆಯುತ್ತಿದ್ದೀರೆಂದು ಕೇಳಿದ್ದೇನೆ. ಇದು ಸರಿಯಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು