Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:27 - ಕನ್ನಡ ಸತ್ಯವೇದವು C.L. Bible (BSI)

27 ಒಂದು ದಿನ ದೇವಭಕ್ತನೊಬ್ಬನು ಏಲಿಯ ಬಳಿಗೆ ಬಂದು, ಸರ್ವೇಶ್ವರನಿಂದ ಬಂದ ಈ ಸಮಾಚಾರವನ್ನು ತಿಳಿಸಿದನು: “ಇಸ್ರಯೇಲರು ಈಜಿಪ್ಟಿನಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವನು ನಿನಗೆ ಹೇಳುವುದೇನಂದರೆ, ‘ಇಸ್ರಾಯೇಲರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ - ಯೆಹೋವನು ನಿನಗೆ ಹೇಳುವದೇನಂದರೆ - ಇಸ್ರಾಯೇಲ್ಯರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದೇವಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು, “ಯೆಹೋವನು ಈ ಸಂಗತಿಗಳನ್ನು ತಿಳಿಸಿದನು: ‘ನಿನ್ನ ಪೂರ್ವಿಕರು ಈಜಿಪ್ಟಿನಲ್ಲಿ ಫರೋಹನ ಗುಲಾಮರಾಗಿದ್ದರು. ಆಗ ನಾನು ನಿನ್ನ ಪೂರ್ವಿಕರಿಗೆ ದರ್ಶನ ನೀಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದೇವರ ಮನುಷ್ಯನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ನಿನಗೆ ಹೇಳುವದೇನೆಂದರೆ: ‘ನಿನ್ನ ತಂದೆಯ ಮನೆಯವರು ಈಜಿಪ್ಟಿನಿಂದ ಫರೋಹನ ಮನೆಯೊಳಗೆ ಇರುವಾಗ, ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:27
14 ತಿಳಿವುಗಳ ಹೋಲಿಕೆ  

ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು.


ತರುವಾಯ ಆ ಸ್ತ್ರೀ ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷ ನನ್ನ ಹತ್ತಿರ ಬಂದಿದ್ದನು. ಅವನ ರೂಪ ದೇವದೂತನ ರೂಪದಂತೆ ಘನಗಂಭೀರವಾಗಿತ್ತು. ‘ಎಲ್ಲಿಂದ ಬಂದಿರಿ?’ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.


ದೇವಪುರುಷನದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಯೇಲರನ್ನು ಕುರಿತು ಹೇಳಿದ ಆಶೀರ್ವಚನಗಳಿವು:


ಇದಲ್ಲದೆ ಸರ್ವೇಶ್ವರ ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳಲು ಮರುಭೂಮಿಗೆ ತೆರಳು,” ಎಂದರು. ಅಂತೆಯೇ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.


ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ಅದರಂತೆಯೇ ಸೌಲನು ಹೊರಟು ಎಫ್ರಯಿಮ್ ಪರ್ವತಪ್ರಾಂತ್ಯ ಹಾಗು ಶಾಲಿಷಾನಾಡು ಇವುಗಳಲ್ಲಿ ಸುತ್ತಾಡಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ.


ಅವನು ಬಂದು ಇಸ್ರಯೇಲರಿಗೆ ಹೀಗೆಂದನು: “ನಿಮ್ಮ ದೇವರಾದ ಸರ್ವೇಶ್ವರ ಹೇಳುವ ಈ ಮಾತುಗಳನ್ನು ಗಮನಿಸಿರಿ: ‘ನೀವು ದಾಸತ್ವದಲ್ಲಿದ್ದಾಗ ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ನಾನು.


ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು: “ಪಾಸ್ಕಹಬ್ಬ ಆಚರಣೆಯ ಕ್ರಮ ಇದು - ವಿದೇಶೀಯನಾರೂ ಆ ಭೋಜನದಲ್ಲಿ ಪಾಲ್ಗೊಳ್ಳಬಾರದು.


ಈಜಿಪ್ಟ್ ದೇಶದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೀಗೆಂದರು:


ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನ ತಪ್ಪದೆ ನೆರವೇರಿಸುವೆನು.


ಈ ದಿನ ನಿನ್ನನ್ನು ಕೊಲ್ಲಿಸುವುದಿಲ್ಲ,” ಎಂದು ಹೇಳಿದನು. ಆದರೆ ಅವನನ್ನು ಸರ್ವೇಶ್ವರನ ಯಾಜಕವೃತ್ತಿಯಿಂದ ತೆಗೆದುಬಿಟ್ಟನು. ಹೀಗೆ ಸರ್ವೇಶ್ವರ ಶಿಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಭವಿಷ್ಯ ಹೇಳಿದ ಮಾತು ನೆರವೇರಿತು.


ಆಗ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೈವಪುರುಷ ಇದ್ದಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗಬೇಕಾದ ಮಾರ್ಗವನ್ನು ತಿಳಿಸುವನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು