Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:28 - ಕನ್ನಡ ಸತ್ಯವೇದವು C.L. Bible (BSI)

28 ಇಸ್ರಯೇಲರ ಕುಟುಂಬಗಳಲ್ಲೆಲ್ಲಾ ಅವರನ್ನೇ, ಯಾಜಕ ಸೇವಾವೃತ್ತಿಗೆ ಆರಿಸಿಕೊಂಡೆ: ಅಂದರೆ, ಬಲಿಯರ್ಪಿಸುವುದಕ್ಕೆ, ಧೂಪಾರತಿ ಎತ್ತುವುದಕ್ಕೆ ಹಾಗು ‘ಏಫೋದ’ನ್ನು ಧರಿಸಿಕೊಳ್ಳುವುದಕ್ಕೆ ಆರಿಸಿಕೊಂಡೆ; ಇಸ್ರಯೇಲರು ಅರ್ಪಿಸುವ ಬಲಿಶೇಷದ ಹಕ್ಕನ್ನೂ ಅವರಿಗೆ ಅನುಗ್ರಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ, ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇಸ್ರಾಯೇಲ್ಯರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವದಕ್ಕೂ ಧೂಪಹಾಕುವದಕ್ಕೂ ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವದಕ್ಕೂ ಆರಿಸಿಕೊಂಡು ಅವರಿಗೆ ಇಸ್ರಾಯೇಲ್ಯರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇಸ್ರೇಲಿನ ಎಲ್ಲಾ ಕುಲಗಳಲ್ಲಿ ನಿನ್ನ ಕುಟುಂಬದವರನ್ನು ನನ್ನ ಯಾಜಕರನ್ನಾಗಿ ಆರಿಸಿಕೊಂಡೆನು. ಏಫೋದನ್ನು ಧರಿಸಿಕೊಳ್ಳುವುದಕ್ಕೂ ಯಜ್ಞವನ್ನು ಅರ್ಪಿಸುವುದಕ್ಕೂ ಧೂಪಹಾಕುವುದಕ್ಕೂ ನಾನು ಅವರನ್ನು ಆರಿಸಿಕೊಂಡೆನು. ಇಸ್ರೇಲರು ನನಗೆ ಅರ್ಪಿಸುವ ಯಜ್ಞಗಳಲ್ಲಿ ಮಾಂಸವನ್ನು ಪಡೆಯುವ ಅವಕಾಶವನ್ನೂ ನಾನು ನಿಮ್ಮ ಕುಲದವರಿಗೆ ನೀಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನನ್ನ ಬಲಿಪೀಠದ ಮೇಲೆ ಬಲಿಯನ್ನು ಅರ್ಪಿಸುವುದಕ್ಕೂ, ಧೂಪವನ್ನು ಸುಡುವುದಕ್ಕೂ, ನನ್ನ ಮುಂದೆ ಏಫೋದನ್ನು ಧರಿಸಿಕೊಂಡಿರುವುದಕ್ಕೂ, ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರಬೇಕೆಂದು ನಾನು ಅವನನ್ನು ಆಯ್ದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲರು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:28
26 ತಿಳಿವುಗಳ ಹೋಲಿಕೆ  

:ನನಗೆ ಯಾಜಕಸೇವೆ ಮಾಡಲು ನೀನು ನಿನ್ನ ಅಣ್ಣ ಆರೋನನನ್ನು ಮತ್ತು ಅವನ ಮಕ್ಕಳಾದ ನಾದಾಬ್, ಅಬೀಹು, ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರನ್ನು ಇಸ್ರಯೇಲರ ಮಧ್ಯೆಯಿಂದ ನನ್ನ ಬಳಿಗೆ ಕರೆದುಕೊಂಡು ಬಾ.


“ಇಸ್ರಯೇಲರು ನನಗೆ ಮೀಸಲಾಗಿಟ್ಟು ಸಮರ್ಪಿಸುವ ಪವಿತ್ರ ವಸ್ತುಗಳೆಲ್ಲಾ ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರಿಗೂ ಸಲ್ಲಬೇಕು. ಸದಾಕಾಲಕ್ಕೂ ಇದನ್ನು ನಾನು ನಿನಗೆ ಅನುಗ್ರಹಿಸಿದ್ದೇನೆ. ಇದು ನನ್ನ ಸನ್ನಿಧಿಯಲ್ಲಿ ನಿನ್ನೊಡನೆ ಮತ್ತು ನಿನ್ನ ಸಂತತಿಯೊಡನೆ ಮಾಡಿಕೊಂಡ ಶಾಶ್ವತವಾದ ಉಪ್ಪಿನ ಒಡಂಬಡಿಕೆ.”


ಮಿಕ್ಕದ್ದನ್ನು ಆರೋನನೂ ಅವನ ವಂಶಜರೂ ತಿನ್ನಬಹುದು. ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ, ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.


ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶಜರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಕೆಯಾದದ್ದು ಮಹಾಪರಿಶುದ್ಧವಾದುದು.


ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಯುವ ಹೋಮಶೇಷವು ಮಹಾಪರಿಶುದ್ಧವಾದುದು.


ತಯಾರಿಸಬೇಕಾದ ವಸ್ತ್ರಗಳು ಇವು: ಎದೆಕವಚ, ಏಫೋದ್ ಕವಚ, ಮೇಲಂಗಿ, ಕಸೂತಿ ನಿಲುವಂಗಿ, ಗುರುಪೇಟ ಮತ್ತು ನಡುಕಟ್ಟು, ನಿನ್ನ ಅಣ್ಣ ಆರೋನನು ಮತ್ತು ಅವನ ಮಕ್ಕಳು ನನ್ನ ಯಾಜಕರಾಗಿ ಸೇವೆ ಮಾಡುವಂತೆ ಅವರಿಗೆ ಈ ದೀಕ್ಷಾವಸ್ತ್ರಗಳನ್ನು ಮಾಡಿಸು.


ಆಗ ನಾತಾನನು ದಾವೀದನನ್ನು ದಿಟ್ಟಿಸಿ, “ಆ ಮನುಷ್ಯ ನೀನೇ. ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಹೇಳುವುದು ಇದು: ‘ನಿನ್ನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದವನು ನಾನು; ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನೂ ನಾನೇ.


ಕೋರಹನಿಗೂ ಅವನ ಪಂಗಡದವರೆಲ್ಲರಿಗೂ ಹೀಗೆಂದನು: “ಸರ್ವೇಶ್ವರ ತನ್ನವರು ಯಾರೆಂದು ನಾಳೆ ತಿಳಿಸುವರು. ಯಾರನ್ನು ಪ್ರತಿಷ್ಠಿಸಿದ್ದಾರೋ ಹಾಗೂ ತಾವೇ ಆರಿಸಿಕೊಂಡಿದ್ದಾರೋ ಅವರನ್ನು ಮಾತ್ರ ತಮ್ಮ ಹತ್ತಿರಕ್ಕೆ ಬರಗೊಳಿಸುವರು.


ನೀವು ಶಾಂತಿಸಮಾಧಾನದ ಬಲಿದ್ರವ್ಯಗಳಲ್ಲಿ ಪ್ರಾಣಿಯ ಬಲತೊಡೆಯನ್ನು ಯಾಜಕನಿಗಾಗಿ ಪ್ರತ್ಯೇಕಿಸಿ ಕೊಡಬೇಕು.


ಆರೋನನು ಪ್ರತಿನಿತ್ಯವು ಬೆಳಿಗ್ಗೆ ದೀಪಗಳನ್ನು ಸರಿಪಡಿಸುವಾಗ ಹಾಗು ಸಂಜೆದೀಪಗಳನ್ನು ಹೊತ್ತಿಸುವಾಗ ಆ ವೇದಿಕೆಯ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು.


ಹೀಗೆ ನಿಮ್ಮಿಂದ ಮತ್ತು ನಿಮ್ಮ ಸಂತತಿಯವರಿಂದ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಎಡೆಬಿಡದೆ ಧೂಪಾರ್ಪಣೆ ಇರಬೇಕು.


ಇಸ್ರಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಸರ್ವೇಶ್ವರ ಅವರನ್ನು ಮೋಶೆಯ ಮುಖಾಂತರ ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ವಿಧಿಸಿದರು.”


ಬಾಲಕನಾದ ಸಮುವೇಲನು ‘ಏಫೋದ’ ಎಂಬ ಪ್ರತ್ಯೇಕ ಮಡಿಯಂಗಿಯನ್ನು ತೊಟ್ಟುಕೊಂಡು ಸರ್ವೇಶ್ವರನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.


‘ಏಫೋದ’ನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದನು. ಈ ಅಹೀಯನು ಶಿಲೋವಿನಲ್ಲಿ ಸರ್ವೇಶ್ವರನ ಯಾಜಕನಾಗಿದ್ದ ಏಲಿಯ ಮರಿಮಗನೂ ಫೀನೆಹಾಸನ ಮೊಮ್ಮಗನೂ ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.


ದಾವೀದನು ಏಫೋದೆಂಬ ನಾರುಮಡಿಯನ್ನು ಮಾತ್ರ ಉಟ್ಟುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ಪೂರ್ಣಾವೇಶದಿಂದ ಕುಣಿದಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು