Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:30 - ಕನ್ನಡ ಸತ್ಯವೇದವು C.L. Bible (BSI)

30 ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:30
39 ತಿಳಿವುಗಳ ಹೋಲಿಕೆ  

ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.


ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.


ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಯಾಜಕ ಸೇವೆಗೆ ಸೇರಿಸು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತ ನಿಯಮವಾಗಿ ಪ್ರಾಪ್ತಿಸುವುದು.


ಪ್ರಭು : “ನನ್ನ ಭಕ್ತನಾದ್ದರಿಂದ ವಿಮೋಚಿಸುವೆನು ಅವನನು I ನನ್ನ ನಾಮವನು ಅರಿತವನಾದ್ದರಿಂದ ರಕ್ಷಿಸುವೆನು II


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ನನಗೊಳಿತು ಮಾಡಿದನಾತ ಸನ್ನಡತೆಗೆ ತಕ್ಕಂತೆ I ಪ್ರತಿಫಲವನಿತ್ತನು ನನ್ನ ಹಸ್ತಶುದ್ಧತೆಗೆ ತಕ್ಕಹಾಗೆ II


ಅದಕ್ಕೆ ಯೇಸು, “ನಾನು ದೆವ್ವಹಿಡಿದವನಲ್ಲ, ನನ್ನ ಪಿತನನ್ನು ನಾನು ಗೌರವಿಸುತ್ತೇನೆ. ನೀವಾದರೋ ನನ್ನನ್ನು ಅವಮಾನಪಡಿಸುತ್ತೀರಿ.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ಅದು ಓಕರಿಕೆಯಾಗಿ, ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ತಿನ್ನುವಿರಿ.”


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


ನೀವು ವಾಸಮಾಡುವ ನಾಡನ್ನು ಅಪವಿತ್ರ ಮಾಡಬೇಡಿ. ಸರ್ವೇಶ್ವರನೆಂಬ ನಾನೇ ಇಸ್ರಯೇಲರ ನಡುವೆ ಆ ನಾಡಿನಲ್ಲಿ ವಾಸಿಸುತ್ತೇನೆ.”


“ಬಳಿಕ ಆ ಮರಗಳು ಅಂಜೂರದ ಗಿಡದ ಬಳಿಗೆ ಹೋಗಿ ಅದಕ್ಕೆ, “ನೀನು ಬಂದು ನಮ್ಮ ಅರಸನಾಗು,’ ಎಂದವು.


ಆರೋನನು ಮತ್ತು ಅವನ ಮಕ್ಕಳು ದೇವದರ್ಶನದ ಗುಡಾರದೊಳಗೆ ಬರುವಾಗ ಹಾಗು ಪವಿತ್ರಸ್ಥಾನದಲ್ಲಿ ಸೇವೆ ಮಾಡಲು ಬಲಿಪೀಠದ ಹತ್ತಿರ ಬರುವಾಗ ಇವುಗಳನ್ನು ಹಾಕಿಕೊಂಡಿರಲಿ. ಇಲ್ಲವಾದರೆ ಅವರು ಆ ಅಪರಾಧದ ನಿಮಿತ್ತ ಸಾಯುವರು. ಆರೋನನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ.


ಆದ್ದರಿಂದ ಸರ್ವೇಶ್ವರ ಅವನ ಮೇಲೆ ಕೋಪಗೊಂಡು, “ನೀನು ಹೀಗೆ ಮಾಡಿ ನನ್ನ ನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ಕಿತ್ತುಕೊಂಡು ನಿನ್ನ ದಾಸನಿಗೆ ಕೊಡುವೆನು.


ನಿದ್ರೆಯಿಂದೆದ್ದವನು ಕನಸನ್ನು ತೃಣೀಕರಿಸುವಂತೆ I ಪ್ರಭು ನೀನೆದ್ದು ಕಡೆಗಣಿಸುವೆ ಅವರನು ಮಾಯೆಯಂತೆ II


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ಜ್ಞಾನವೆಂಬಾಕೆಯನ್ನು ಶ್ರೇಷ್ಠಳೆಂದು ಭಾವಿಸಿದೆಯಾದರೆ, ಆಕೆ ನಿನ್ನನ್ನು ಸನ್ಮಾನಿಸುವಳು. ನೀನು ಅವಳನ್ನು ಅಪ್ಪಿಕೊಂಡೆಯಾದರೆ, ಆಕೆ ನಿನ್ನನ್ನು ಘನಪಡಿಸುವಳು.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ಈ ಕಾರಣ, ಇಗೋ, ನಾನು ಆ ನೆಹೆಲಾಮ್ಯನಾದ ಶೆಮಾಯನನ್ನು ಮತ್ತು ಅವನ ಸಂತತಿಯವರನ್ನು ದಂಡಿಸುವೆನು. ಈ ಜನರ ಮಧ್ಯೆ ಅವನಿಗೆ ಯಾವ ಸಂತಾನವೂ ಇರದು. ಜನರಿಗೆ ‘ನಾನು ಮಾಡಬೇಕೆಂದಿರುವ ಒಳಿತನ್ನು ಅವನು ನೋಡದೆಹೋಗುವನು. ಏಕೆಂದರೆ ಅವನು ನನಗೆ ವಿರುದ್ಧ ಪ್ರಚೋದನೆಯ ಮಾತನ್ನು ಆಡಿದ್ದಾನೆ. ಇದು ಸರ್ವೇಶ್ವರನಾದ ನನ್ನ ನುಡಿ’.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.


ಈ ದಿನ ನಿನ್ನನ್ನು ಕೊಲ್ಲಿಸುವುದಿಲ್ಲ,” ಎಂದು ಹೇಳಿದನು. ಆದರೆ ಅವನನ್ನು ಸರ್ವೇಶ್ವರನ ಯಾಜಕವೃತ್ತಿಯಿಂದ ತೆಗೆದುಬಿಟ್ಟನು. ಹೀಗೆ ಸರ್ವೇಶ್ವರ ಶಿಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಭವಿಷ್ಯ ಹೇಳಿದ ಮಾತು ನೆರವೇರಿತು.


ನೀವು ನಿಮ್ಮ ದಾಸ ದಾವೀದನನ್ನು ಚೆನ್ನಾಗಿ ಬಲ್ಲಿರಿ; ನಾನು ನನ್ನ ಘನತೆಯನ್ನು ಕುರಿತು ಇನ್ನೇನು ಹೇಳಲಿ?


“ಉಜ್ಜೀಯರೇ, ಸರ್ವೇಶ್ವರನಿಗೆ ಧೂಪಾರತಿ ಎತ್ತುವುದು ನಿಮ್ಮ ಕೆಲಸವಲ್ಲ; ಅದಕ್ಕೆ ಆರೋನನ ಸಂತಾನದವರ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟು ಹೋಗಿ; ನೀವು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಸರ್ವೇಶ್ವರನಿಂದ ನಿಮಗೆ ಮರ್ಯಾದೆ ದೊರಕಲಾರದು,” ಎಂದರು.


ಶುದ್ಧನಿಗಾತ ಪರಿಶುದ್ಧನು I ಮೂರ್ಖನಿಗಾತ ಮಹಾವಕ್ರನು II


ಬುದ್ಧಿವಂತನನ್ನು ಅವರ ಬುದ್ಧಿಗೆ ತಕ್ಕಂತೆ ಜನ ಹೊಗಳುವರು; ವಕ್ರಬುದ್ಧಿಯುಳ್ಳವನನ್ನಾದರೊ ಅವರು ತೆಗಳುವರು.


‘ಇದೋ, ರಾಷ್ಟ್ರಗಳಲ್ಲಿ ನಿನ್ನನ್ನು ಕನಿಷ್ಠವಾಗಿಸುವೆನು, ಜನರ ತಾತ್ಸಾರಕ್ಕೆ ಈಡಾಗಿಸುವೆನು.


ಆದ್ದರಿಂದ ಇದನ್ನು ಗಮನವಿಟ್ಟು ಕೇಳಿ: ನಿಮ್ಮ ಸಂತಾನವನ್ನು ಖಂಡಿಸುವೆನು. ನಿಮ್ಮ ಮುಖಕ್ಕೆ ಸಗಣಿ ಬಳಿಯುವೆನು. ನಿಮ್ಮ ಯಜ್ಞಪಶುಗಳ ಸಗಣಿಯನ್ನೇ ಎರಚುವೆನು. ನೀವು ಆ ಸಗಣಿ ತಿಪ್ಪೆಯ ಪಾಲಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು