1 ಸಮುಯೇಲ 2:36 - ಕನ್ನಡ ಸತ್ಯವೇದವು C.L. Bible (BSI)36 ನಿನ್ನ ಮನೆಯಲ್ಲಿ ಅಳಿದು ಉಳಿದವರು ಬಂದು ಅವನ ಮುಂದೆ ಅಡ್ಡಬೀಳುವರು; ‘ನಮಗೊಂದು ಬೆಳ್ಳಿಕಾಸನ್ನಾದರೂ ರೊಟ್ಟಿ ಚೂರನ್ನಾದರೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವುದಕ್ಕಾದರು ನಮ್ಮನ್ನು ಸೇರಿಸಿಕೋ’ ಎಂದು ಬೇಡಿಕೊಳ್ಳುವರು". ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡ ಬಿದ್ದು, ನಮಗೆ ಒಂದು ಬೆಳ್ಳಿಕಾಸನ್ನು ರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೋ” ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡಬಿದ್ದು - ನಮಗೆ ಒಂದು ದುಡ್ಡನ್ನೂ ರೊಟ್ಟಿಯ ಚೂರನ್ನೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವದಕ್ಕಾದರೂ ನಮ್ಮನ್ನು ಸೇರಿಸಿಕೋ ಎಂದು ಅವನನ್ನು ಬೇಡಿಕೊಳ್ಳುವರು ಎಂಬದೇ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆಗ ನಿನ್ನ ಕುಟುಂಬದವರಲ್ಲಿ ಉಳಿದವರೆಲ್ಲ ಬಂದು ಈ ಯಾಜಕನಿಗೆ ಅಡ್ಡಬೀಳುವರು. ಈ ಜನರೆಲ್ಲ ಅವನಲ್ಲಿ ಬಿಡಿಕಾಸನ್ನೂ ರೊಟ್ಟಿಯ ಚೂರನ್ನೂ ಬೇಡುವರು. ಅವರೆಲ್ಲ, “ನಮಗೆ ದೇವಸ್ಥಾನದಲ್ಲಿ ಯಾಜಕನ ಹುದ್ದೆಯನ್ನು ಕೊಡು, ಅದರಿಂದ ಹೊಟ್ಟೆ ತುಂಬಿಸಿಕೊಳ್ಳುತ್ತೇವೆ ಎಂದು ಬೇಡಿಕೊಳ್ಳುವರು”’” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆಗ ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡಬಿದ್ದು, ಒಂದು ಬೆಳ್ಳಿಯ ಹಣವನ್ನೂ, ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ, “ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆಯಲ್ಲಿ ಸೇರಿಸಿಕೋ, ಎಂದು ಹೇಳುವರು,” ಎಂದರು.’ ” ಅಧ್ಯಾಯವನ್ನು ನೋಡಿ |