Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:4 - ಕನ್ನಡ ಸತ್ಯವೇದವು C.L. Bible (BSI)

4 ಮುರಿದು ಬಿದ್ದಿವೆ ಶೂರರ ಬಿಲ್ಲುಬಾಣಗಳು ದುರ್ಬಲರಾದರೋ ಶೌರ್ಯದ ನಡುಕಟ್ಟಿ ನಿಂತಿಹರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಶೂರರ ಬಿಲ್ಲುಗಳು ಮುರಿಯಲ್ಪಟ್ಟಿವೆ, ಎಡವಿದವರು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಶೂರರ ಬಿಲ್ಲುಗಳು ಮುರಿಯಲ್ಪಡುತ್ತವೆ, ಎಡವಿದವರು ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಶಕ್ತಿಶಾಲಿ ಯೋಧರ ಬಿಲ್ಲುಗಳು ಮುರಿದುಹೋಗುತ್ತವೆ. ಬಲಹೀನರು ಶಕ್ತಿವಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಪರಾಕ್ರಮಶಾಲಿಗಳ ಬಿಲ್ಲುಗಳು ಮುರಿದು ಬಿದ್ದಿವೆ, ಎಡವಿದವರು ಬಲದಿಂದ ನಡುಕಟ್ಟಿ ನಿಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:4
16 ತಿಳಿವುಗಳ ಹೋಲಿಕೆ  

ಚೂರು ಚೂರು ಮಾಡಿಹನಲ್ಲಿ ಥಳಥಳಿಸುವ ಬಾಣಗಳನು I ಖಡ್ಗ, ಗುರಾಣಿ ಎಂಬೆಲ್ಲ ಯುದ್ಧಾಯುಧಗಳನು II


ಹಿಡಿದ ಕತ್ತಿ ಹಿಡಿದವರೆದೆಯನೆ ಇರಿವುದು I ಎತ್ತಿದ ಬಿಲ್ಲುಬಾಣ ಸಿಡಿದು ಮುರಿವುದು II


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II


ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು.


ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.


ಬತ್ತಿಹೋಗುವುದು ದುರ್ಜನರ ಭುಜಬಲ I ಸತ್ಯವಂತರಿಗೆ ಪ್ರಭುವೇ ಉನ್ನತಬಲ II


ದಾಳಿಮಾಡುವ ಆ ಬಾಬಿಲೋನಿಯರನ್ನು ನೀವು ಪೂರ್ತಿಯಾಗಿ ಸೋಲಿಸಿದರೂ, ಅವರಲ್ಲಿ ಗಾಯಗೊಂಡವರು ಮಾತ್ರ ನಿಮ್ಮಲ್ಲಿ ಉಳಿದರೂ, ಆ ಗಾಯಗೊಂಡವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ನಗರವನ್ನು ಬೆಂಕಿಯಿಂದ ಸುಟ್ಟುಬಿಡುವರು.


ಖೈದಿಗಳೊಂದಿಗೆ ಕಾರಾಗೃಹವನ್ನು ಸೇರುವಿರಿ; ಇಲ್ಲವೆ, ಇತರರ ಸಮೇತ ಹತರಾಗುವಿರಿ. ಇದೇ ನಿಮ್ಮ ಗತಿ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಹಿಮ್ಮೆಟ್ಟದೆ ನಿಲ್ಲಲೇಬೇಕು. ಇದಕ್ಕಾಗಿ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಳ್ಳಿ. ನೀತಿಯೆಂಬ ರಕ್ಷಕವಚವನ್ನು ತೊಟ್ಟುಕೊಳ್ಳಿರಿ.


ಇನ್ನೂ ಹೇಳಬೇಕೆ? ಗಿಡಿಯೋನ್, ಬಾರಾಕ್, ಸಂಸೋನ್, ಯೆಪ್ತಾಹ, ದಾವೀದ, ಸಮುವೇಲ ಇವರನ್ನೂ ಇತರ ಪ್ರವಾದಿಗಳನ್ನೂ ಕುರಿತು ಹೇಳಬೇಕಾದರೆ ನನಗೆ ಸಮಯ ಸಾಲದು.


ನನಗಿತ್ತೆ ನೀ ಕದನಕ್ಕಾಗುವ ಶೌರ್ಯವೆಂಬ ನಡುಕಟ್ಟು I ತಗ್ಗಿಸಿದೆ ಎದುರಾಳಿಗಳನು ನನಗಧೀನ ಮಾಡಿಬಿಟ್ಟು II


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ.


ವಿನಾಶಕಾರನು ಬಂದೆರಗಿದ್ದಾನೆ ಬಾಬಿಲೋನಿನ ಮೇಲೆ ಅದರ ಶೂರರೋ ಸೆರೆಯಾಗಿಬಿಟ್ಟಿದ್ದಾರೆ ಅವರ ಬಿಲ್ಲುಗಳೋ ಮುರಿದುಹೋಗಿವೆ. ಸರ್ವೇಶ್ವರನು ಮುಯ್ಯಿತೀರಿಸುವ ದೇವರು ಆತ ಪ್ರತಿಕ್ರಿಯೆ ವ್ಯಕ್ತಪಡಿಸದೆ ಇರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು