Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:5 - ಕನ್ನಡ ಸತ್ಯವೇದವು C.L. Bible (BSI)

5 ಉಂಡು ಸುಖದಿಂದಿರುವರು ಹಸಿವುಗೊಂಡವರು ಹೊಟ್ಟೆಗಾಗಿ ಕೂಲಿಮಾಡುತ್ತಿಹರು ತೃಪ್ತರಿದ್ದವರು. ಬಂಜೆ ಹೆರುವಳು ಆರೇಳು ಮಕ್ಕಳನು ಒಬ್ಬಂಟಿಗಳಾಗಿರುವಳು ಮಕ್ಕಳಿವೆ ಎಂದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೊಟ್ಟೆತುಂಬಾ ಊಟಮಾಡುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ; ಹಸಿದವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೊಟ್ಟೆತುಂಬಾ ಉಣ್ಣುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ. ಹಸಿವುಗೊಂಡವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹಿಂದೆ ಆಹಾರವನ್ನು ಸಮೃದ್ಧಿಕರವಾಗಿ ಹೊಂದಿದ್ದವರು ಆಹಾರಕ್ಕಾಗಿ ದುಡಿಯಬೇಕಾಗುವುದು. ಹಿಂದೆ ಆಹಾರವಿಲ್ಲದೆ ಹಸಿದಿದ್ದವರಿಗೆ ಇಂದು ಆಹಾರ ಸಮೃದ್ಧಿಕರವಾಗಿರುವುದು! ಬಂಜೆಗೆ ಈಗ ಏಳು ಜನ ಮಕ್ಕಳಿರುವರು. ಆದರೆ ಹೆಚ್ಚು ಮಕ್ಕಳಿದ್ದ ತಾಯಿ ಇಂದು ವೇದನೆಗೊಂಡಿರುವಳು ಏಕೆಂದರೆ ಅವಳ ಮಕ್ಕಳೆಲ್ಲ ಸತ್ತುಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತೃಪ್ತಿಪಟ್ಟವರು ಆಹಾರಕ್ಕಾಗಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಹಸಿದವರು ಇನ್ನು ಮುಂದೆ ಹಸಿಯರು. ಬಂಜೆಯಾದವಳು ಏಳುಮಂದಿ ಮಕ್ಕಳನ್ನು ಹೆತ್ತಳು. ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:5
11 ತಿಳಿವುಗಳ ಹೋಲಿಕೆ  

ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ I ಹೊರದೂಡಿರುವನು ಸಿರಿವಂತರನು ಬರೀಗೈಯಲಿ II


ಬಂಜೆಯಾದವಳನು ಮಕ್ಕಳ ತಾಯಾಗಿಸುವನು I ಆನಂದದಿಂದಾಕೆ ಬೆಳಗಿಸುವಳಾ ಮನೆಯನು II


ಏಳು ಮಕ್ಕಳನ್ನು ಕಳೆದುಕೊಂಡ ತಾಯಿ ಪ್ರಾಣಬಿಟ್ಟಂತಿದ್ದಾಳೆ ದುಃಖದಿಂದ ಬಳಲಿ ಅವಳ ಪಾಲಿಗೆ ಸೂರ್ಯ ಮುಳುಗಿದ್ದಾನೆ ಹಾಡುಹಗಲಲ್ಲೆ. ಆಶಾಭಂಗಪಟ್ಟಿದ್ದಾಳೆ, ಅವಮಾನಕ್ಕೆ ಈಡಾಗಿದ್ದಾಳೆ. ಖಡ್ಗಕ್ಕೆ ಗುರಿಮಾಡುವೆ ಅವಳ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿಗೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಯುವ ಕೇಸರಿಗೆ ಇರಬಹುದು ಹಸಿವು, ದಾಹ I ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II


ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


ಆನಂದ ಗೀತೆಯನು ಹಾಡು ಹೆರದವಳೇ, ಬಂಜೆಯಾಗಿದ್ದವಳೇ; ಉಲ್ಲಾಸದಿಂದ ಅರಚು, ಬೇನೆಯನು ಅನುಭವಿಸದವಳೇ. ‘ಗಂಡನುಳ್ಳವಳಿಗಿಂತ ಹೆಚ್ಚು ಮಕ್ಕಳನ್ನು ಹೆರುವೆ’ ಎಂದು ಹೇಳುತ್ತಾರೆ ಸರ್ವೇಶ್ವರ ಸ್ವಾಮಿ ನಿನಗೆ.


ಇದಲ್ಲದೆ, “ಸರ್ವೇಶ್ವರ ನಿನ್ನನ್ನು ಬಂಜೆಯಾಗಿ ಮಾಡಿದ್ದಾರೆ,” ಎಂಬ ಚುಚ್ಚು ಮಾತುಗಳಿಂದ ನೋಯಿಸುತ್ತಿದ್ದಳು ಅವಳ ಸವತಿಯಾದ ಪೆನಿನ್ನಳು.


ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. “ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದೆ,” ಎಂದು ಹೇಳಿ ಆ ಮಗುವಿಗೆ ‘ಸಮುವೇಲ’ ಎಂದು ಹೆಸರಿಟ್ಟಳು.


“ಸಂತಾನವಿಲ್ಲದ ಸ್ತ್ರೀಯೇ, ಸಂತೋಷಿಸು ಪ್ರಸವವೇದನೆಯನರಿಯದವಳೇ, ಹರ್ಷೋದ್ಗಾರಮಾಡು ಗಂಡನುಳ್ಳವಳಿಗಿಂತ ಕೈಬಿಟ್ಟವಳ ಸಂತಾನ ಹೆಚ್ಚು.” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ.


ಅವನು ನಿನಗೆ ನವಚೈತನ್ಯವನ್ನು ಕೊಟ್ಟು ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಣೆಯನ್ನು ನೀಡುವನು. ಸಪ್ತಕುವರರಿಗಿಂತ ನಿನಗೆ ಮೆಚ್ಚುಗೆ ಆದ ನಿನ್ನ ಪ್ರಿಯ ಸೊಸೆ ಈ ಮಗುವನ್ನು ನಿನಗೆ ಕೊಟ್ಟಿದ್ದಾಳೆ!” ಎಂದು ಹರಸಿದರು.


ನಾಡು ದುಃಖದಿಂದ ಸೊರಗುತ್ತಿದೆ. ಲೆಬನೋನ್ ನಾಚಿಕೆಯಿಂದ ಒಣಗುತ್ತಿದೆ. ಶಾರೋನ್ ಬೆಂದು ಬೆಂಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳಿಲ್ಲದೆ ಬೋಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು