Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:6 - ಕನ್ನಡ ಸತ್ಯವೇದವು C.L. Bible (BSI)

6 ಜೀವಕೊಡುವವನು, ತೆಗೆದುಕೊಳ್ಳುವವನು ಆ ಸರ್ವೇಶ್ವರನೇ ಪಾತಾಳಕ್ಕಿಳಿಸುವವನು, ಮೇಲಕ್ಕೆಳೆದುಕೊಳ್ಳುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ಜನರಿಗೆ ಸಾವನ್ನೂ ತರುವನು. ಅಂತೆಯೇ ಅವರಿಗೆ ಜೀವವನ್ನೂ ದಯಪಾಲಿಸುವನು. ಆತನು ಅವರಿಗೆ ಮರುಜೀವವನ್ನು ದಯಪಾಲಿಸಬಲ್ಲನು. ಯೆಹೋವನು ಜನರನ್ನು ಮರಣ ಸ್ಥಳವಾದ ಪಾತಾಳಕ್ಕೆ ತಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಯೆಹೋವ ದೇವರು ಮರಣ ತರುವವರೂ, ಬದುಕಿಸುವವರೂ ಆಗಿದ್ದಾರೆ. ಪಾತಾಳಕ್ಕೆ ಇಳಿಯುವಂತೆ ಮಾಡುತ್ತಾರೆ, ಮೇಲಕ್ಕೆ ತರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:6
20 ತಿಳಿವುಗಳ ಹೋಲಿಕೆ  

“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಗಾಯಮಾಡುವವನೂ ಗಾಯಕಟ್ಟುವವನೂ ದೇವರೇ ಹೊಡೆಯುವುದೂ, ಗುಣಪಡಿಸುವುದೂ ಆತನ ಕೈಯೇ.


ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು.


ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು.


ಸುತ್ತುಕೊಂಡಿದ್ದವೆನ್ನನು ಮೃತ್ಯುಪಾಶಗಳು I ಬಿಗಿಹಿಡಿದಿದ್ದವು ಪಾತಾಳ ವೇದನೆಗಳು I ಬಂದೊದಗಿದ್ದವೆನಗೆ ಕಷ್ಟಸಂಕಟಗಳು II


ಅದಕ್ಕೆ ದಾವೀದನು, “ನಿನಗೆ ನಾನು ಪ್ರೀತಿಪಾತ್ರನೆಂದು ನಿನ್ನ ತಂದೆಗೆ ಗೊತ್ತಿದೆ. ಆದುದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾರೆ. ನಿನ್ನ ಜೀವದಾಣೆ, ಸರ್ವೇಶ್ವರನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರ,” ಎಂದು ಖಂಡಿತವಾಗಿ ಹೇಳಿದನು.


ನಮ್ಮ ದೇವರು ಜೀವೋದ್ಧಾರಕ ದೇವರು ಹೌದು I ಸಾವಿಂದ ತಪ್ಪಿಸುವ ಶಕ್ತಿ, ಸ್ವಾಮಿ ದೇವರದು II


ಕೊಲ್ಲುವ ಸಮಯ, ಗುಣಪಡಿಸುವ ಸಮಯ ಕೆಡವಿಬಿಡುವ ಸಮಯ, ಕಟ್ಟಿ ಎಬ್ಬಿಸುವ ಸಮಯ.


ಸರ್ವೇಶ್ವರ ನನ್ನನ್ನು - “ನರಪುತ್ರನೇ, ಈ ಎಲುಬುಗಳಿಗೆ ಜೀವ ಬರಬಹುದೇ?” ಎಂದು ಕೇಳಿದರು. ನಾನು “ಸರ್ವೇಶ್ವರರಾದ ದೇವರೇ, ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ.


ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜನರೇ, ನೋಡಿ: ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಯೇಲ್ ನಾಡಿಗೆ ಸೇರಮಾಡುವೆನು.


ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಕೇಳಿದರು. ಹುಡುಗನ ಪ್ರಾಣ ತಿರುಗಿಬಂದು ಅವನು ಉಜ್ಜೀವಿಸಿದನು.


ಭಕ್ತರೇ, ಸಂಕೀರ್ತಿಸಿರಿ ಪ್ರಭುವನು I ಮಾಡಿರಿ ಆತನ ನಾಮಸ್ಮರಣೆಯನು II


ದೇವಾ, ಈಡು ಮಾಡಿದೆಯೆನ್ನನು ಕಷ್ಟಸಂಕಟಗಳಿಗೆ I ಪುನಶ್ಚೇತನಗೊಳಿಸೀಗ, ಭೂತಳದಿಂದೆತ್ತು ಮೇಲಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು