Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:7 - ಕನ್ನಡ ಸತ್ಯವೇದವು C.L. Bible (BSI)

7 ಬಡತನ, ಸಿರಿತನ ಕೊಡುವವನು ಆ ಸರ್ವೇಶ್ವರನೇ ತಗ್ಗಿಸುವವನು, ಹೆಚ್ಚಿಸುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಡತನ ಸಿರಿತನಗಳನ್ನು ಕೊಡುವವನೂ ತಗ್ಗಿಸುವವನೂ ಹೆಚ್ಚಿಸುವವನೂ ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಜನರನ್ನು ಬಡವರನ್ನಾಗಿಸುತ್ತಾನೆ. ಆತನು ಜನರನ್ನು ಹಣವಂತರನ್ನಾಗಿಸುತ್ತಾನೆ. ಯೆಹೋವನು ಜನರನ್ನು ದೀನರನ್ನಾಗಿಸುತ್ತಾನೆ. ಆತನು ಜನರನ್ನು ದೊಡ್ಡವರನ್ನಾಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಬಡತನವನ್ನು, ಐಶ್ವರ್ಯವನ್ನು ಕೊಡುವವರೂ, ತಗ್ಗಿಸುವವರೂ, ಉನ್ನತ ಮಾಡುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:7
17 ತಿಳಿವುಗಳ ಹೋಲಿಕೆ  

ನ್ಯಾಯತೀರ್ಪು ಬರುವುದು ದೇವನಿಂದಲೇ I ಉನ್ನತಿಯು ಅವನತಿಯು ಆತನಿಂದಲೇ II


ಉನ್ನತಿಗೇರಿಸುತ್ತಾನೆ ದೀನದಲಿತರನು ಸುರಕ್ಷತೆಗೊಯ್ಯುತ್ತಾನೆ ದುಃಖಿತರನು.


ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.


ಪ್ರಭುವಿನ ಮುಂದೆ ನಮ್ರರಾಗಿರಿ. ಆಗ ಅವರು ನಿಮ್ಮನ್ನು ಉದ್ಧರಿಸುವರು.


ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,


ನಿನ್ನ ಕೋಪತಾಪಗಳೆ ಕಾರಣ ಇದಕ್ಕೆಲ್ಲಾ I ನನ್ನನು ಮೇಲಕ್ಕೆತ್ತಿ ಬಿಸಾಡಿಬಿಟ್ಟಿರುವೆಯಲ್ಲಾ II


ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು, ಆ ಯೌವನಸ್ಥನು ಇವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತನ್ನು ಕೇಳು; ಅವರು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ.


ಹೌದು, ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು ದುಷ್ಟರನು ನಿಂತಲ್ಲೇ ತುಳಿದುಬಿಡು.


ಆಸ್ತಿ - ಪಾಸ್ತಿ, ಐಶ್ವರ್ಯ ಬರುವುದು ನಿಮ್ಮಿಂದಲೇ. ಸರ್ವಾಧಿಕಾರ, ಬಲಪರಾಕ್ರಮ ಇರುವುದು ನಿಮ್ಮ ಕೈಯಲ್ಲೇ. ಪಟ್ಟ ಪದವಿಗೆ, ಸರ್ವಶಕ್ತಿ ಸಾಹಸಕ್ಕೆ ಮೂಲ ನೀವೇ.


ಹಿಜ್ಕೀಯನಿಗೆ ಅತ್ಯಧಿಕವಾದ ಧನಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕಾಗಿ ಭಂಡಾರಗಳನ್ನು ಏರ್ಪಡಿಸಿದನು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು;


ಇದಲ್ಲದೆ, ಪಟ್ಟಣಗಳನ್ನು ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.


ಪ್ರಭುವಿನ ಕರಗಳಲ್ಲಿದೆ ಕೋಪಕೊಡ ಒಂದು I ತುಂಬಿದೆ ಅಮಲುಮಿಶ್ರ ರೌದ್ರರಸದಿಂದದು II ಅದನವನು ಸುರಿಯಲು ಕುಡಿವರು ಜಗದ ದುರುಳರು I ಮಡ್ಡಿಯನು ಕೂಡ ಬಿಡದೆ ಕುಡಿವರೆಲ್ಲರು II


ಬಡವರು ಬಲ್ಲಿದರು ಸ್ಥಿತಿಯಲ್ಲಿ ಎದುರುಬದುರು; ಅವರೆಲ್ಲರನ್ನು ಸೃಷ್ಟಿಸಿದಾತ ಸರ್ವೇಶ್ವರನು.


‘ಇದೋ, ರಾಷ್ಟ್ರಗಳಲ್ಲಿ ನಿನ್ನನ್ನು ಕನಿಷ್ಠವಾಗಿಸುವೆನು, ಜನರ ತಾತ್ಸಾರಕ್ಕೆ ಈಡಾಗಿಸುವೆನು.


ಆಶ್ರಯ ಪಡೆವುವು ಅದರ ರೆಂಬೆಗಳ ನೆರಳಲಿ, ಆಗ ತಿಳಿವುವು ವನದ ವೃಕ್ಷಗಳು: ಎತ್ತರವಾದ ಮರಗಳ ತಗ್ಗಿಸುವವನು ತಗ್ಗಾದುದನು ಎತ್ತರಪಡಿಸುವವನು ಹಸುರಾದುದನು ಒಣಗಿಸುವವನು ಒಣಗಿದುದನು ಚಿಗುರಿಸುವವನು ಸರ್ವೇಶ್ವರ ನಾನೇ ಎಂದು ಇದ ನುಡಿದವ ನಾನು, ನುಡಿದುದನು ನಡೆಸುವವ ನಾನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು