Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:9 - ಕನ್ನಡ ಸತ್ಯವೇದವು C.L. Bible (BSI)

9 ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ತನ್ನ ಭಕ್ತರ ಹೆಜ್ಜೆಗಳನ್ನು ಕಾಯುವನು; ದುಷ್ಟರು ಅಂಧಕಾರದಲ್ಲಿ ಮುಳುಗಿ ಮೌನಹೊಂದುವರು. ಬಾಹುಬಲದಿಂದಲೇ ಯಾವನೂ ಜಯಹೊಂದಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ಕಾಪಾಡುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ತಮ್ಮ ಪರಿಶುದ್ಧರ ಪಾದಗಳನ್ನು ಕಾಯುವರು. ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು. “ತನ್ನ ಶಕ್ತಿಯಿಂದ ಒಬ್ಬನೂ ಜಯಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:9
41 ತಿಳಿವುಗಳ ಹೋಲಿಕೆ  

ನಿನ್ನ ಕಾಲೆಡವದಂತೆ ನೋಡುವನಾತ I ತೂಕಡಿಸಲಾರನು ನಿನ್ನ ಕಾಯುವಾತ II


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ದೂತನು ನನಗೆ ಹೀಗೆಂದು ಹೇಳಿದನು: “ಜೆರುಬ್ಬಾಬೆಲನಿಗೆ ಈ ಸಂದೇಶವನ್ನು ಕೊಡು - ನಿನಗೆ ಜಯ ದೊರಕುವುದು. ನಿನ್ನ ಶಕ್ತಿಸಾಮರ್ಥ್ಯದಿಂದಲ್ಲ, ಸೇನಾಬಲದಿಂದಲೂ ಅಲ್ಲ; ನನ್ನ ಆತ್ಮಶಕ್ತಿಯಿಂದ, ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II


ನನ್ನ ಕಾಲು ಜಾರಿಹೋಯಿತು ಎನ್ನುವುದರೊಳಗೆ I ನಿನ್ನ ಅಚಲ ಪ್ರೀತಿ, ಪ್ರಭು ನೆರವಾಯಿತೆನಗೆ II


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ನಿನ್ನ ಗುಡಾರಕ್ಕೆ ಗಂಡಾಂತರವಿಲ್ಲವೆಂಬ ನೆಮ್ಮದಿ ನಿನಗಿರುವುದು ನಿನ್ನ ಮಂದೆಯನು ನೀನು ನೋಡಬಂದಾಗ ಕೊರತೆ ಕಾಣಬರದು.


ಹೌದು, ಆತ ಪ್ರೀತಿಸುತ್ತಾನೆ ತನ್ನ ಪ್ರಜೆಯನ್ನು, ಆಶ್ರಯ ನೀಡುತ್ತಾನೆ ತನ್ನ ಭಕ್ತರೆಲ್ಲರಿಗು. ಎಂದೇ ಆತನ ಆಜ್ಞೆಗಳಿಗೆ ತಲೆಬಾಗುವೆವು, ಆತನ ಪಾದಚರಣದಲೆ ಕುಳಿತಿರುವೆವು.


ಮನುಷ್ಯ ಮನಬಂದಂತೆ ಮಾರ್ಗವನ್ನಾರಿಸಿಕೊಂಡರೂ ಸರ್ವೇಶ್ವರನೇ ಅವನ ನಡತೆಯನ್ನು ಪರಾಂಬರಿಸುವವನು.


ಪ್ರಭು ಕಾಯುವನು ನಿನ್ನ ಆಗುಹೋಗುಗಳನು I ಇಂದಿಗೂ ಎಂದೆಂದಿಗೂ ನಿನ್ನ ಕಾಯುವನು II


ಈ ಕಳ್ಳಬೋಧಕರು ನೀರಿಲ್ಲದ ಬಾವಿಗಳು, ಬಿರುಗಾಳಿಯಿಂದ ಚದರಿಹೊಗುವ ಮಂಜುಮೋಡಗಳು, ಕಾರ್ಗತ್ತಲಿನ ಕಂದಕವೇ ಅವರ ಪಾಲಿಗೆ ಕಟ್ಟಿಟ್ಟ ಬುತ್ತಿ.


ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”


ಅದು ರೌದ್ರದ ದಿನ, ಕಷ್ಟ - ಸಂಕಟದ ದಿನ, ನಾಶವಿನಾಶದ ದಿನ, ಕತ್ತಲು ಕಾರ್ಗತ್ತಲ ದಿನ, ಕಾರ್ಮುಗಿಲು ಕವಿದ ಕರಾಳ ದಿನ;


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ಸರ್ವೇಶ್ವರನೇ ನಿನಗೆ ಆಧಾರವಾಗಿರುವನು, ನಿನ್ನ ಕಾಲು ಉರುಲಿಗೆ ಸಿಕ್ಕದಂತೆ ಕಾಪಾಡುವನು.


ಅವನ ಜೀವಮಾನವೆಲ್ಲ ಅಂಧಕಾರಮಯ, ಅದರಲ್ಲಿ ದುಃಖದುಗುಡ, ರೋಗರುಜಿನ, ಕೋಪತಾಪ ಇದ್ದೇ ಇರುತ್ತವೆ.


ನ್ಯಾಯಮಾರ್ಗವನ್ನು ಕಾಯುವನಾತ, ಭಕ್ತರ ಹಾದಿಯನ್ನು ಭದ್ರವಾಗಿಸುವನಾತ.


ನಿನ್ನನು ಕಾಯುತಿಹನು ಪ್ರಭುವೇ I ಬಲಗಡೆ ನೆರಳಂತಿಹನು ವಿಭುವೇ II


ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.


ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಜನರು : “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ಎಂತಲೇ ಬಡವನಿಗೆ ನಿರೀಕ್ಷೆ ಇರುತ್ತದೆ. ಅನ್ಯಾಯ ಆಡುವ ಬಾಯಿ ಮುಚ್ಚಿಕೊಳ್ಳುತ್ತದೆ.


ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ!


ನಿನಗೆ ಮೊರೆಯಿಡುವೆ, ನನಗಾಗದಿರಲಿ ಹೇ ಪ್ರಭು, ಮಾನಭಂಗ I ದುರುಳರಿಗಾಗಲೀ ಆಶಾಭಂಗ, ಮೂಕರಾಗವರು ಸೇರಲಿ ನರಕ II


ಸರ್ವೇಶ್ವರನಾದ ನಾನೇ ಇದರ ತೋಟಗಾರ, ಕ್ಷಣಕ್ಷಣಕ್ಕೂ ಇದಕೆ ಹೊಯ್ಯುವೆ ನೀರ, ಇದನ್ನಾದರೂ ಮುಟ್ಟದಂತೆ ಕಾಯುವೆ ನಿರಂತರ.


ಒಡೆಯಾ, ತಾವು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಸರ್ವೇಶ್ವರ ತಮ್ಮನ್ನು ಕಾಪಾಡಿದ್ದಾರೆ. ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಿಮ್ಮ ವಿರೋಧಿಗಳೂ ನಿಮಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ!


ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.


ಅವರೆಲ್ಲರನು ಧೂಳಿನಲ್ಲಿ ಒಟ್ಟಿಗೆ ಅಡಗಿಸಿಬಿಡು ಅವರ ಮುಖಕ್ಕೆ ಅಧೋಲೋಕದಲಿ ಮುಸುಕುಹಾಕು.


ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II


ಹೊರತಂದನು ಇಸ್ರಯೇಲರನು ಬೆಳ್ಳಿಬಂಗಾರ ಸಹಿತ I ಅವರಾ ಗೋತ್ರದೊಳಿರಲಿಲ್ಲ ಯಾರೊಬ್ಬನೂ ನಿಶ್ಯಕ್ತ II


ಹೆದರಿ ನಡೆಯುವವರ ಇಷ್ಟವನು ಈಡೇರಿಸುವನು I ಅವರ ಮೊರೆಯನು ಕೇಳಿ ಅವರನು ರಕ್ಷಿಸುವನು II


“ಕಸ್ದೀಯ ನಗರಿಯೇ, ಕುಳಿತುಕೊ ಮೌನವಾಗಿ ಕತ್ತಲೆಯೊಳಗೆ ಇನ್ನು ಎನಿಸಿಕೊಳ್ಳೆ ರಾಣಿಯೆಂದು ರಾಜ್ಯಗಳಿಗೆ.”


ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು