Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:1 - ಕನ್ನಡ ಸತ್ಯವೇದವು C.L. Bible (BSI)

1 ದಾವೀದನು ರಾಮಾದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದನು. “ನಿನ್ನ ತಂದೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ನಾನೇನು ಮಾಡಿದೆ? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹ ಯಾವುದು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ರಾಮದ ನಯೋತಿನಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ, “ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ, ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವುದು?” ಎನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನು ರಾಮದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ - ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲಾ; ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವದು ಅನ್ನಲು ಯೋನಾತಾನನು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನು ರಾಮದ ಪಾಳೆಯದಿಂದ ಓಡಿಹೋದನು. ದಾವೀದನು ಯೋನಾತಾನನ ಬಳಿಗೆ ಹೋಗಿ, “ನಾನು ಮಾಡಿರುವ ತಪ್ಪೇನು? ನನ್ನ ಅಪರಾಧವೇನು? ನಿನ್ನ ತಂದೆಯು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವುದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು, ಅವನ ಮುಂದೆ, “ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣವನ್ನು ಹುಡುಕುವ ಹಾಗೆ ನಾನು ಅವನಿಗೆ ಮಾಡಿದ ದ್ರೋಹವೇನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:1
19 ತಿಳಿವುಗಳ ಹೋಲಿಕೆ  

ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ಪ್ರಿಯರೇ, ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸದಿದ್ದರೆ, ನಾವು ದೇವರ ಮುಂದೆ ಧೈರ್ಯದಿಂದಿರಲು ಸಾಧ್ಯವಾಗುತ್ತದೆ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತ; ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದೆ.


ನೀವು ನನ್ನ ತಂದೆ; ಇಗೋ ನೋಡಿ! ನನ್ನ ಕೈಯಲ್ಲಿ ನಿಮ್ಮ ನಿಲುವಂಗಿಯ ತುಂಡು ಇದೆ; ನಾನು ನಿಮ್ಮನ್ನು ಕೊಲ್ಲದೆ ನಿಮ್ಮ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ; ನಾನು ನಿಮಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೊಳ್ಳಿ; ಆದರೂ ನೀವು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿರಲ್ಲವೆ?


“ನಿಮಗೆ ನಾನು ಕೇಡುಮಾಡಬೇಕೆಂದಿದ್ದೇನೆಂದು ಹೇಳುವವರ ಮಾತಿಗೆ ನೀವು ಕಿವಿಗೊಡಬೇಡಿ.


ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಯೋನಾತಾನನು ಅವನಿಗೆ, “ಇದು ಎಂದಿಗೂ ಆಗಲೇಬಾರದು; ನಿನಗೆ ಮರಣವಾಗಕೂಡದು. ನನ್ನ ತಂದೆ ಚಿಕ್ಕಕಾರ್ಯವನ್ನಾಗಲಿ ದೊಡ್ಡಕಾರ್ಯವನ್ನಾಗಲಿ ನನಗೆ ತಿಳಿಸದೆ ಮಾಡುವುದಿಲ್ಲ; ಇಂಥ ಕಾರ್ಯವನ್ನು ನನಗೆ ಹೇಗೆ ಮರೆಮಾಡಿಯಾರು? ಇಲ್ಲ, ಇದು ನಿಜವಲ್ಲ,” ಎಂದು ಹೇಳಿದನು.


ಗರ್ವಿಗಳು ನಿಂತಿಹರು ನನಗೆದುರಾಗಿ I ಕ್ರೂರಿಗಳು ಕಾದಿಹರೆನ್ನ ಕೊಲೆಗಾಗಿ I ಅವರಲಿಲ್ಲ ಮಾನ್ಯತೆ ದೇವರಿಗಾಗಿ II


ದಾವೀದನನ್ನು ಕೊಲ್ಲಬೇಕೆಂದು ಸೌಲನು ತನ್ನ ಮಗ ಯೋನಾತಾನನಿಗೂ ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.


ಹೀಗೆ ದಾವೀದನು ತಪ್ಪಿಸಿಕೊಂಡು ರಾಮಾದಲ್ಲಿದ್ದ ಸಮುವೇಲನ ಬಳಿಗೆ ಬಂದನು. ಸೌಲನು ತನಗೆ ಮಾಡಿದ್ದೆಲ್ಲವನ್ನೂ ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ಒಂದು ಮಠದಲ್ಲಿ ವಾಸವಾಗಿ ಇದ್ದರು.


ಅದಕ್ಕೆ ಯೋನಾತಾನನು, “ಅವನು ಏಕೆ ಸಾಯಬೇಕು? ಅವನು ಏನು ಮಾಡಿದ್ದಾನೆ?” ಎಂದು ತಂದೆಯನ್ನು ಕೇಳಿದನು.


ಸರ್ವೇಶ್ವರನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಅವರೇ ನನಗಾಗಿ ನಿಮಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ನನ್ನ ಒಡೆಯ, ತಮ್ಮ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೆ? ನಾನೇನು ಮಾಡಿದೆ? ಯಾವ ಪಾಪಕ್ಕೆ ಕೈಹಾಕಿದೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು