1 ಸಮುಯೇಲ 20:30 - ಕನ್ನಡ ಸತ್ಯವೇದವು C.L. Bible (BSI)30 ಆಗ ಸೌಲನು ಸಿಡಿದೆದ್ದು ಯೋನಾತಾನನಿಗೆ, “ಎಲೋ, ದುಷ್ಟದಾಸಿಯ ಮಗನೇ, ನೀನು ಜೆಸ್ಸೆಯನ ಮಗನೊಡನೆ ಸ್ನೇಹದಿಂದ ಇರುವುದು ನನಗೆ ಗೊತ್ತಿಲ್ಲವೇ? ಈ ಸ್ನೇಹದಿಂದ ನಿನಗೂ ಹೆತ್ತವಳಿಗೂ ಮಾನಭಂಗ ತರುತ್ತಾ ಇರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆಗ ಸೌಲನು ಬಹಳವಾಗಿ ಕೋಪಗೊಂಡು ಯೋನಾತಾನನಿಗೆ, “ಎಲೈ ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವುದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ, ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆಗ ಸೌಲನು ಬಹಳವಾಗಿ ಉರಿಗೊಂಡು ಯೋನಾತಾನನಿಗೆ - ಎಲೋ, ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಸೌಲನು ಯೋನಾತಾನನ ಮೇಲೆ ಬಹಳ ಕೋಪಗೊಂಡು, “ನೀನು ಅವಿಧೇಯಳಾದ ದಾಸಿಯ ಮಗ. ನೀನೂ ಅವಳಂತೆಯೇ ಅವಿಧೇಯ. ನೀನು ದಾವೀದನ ಪಕ್ಷವಹಿಸಿರುವುದು ನನಗೆ ಗೊತ್ತಿದೆ. ನೀನು ನಿನಗೂ ಮತ್ತು ನಿನ್ನ ತಾಯಿಗೂ ನಾಚಿಕೆಯನ್ನು ತಂದಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ, “ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ, ಇಷಯನ ಮಗನನ್ನು ನೀನು ಆರಿಸಿಕೊಂಡಿದ್ದೀ ಎಂದು ನಾನರಿಯೆನೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಅಸಹ್ಯವಾಗುವುದು. ಅಧ್ಯಾಯವನ್ನು ನೋಡಿ |