Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:41 - ಕನ್ನಡ ಸತ್ಯವೇದವು C.L. Bible (BSI)

41 ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದೆದ್ದು ಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರನ್ನೊಬ್ಬರು ಅಪ್ಪಿಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಹುಡುಗನು ಹೋಗುತ್ತಲೆ ದಾವೀದನು ಕಲ್ಲುಕುಪ್ಪೆಯ ಬಳಿಯಿಂದೆದ್ದು ಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು; ದಾವೀದನು ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಬಾಲಕನು ಹೊರಟುಹೋದನು. ದಾವೀದನು ತಾನು ಅಡಗಿದ್ದ ಬೆಟ್ಟದ ಮತ್ತೊಂದು ಕಡೆಯ ಸ್ಥಳದಿಂದ ಹೊರಬಂದನು. ದಾವೀದನು ಯೋನಾತಾನನ ಮುಂದೆ ಬಂದು ಮೂರು ಸಲ ತನ್ನ ಮುಖವನ್ನು ನೆಲದವರೆಗೂ ಬಗ್ಗಿಸಿ ನಮಸ್ಕರಿಸಿದನು. ನಂತರ ದಾವೀದ ಮತ್ತು ಯೋನಾತಾನರು ಪರಸ್ಪರ ಮುದ್ದಿಟ್ಟರು, ಅವರಿಬ್ಬರೂ ಒಟ್ಟಾಗಿ ಅತ್ತರು. ದಾವೀದನು ಯೋನಾತಾನನಿಗಿಂತ ಹೆಚ್ಚು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದು ಬಂದು ಯೋನಾತಾನನ ಮುಂದೆ ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು, ಒಬ್ಬರನ್ನೊಬ್ಬರು ನೋಡಿ ಅತ್ತರು. ದಾವೀದನು ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:41
20 ತಿಳಿವುಗಳ ಹೋಲಿಕೆ  

ಯೋನಾತಾನನು ದಾವೀದನನ್ನು ತನ್ನ ಪ್ರಾಣಸ್ನೇಹಿತನನ್ನಾಗಿ ಪ್ರೀತಿಸುತ್ತಿದ್ದುದರಿಂದ ಅವನೊಂದಿಗೆ ಒಂದು ಒಪ್ಪಂದಮಾಡಿಕೊಂಡನು.


ಅನಂತರ ರಾಖೇಲಳಿಗೆ ಮುದ್ದಿಟ್ಟನು; ಸಂತೋಷ ಉಕ್ಕಿಬಂದು ಗಟ್ಟಿಯಾಗಿ ಅತ್ತನು.


ಅನಂತರ ಅವರು ಅವನನ್ನು ತಬ್ಬಿಕೊಂಡು ಮುದ್ದಿಟ್ಟು ಬೀಳ್ಕೊಟ್ಟರು. ಅವರ ಕಣ್ಣಲ್ಲಾದರೋ ನೀರು ಧಾರಾಕಾರವಾಗಿ ಹರಿಯುತ್ತಿತ್ತು.


ಜನರೆಲ್ಲರು ನದಿ ದಾಟಿದರು. ಅರಸನು ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಮರಳಿದನು.


ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಆ ಮೆಫೀಬೋಶೆತನು ಬಂದು ದಾವೀದನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ದಾವೀದನು, “ಮೆಫೀಬೋಶೆತನೇ,” ಎಂದೊಡನೆ ಅವನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ,” ಎಂದನು.


ಯೋನಾತಾನನೇ, ಸಹೋದರನೇ, ಮನೋಹರನೇ, ನಿನ್ನ ಮರಣ ತಂದಿದೆ ಅತೀವ ಸಂಕಟ ನನಗೆ, ನನ್ನ ಮೇಲೆ ನಿನಗಿದ್ದ ಪ್ರೀತಿ ಅದೆಷ್ಟು ಆಶ್ಚರ್ಯಕರ! ಸತಿಪ್ರೇಮಕ್ಕಿಂತಲೂ ಅದು ಅಮೋಘಕರ!


ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದಿಳಿದು ಅವನಿಗೆ ಸಾಷ್ಟಾಂಗ ನಮಸ್ಕರಿಸಿದಳು.


ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.


ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಕಣ್ಣೀರಿಟ್ಟನು. ತರುವಾಯ ಅವರು ಅವನ ಸಂಗಡ ಮಾತನಾಡತೊಡಗಿದರು.


ಅವರು ಮತ್ತೆ ನೆಲದವರೆಗೆ ಬಾಗಿ ನಮಸ್ಕಾರ ಮಾಡಿ, “ನಿಮ್ಮ ಸೇವಕರಾದ ನಮ್ಮ ತಂದೆ ಇಂದಿಗೂ ಕ್ಷೇಮದಿಂದ ಇದ್ದಾರೆ,” ಎಂದರು.


ಲಾಬಾನನು ತನ್ನ ಸೋದರಳಿಯ ಬಂದ ಸುದ್ದಿಯನ್ನು ಕೇಳಿ ಅವನನ್ನು ಎದುರುಗೊಳ್ಳಲು ಓಡಿಬಂದನು. ಯಕೋಬನನ್ನು ಅಪ್ಪಿಕೊಂಡು ಮುದ್ದಿಟ್ಟು, ಮನೆಗೆ ಕರೆದುಕೊಂಡು ಹೋದನು. ನಡೆದ ಸಂಗತಿಗಳನ್ನೆಲ್ಲ ಯಕೋಬನು ಲಾಬಾನನಿಗೆ ತಿಳಿಸಿದನು.


ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.


ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು, “ಇವುಗಳನ್ನು ಊರಿಗೆ ತೆಗೆದುಕೊಂಡು ಹೋಗು,” ಎಂದು ಹೇಳಿದನು.


ಆದರೆ ಏಸಾವನು ಅವನನ್ನು ಎದುರುಗೊಳ್ಳಲು ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು.


“ನಿಮಗೆ ನಾನು ಕೇಡುಮಾಡಬೇಕೆಂದಿದ್ದೇನೆಂದು ಹೇಳುವವರ ಮಾತಿಗೆ ನೀವು ಕಿವಿಗೊಡಬೇಡಿ.


ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ವ್ಯಕ್ತಿ ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು. ಅವನು ಸಂತಾಪದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.


ತೆಕೋವದ ಆ ಸ್ತ್ರೀ ಅರಸನ ಹತ್ತಿರಕ್ಕೆ ಹೋಗಿ ಅವನ ಮುಂದೆ ನೆಲಕ್ಕೆಬಿದ್ದು, “ಅರಸರೇ, ರಕ್ಷಿಸಿರಿ,” ಎಂದು ಕೂಗಿದಳು.


ಬತ್ಷೆಬೆ ಅಲ್ಲಿಗೆ ಹೋಗಿ ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನು, “ಏನು, ನಿನಗೇನು ಬೇಕು?” ಎಂದು ಆಕೆಯನ್ನು ವಿಚಾರಿಸಿದನು.


ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗ ನಮಸ್ಕಾರ ಮಾಡಿದನು.


ಆಗ ಬತ್ಷೆಬೆ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದಳು, “ನನ್ನೊಡೆಯರಾದ ದಾವೀದರಸರು ಸುದೀರ್ಘಕಾಲ ಬಾಳಲಿ!” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು