1 ಸಮುಯೇಲ 20:6 - ಕನ್ನಡ ಸತ್ಯವೇದವು C.L. Bible (BSI)6 ನಿನ್ನ ತಂದೆ ನನ್ನನ್ನು ಕುರಿತು ವಿಚಾರಮಾಡಿದರೆ, ನೀನು, ‘ದಾವೀದನು ತನ್ನ ಊರಾದ ಬೆತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು; ಅವನ ಗೋತ್ರದವರು ಅಲ್ಲಿ ವಾರ್ಷಿಕ ಬಲಿದಾನ ಮಾಡುತ್ತಾರಂತೆ,’ ಎಂದು ಹೇಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿನ್ನ ತಂದೆಯು ನನ್ನನ್ನು ಕುರಿತು ವಿಚಾರ ಮಾಡಿದರೆ, ನೀನು, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಅವನ ಗೋತ್ರದವರು ಅಲ್ಲಿ ವಾರ್ಷಿಕ ಯಜ್ಞಮಾಡುತ್ತಾರೆ’ ಎಂದು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿನ್ನ ತಂದೆಯು ನನ್ನನ್ನು ಕುರಿತು ವಿಚಾರಮಾಡಿದರೆ ನೀನು - ದಾವೀದನು ತನ್ನ ಊರಾದ ಬೇತ್ಲೆಹೇವಿುಗೆ ಹೋಗಿ ಬರುವದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು; ಅವನ ಗೋತ್ರದವರು ಅಲ್ಲಿ ವಾರ್ಷಿಕಯಜ್ಞ ಮಾಡುತ್ತಾರಂತೆ ಎಂದು ಹೇಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾನು ಇಲ್ಲದಿರುವುದನ್ನು ನಿಮ್ಮ ತಂದೆಯು ಗಮನಿಸಿದರೆ ಅವನಿಗೆ, ‘ದಾವೀದನು ಬೆತ್ಲೆಹೇಮಿನ ತನ್ನ ಮನೆಗೆ ಹೋಗಲು ಬಯಸಿದನು. ಅವನ ಕುಟುಂಬದವರು ಅಲ್ಲಿ ವಾರ್ಷಿಕಯಜ್ಞದ ಔತಣವನ್ನು ಏರ್ಪಡಿಸಿದ್ದಾರೆ. ಬೆತ್ಲೆಹೇಮಿಗೆ ಹೋಗಿ ತನ್ನ ಕುಟುಂಬದವರ ಜೊತೆಯಿರಲು ಅವಕಾಶ ಕೊಡಬೇಕೆಂದು ದಾವೀದನು ನನ್ನನ್ನು ಕೇಳಿಕೊಂಡನು’ ಎಂದು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವುದನ್ನು ಕಂಡು, ಶ್ರದ್ಧೆಯಿಂದ ವಿಚಾರಿಸಿ ಅವನು ಎಲ್ಲಿ? ಎಂದು ಕೇಳಿದರೆ, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಏಕೆಂದರೆ ತನ್ನ ಸಮಸ್ತ ಕುಟುಂಬಕ್ಕೋಸ್ಕರ ವರುಷದ ಯಜ್ಞ ಮಾಡುತ್ತಾರೆ,’ ಎಂದು ಹೇಳು. ಅಧ್ಯಾಯವನ್ನು ನೋಡಿ |