Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:8 - ಕನ್ನಡ ಸತ್ಯವೇದವು C.L. Bible (BSI)

8 ಸೇವಕನ ಮೇಲೆ ದಯವಿರಲಿ. ನೀನು ಸರ್ವೇಶ್ವರನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿರುವೆಯಲ್ಲವೆ? ನಾನು ಅಪರಾಧಿಯಾಗಿದ್ದರೆ, ನನ್ನನ್ನು ನಿನ್ನ ತಂದೆಗೆ ಒಪ್ಪಿಸಬೇಕಾಗಿಲ್ಲ, ನೀನೆ ಕೊಂದುಹಾಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ಯೆಹೋವನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿಯಲ್ಲಾ, ನಾನು ಅಪರಾಧಿಯಾಗಿದ್ದರೆ ನನ್ನನ್ನು ನಿನ್ನ ತಂದೆಗೆ ಒಪ್ಪಿಸುವುದೇಕೆ? ನೀನೇ ನನ್ನನ್ನು ಕೊಂದುಹಾಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸೇವಕನ ಮೇಲೆ ದಯವಿರಲಿ. ನೀನು ಯೆಹೋವನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿಯಲ್ಲಾ; ನಾನು ಅಪರಾಧಿಯಾಗಿದ್ದರೆ ನನ್ನನ್ನು ನಿನ್ನ ತಂದೆಗೆ ಒಪ್ಪಿಸುವದೇಕೆ? ನೀನೇ ಕೊಂದುಹಾಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೋನಾತಾನನೇ, ನನ್ನ ಮೇಲೆ ದಯೆಯಿರಲಿ. ನಾನು ನಿನ್ನ ಸೇವಕ. ನೀನು ಯೆಹೋವನ ಮುಂದೆ ನನ್ನೊಂದಿಗೆ ಒಪ್ಪಂದ ಮಾಡಿಕೊಂಡಿರುವೆ. ನಾನು ತಪ್ಪಿತಸ್ಥನಾಗಿದ್ದರೆ, ನೀನೇ ನನ್ನನ್ನು ಕೊಂದುಬಿಡು! ಆದರೆ ನಿನ್ನ ತಂದೆಯ ಹತ್ತಿರಕ್ಕೆ ನನ್ನನ್ನು ಕರೆದೊಯ್ಯಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು. ಏಕೆಂದರೆ ಯೆಹೋವ ದೇವರ ಒಡಂಬಡಿಕೆಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀಯಲ್ಲಾ. ಆದರೂ ನನ್ನಲ್ಲಿ ಅಕ್ರಮವಿದ್ದರೆ, ನೀನೇ ನನ್ನನ್ನು ಕೊಂದುಹಾಕು. ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವುದು ಏಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:8
16 ತಿಳಿವುಗಳ ಹೋಲಿಕೆ  

ಅಬ್ಷಾಲೋಮನು, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ? ಅಲ್ಲೇ ಇದ್ದಿದ್ದರೆ ಒಳ್ಳೇದಾಗುತ್ತಿತ್ತಲ್ಲವೇ?’ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆ; ನಾನು ಹೇಗೂ ಅರಸನ ಮುಖವನ್ನು ನೋಡಬೇಕು; ನಾನು ಅಪರಾಧಿ ಆಗಿದ್ದರೆ ಅವರು ನನ್ನನ್ನು ಕೊಲ್ಲಿಸಲಿ,” ಎಂದನು.


ಯೋನಾತಾನನು ದಾವೀದನನ್ನು ತನ್ನ ಪ್ರಾಣಸ್ನೇಹಿತನನ್ನಾಗಿ ಪ್ರೀತಿಸುತ್ತಿದ್ದುದರಿಂದ ಅವನೊಂದಿಗೆ ಒಂದು ಒಪ್ಪಂದಮಾಡಿಕೊಂಡನು.


ಅವರಿಬ್ಬರೂ ಸರ್ವೇಶ್ವರನ ಸನ್ನಿಧಿಯಲ್ಲಿ ಒಪ್ಪಂದಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.


ಅಗಲಿದರೆ, ಸರ್ವೇಶ್ವರನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ!” ಎಂದು ಹೇಳಿ ಅವನ ಮನೆಯವರೊಡನೆ ಒಪ್ಪಂದ ಮಾಡಿಕೊಂಡನು.


ಹಾಗೇನಾದರೂ ಮಾಡಿ, ಮರಣದಂಡನೆಗೆ ಅರ್ಹನಾಗಿದ್ದರೆ, ಅದಕ್ಕೆ ಗುರಿಯಾಗಲು ಹಿಂಜರಿಯುವುದಿಲ್ಲ. ಆದರೆ ಅವರು ನನ್ನ ವಿರುದ್ಧ ತಂದಿರುವ ಆಪಾದನೆಗಳು ಜೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಚಕ್ರವರ್ತಿಗೇ ಅಪೀಲುಮಾಡಿಕೊಳ್ಳುತ್ತೇನೆ,” ಎಂದನು.


ಪ್ರೀತಿ ಸತ್ಯತೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಪಟ್ಟಿಯಾಗಿರಲಿ, ಹೃದಯದಹಲಗೆಯಲ್ಲಿ ಲಿಖಿತವಾಗಿರಲಿ.


ದಾವೀದನು ಅವರನ್ನು ಎದುರುಗೊಂಡು “ಸ್ನೇಹಿತರಂತೆ ನನಗೆ ಸಹಾಯ ಮಾಡಲು ಬಂದಿದ್ದರೆ ನಿಮಗೆ ಇಲ್ಲಿ ಸ್ವಾಗತ. ನಮ್ಮೊಂದಿಗೆ ಸೇರಿಕೊಳ್ಳಿ, ನಾನು ನಿಮಗೆ ಯಾವ ತೊಂದರೆಯನ್ನು ಕೊಟ್ಟಿಲ್ಲ. ಆದರೆ ನೀವು ನನ್ನನ್ನು ನನ್ನ ವೈರಿಗಳಿಗೆ ಹಿಡಿದುಕೊಡಲು ಬಂದಿದ್ದರೆ ನಮ್ಮ ಪಿತೃಗಳ ದೇವರು ಅದನ್ನು ಬಲ್ಲವರಾಗಿದ್ದು ನಿಮ್ಮನ್ನು ದಂಡಿಸುವರು,” ಎಂದು ಹೇಳಿದನು.


ಹೀಗೆ ಹೋಗುತ್ತಿರುವಾಗ ದಾರಿಯಲ್ಲಿ ನವೊಮಿ ಅವರಿಗೆ: “ನೀವು ಇಬ್ಬರೂ ನಿಮ್ಮ ತವರುಮನೆಗಳಿಗೆ ಹಿಂದಿರುಗಿರಿ. ನನಗೂ ಮರಣಹೊಂದಿದ ನನ್ನ ಮಕ್ಕಳಿಗೂ ನೀವು ಒಳಿತು ಮಾಡಿದಿರಿ.


“ದೇವಾಧಿದೇವರಾದ ಸರ್ವೇಶ್ವರ ಇದಕ್ಕೆ ಸಾಕ್ಷಿ; ಆ ದೇವಾಧಿದೇವ ಸರ್ವೇಶ್ವರಸ್ವಾಮಿಗೆ ಇದು ಗೊತ್ತಿದೆ. ಇಸ್ರಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರು ಆಗಿದ್ದರೆ ಆ ಸ್ವಾಮಿ ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


ಆಗ ಆ ಗೂಢಚಾರರು, “ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ. ಸರ್ವೇಶ್ವರಸ್ವಾಮಿ ಈ ನಾಡನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ದಯೆಯಿಂದ ನಡೆದುಕೊಳ್ಳುತ್ತೇವೆ,” ಎಂದರು.


ಯಕೋಬನಿಗೆ ಅಂತಿಮಕಾಲ ಹತ್ತಿರ ಆದಾಗ ಅವನು ತನ್ನ ಮಗ ಜೋಸೆಫನನ್ನು ಕರೆಸಿ, “ನನ್ನ ಮೇಲೆ ನಿನಗೆ ಪ್ರೀತಿಯಿದ್ದರೆ ನೀನು ನನ್ನ ಮಾತನ್ನು ಪ್ರೀತಿಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆಸಿಕೊಡಬೇಕು. ಅದೇನೆಂದರೆ; ನನ್ನನ್ನು ಈಜಿಪ್ಟ್ ದೇಶದಲ್ಲಿ ಸಮಾಧಿ ಮಾಡಬಾರದು.


ಹೀಗಿರುವಲ್ಲಿ ನೀವು ನನ್ನೊಡೆಯನಿಗೆ ಪ್ರತಿ ಪ್ರೀತಿಯನ್ನೂ ಪ್ರಾಮಾಣಿಕತೆಯನ್ನೂ ತೋರಲು ಒಪ್ಪಿದರೆ ನನಗೆ ಹೇಳಿ; ಇಲ್ಲವಾದರೆ ಇಲ್ಲವೆನ್ನಿ; ಆಗ ಯಾವ ಕಡೆ ತಿರುಗಬೇಕೆಂದು ನನಗೆ ಗೊತ್ತಾಗುತ್ತದೆ,” ಎಂದು ವಿವರಿಸಿದನು.


ಯೋನಾತಾನನು ಅವನಿಗೆ, “ಇದು ಆಗಲೇಬಾರದು; ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ನಾನು ತಿಳಿಸದಿರುವೆನೇ?” ಎಂದನು.


ದಾವೀದನ ಮತ್ತು ಸೌಲನ ಸಂಭಾಷಣೆ ಮುಗಿಯಿತು. ಇದಾದ ಕೂಡಲೆ ಯೋನಾತಾನನು ಹಾಗು ದಾವೀದನು ಪ್ರಾಣ ಗೆಳೆಯರಾದರು. ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು