Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:10 - ಕನ್ನಡ ಸತ್ಯವೇದವು C.L. Bible (BSI)

10 ದಾವೀದನು ಸೌಲನ ಭಯದಿಂದ ಅದೇ ದಿವಸ ಗತ್ ಊರಿನ ರಾಜನಾದ ಆಕೀಷನ ಬಳಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದಾವೀದನನು ಸೌಲನ ಭಯದಿಂದ ಅದೇ ದಿನ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದಾವೀದನು ಸೌಲನ ಭಯದಿಂದ ಅದೇ ದಿವಸ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ದಿನ ದಾವೀದನು ಸೌಲನಿಗೆ ಭಯಪಟ್ಟು ಗತ್‌ಗೆ ರಾಜನಾದ ಆಕೀಷನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:10
8 ತಿಳಿವುಗಳ ಹೋಲಿಕೆ  

ಅರಸ ಯೆಹೋಯಾಕೀಮನು ಮತ್ತು ಅವನ ಎಲ್ಲ ವೀರಶೂರರು ಹಾಗು ನಾಯಕರು ಆ ಊರೀಯನ ಮಾತುಗಳನ್ನು ಕೇಳಿಸಿಕೊಂಡರು. ಕೂಡಲೆ ಅರಸ ಅವನನ್ನು ಕೊಂದುಹಾಕಲು ಮನಸ್ಸುಮಾಡಿದ. ಈ ಸುದ್ದಿಯನ್ನು ಕೇಳಿದ ಊರೀಯ ಭಯಪಟ್ಟು ಓಡಿಹೋಗಿ ಈಜಿಪ್ಟನ್ನು ಸೇರಿಕೊಂಡ.


ಅವನು ಅದನ್ನು ಕೇಳಿದೊಡನೆ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಜುದೇಯದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬೀಳ್ಕೊಟ್ಟನು.


ಕರುಣೆತೋರು ದೇವಾ, ಜನರೆನ್ನ ಬೆನ್ನಟ್ಟಿ ಬರುತಿಹರು I ದಿನವೆಲ್ಲ ಕದನ ಮಾಡಿ ಶತ್ರುಗಳೆನ್ನ ಬಾಧಿಸುತಿಹರು II


ಈ ಫಿಲಿಷ್ಟಿಯರೊಡನೆ ಯುದ್ಧಮಾಡಲು ಸೌಲನೂ ಇಸ್ರಯೇಲರೂ ತಮ್ಮ ಸೈನ್ಯವನ್ನು ಜಮಾಯಿಸಿಕೊಂಡು ಏಲಾ ಕಣಿವೆಯಲ್ಲಿ ಪಾಳೆಯಮಾಡಿಕೊಂಡು ವ್ಯೂಹಕಟ್ಟಿದರು.


ಹೀಗೆ ದಾವೀದನು ಕತ್ತಿಯಿಂದಲ್ಲ, ಬರೀ ಒಂದು ಕವಣೆಕಲ್ಲಿನಿಂದ ಆ ಫಿಲಿಷ್ಟಿಯನನ್ನು ಸೋಲಿಸಿ ಕೊಂದುಹಾಕಿದನು. ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಫಿಲಿಷ್ಟಿಯರು ಓಡಿಹೋದರು.


ಆ ಯಾಜಕ ಇವನಿಗೆ ಸರ್ವೇಶ್ವರನ ಚಿತ್ತವನ್ನು ತಿಳಿಸಿ, ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು