Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:11 - ಕನ್ನಡ ಸತ್ಯವೇದವು C.L. Bible (BSI)

11 ಆಕೀಷನ ಸೇವಕರು, “’ಸೌಲನು ಕೊಂದನು ಸಾವಿರಗಟ್ಟಳೆ, ದಾವೀದನು ಕೊಂದನು ಹತ್ತುಸಾವಿರಗಟ್ಟಳೆ’ ಎಂಬುದಾಗಿ ಮಹಿಳೆಯರು ಕುಣಿಯುತ್ತಾ ಹಾಡಿದ್ದು ಇವನನ್ನು ಕುರಿತಲ್ಲವೇ?’ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಕೀಷನ ಸೇವಕರು, “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು, ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು ಎಂಬುದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನ ಕುರಿತಲ್ಲವೋ?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಕೀಷನ ಸೇವಕರು - ಸೌಲನು ಸಾವಿರಗಟ್ಟಳೆಯಾಗಿ ಕೊಂದನು; ದಾವೀದನು ಹತ್ತು ಸಾವಿರಗಟ್ಟಳೆಯಾಗಿ ಕೊಂದನು ಎಂಬದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನನ್ನು ಕುರಿತಲ್ಲವೋ? ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಕೀಷನ ಅಧಿಕಾರಿಗಳಿಗೆ ದಾವೀದನ ಆಗಮನ ಇಷ್ಟವಾಗಲಿಲ್ಲ. ಅವರು, “ಇವನು ದಾವೀದನು, ಇಸ್ರೇಲ್ ದೇಶದ ರಾಜನು. ಇವನನ್ನು ಕುರಿತೇ ಇಸ್ರೇಲರು ಹಾಡುತ್ತಾರೆ. ಅವರು ಇವನಿಗಾಗಿ ಹಾಡಿ ಕುಣಿಯುತ್ತಾರೆ. “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು! ಎಂಬ ಈ ಹಾಡನ್ನು ಇಸ್ರೇಲರು ಹಾಡುತ್ತಾರೆ” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಕೀಷನ ಸೇವಕರು ಅವನಿಗೆ, “ಇವನು ನಾಡಿನ ಅರಸನಾದ ದಾವೀದನಲ್ಲವೋ? “ ‘ಸೌಲನು ಸಾವಿರಗಳನ್ನೂ, ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನು,’ ಎಂದು ಸ್ತ್ರೀಯರು ನೃತ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಇವನನ್ನು ಕುರಿತಲ್ಲವೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:11
8 ತಿಳಿವುಗಳ ಹೋಲಿಕೆ  

‘ಸೌಲನು ಕೊಂದನು ಸಾವಿರಗಟ್ಟಳೆ, ದಾವೀದನೋ ಕೊಂದನು ಹತ್ತು ಸಾವಿರಗಟ್ಟಳೆ,’ ಎಂದು ಮಹಿಳೆಯರು ಕುಣಿಯುತ್ತಾ ಪರಸ್ಪರವಾಗಿ ಹಾಡಿದ್ದು ಈ ದಾವೀದನನ್ನೇ ಕುರಿತು ಅಲ್ಲವೇ?’ ಎಂದರು.


ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


ಹೀಗೆ ದಾವೀದನು ತಪ್ಪಿಸಿಕೊಂಡು ರಾಮಾದಲ್ಲಿದ್ದ ಸಮುವೇಲನ ಬಳಿಗೆ ಬಂದನು. ಸೌಲನು ತನಗೆ ಮಾಡಿದ್ದೆಲ್ಲವನ್ನೂ ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ಒಂದು ಮಠದಲ್ಲಿ ವಾಸವಾಗಿ ಇದ್ದರು.


ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.


ಅಂತೆಯೇ ಅವನು ತನ್ನ ಆರುನೂರು ಮಂದಿ ಸೈನಿಕರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.


ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು I ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು