Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:13 - ಕನ್ನಡ ಸತ್ಯವೇದವು C.L. Bible (BSI)

13 ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಕದಗಳ ಮೇಲೆ ಗೀಜುತ್ತಾ ತನ್ನನ್ನು ಹುಚ್ಚನಂತೆ ತೋರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಬಾಗಿಲುಗಳನ್ನು ಕೆರೆಯುತ್ತಾ, ತನ್ನನ್ನು ಹುಚ್ಚನಂತೆ ನಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ ಕದಗಳನ್ನು ಕೆರೆಯುತ್ತಾ ತನ್ನನ್ನು ಹುಚ್ಚನಂತೆ ತೋರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ದಾವೀದನು ಆಕೀಷನ ಮತ್ತು ಅವನ ಅಧಿಕಾರಿಗಳ ಎದುರಿನಲ್ಲಿ ಹುಚ್ಚನಂತೆ ನಟಿಸಿದನು. ದಾವೀದನು ಅವರೊಂದಿಗೆ ಇರುವಾಗಲೆಲ್ಲ ಹುಚ್ಚನಂತೆ ವರ್ತಿಸಿದನು. ಅವನು ದ್ವಾರದ ಬಾಗಿಲುಗಳ ಮೇಲೆ ಉಗುಳಿದನು; ಅವನ ಜೊಲ್ಲು ಗಡ್ಡದವರೆಗೂ ಸುರಿಯುವಂತೆ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರ ಕಣ್ಣು ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ, ಅವರಿಗೆ ತನ್ನನ್ನು ಹುಚ್ಚನ ಹಾಗೆಯೇ ತೋರಮಾಡಿ, ದ್ವಾರದ ಕದಗಳನ್ನು ಕೆರೆಯುತ್ತಾ, ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:13
7 ತಿಳಿವುಗಳ ಹೋಲಿಕೆ  

ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.


ದಬ್ಬಾಳಿಕೆ ಬುದ್ಧಿವಂತನನ್ನೂ ಹುಚ್ಚನನ್ನಾಗಿಸುತ್ತದೆ; ಲಂಚಕೋರತನ ಅಂತರಂಗವನ್ನೂ ಕೆಡಿಸುತ್ತದೆ.


ಹೆಂಗಸಿನ ತಲೆಯಲ್ಲಾಗಲಿ ಗಂಡಸಿನ ತಲೆಯಲ್ಲಿ ಅಥವಾ ಗಡ್ಡದಲ್ಲಾಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಿ ನೋಡಬೇಕು.


ಆಗ ಆಕೀಷನು ತನ್ನ ಸೇವಕರಿಗೆ, “ಈ ಮನುಷ್ಯ ಹುಚ್ಚನೆಂದು ನಿಮಗೆ ಕಾಣುವುದಿಲ್ಲವೇ? ಇವನನ್ನು ನನ್ನ ಹತ್ತಿರ ಏಕೆ ತಂದಿರಿ?


ಸೌಲನು ಹಾಗು ಇಸ್ರಯೇಲರೆಲ್ಲರು ಅವನ ಸವಾಲನ್ನು ಕೇಳಿ ಭಯಭೀತರಾದರು. ಅವರ ಎದೆ ಅದುರಿತು.


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು