1 ಸಮುಯೇಲ 21:4 - ಕನ್ನಡ ಸತ್ಯವೇದವು C.L. Bible (BSI)4 ಆ ಯಾಜಕನು ದಾವೀದನಿಗೆ, “ನನ್ನ ಬಳಿಯಲ್ಲಿ ಪವಿತ್ರವಾದ ಮೀಸಲು ರೊಟ್ಟಿಗಳ ಹೊರತು ಬೇರೆ ರೊಟ್ಟಿಗಳಿಲ್ಲ; ನಿಮ್ಮ ಆಳುಗಳು ಸದ್ಯಕ್ಕೆ ಸಂಗಬಿಟ್ಟವರಾಗಿದ್ದರೆ ಅವುಗಳನ್ನು ಕೊಡಬಹುದು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯಾಜಕನು ದಾವೀದನಿಗೆ, “ನನ್ನ ಬಳಿಯಲ್ಲಿ ಮೀಸಲು ರೊಟ್ಟಿಗಳು ಹೊರತು ಬೇರೆ ರೊಟ್ಟಿಗಳಿಲ್ಲ. ನಿನ್ನ ಆಳುಗಳು ಸ್ತ್ರೀಸಂಗ ಬಿಟ್ಟವರಾಗಿದ್ದರೆ ಅವುಗಳನ್ನು ಕೊಡಬಹುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯಾಜಕನು ದಾವೀದನಿಗೆ - ನನ್ನ ಬಳಿಯಲ್ಲಿ ಮೀಸಲ ರೊಟ್ಟಿಗಳ ಹೊರತು ಬೇರೆ ರೊಟ್ಟಿಗಳಿಲ್ಲ; ನಿನ್ನ ಆಳುಗಳು ಸ್ತ್ರೀಸಂಗ ಬಿಟ್ಟವರಾಗಿದ್ದರೆ ಅವುಗಳನ್ನು ಕೊಡಬಹುದು ಎನ್ನಲು ದಾವೀದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯಾಜಕನು ದಾವೀದನಿಗೆ, “ನನ್ನ ಬಳಿ ಸಾಧಾರಣವಾದ ರೊಟ್ಟಿಗಳಿಲ್ಲ. ಆದರೆ ಕೆಲವು ಪವಿತ್ರ ರೊಟ್ಟಿಗಳಿವೆ. ನಿನ್ನ ಸೈನಿಕರು ಯಾವ ಹೆಂಗಸಿನೊಡನೆಯೂ ಲೈಂಗಿಕ ಸಂಬಂಧ ಮಾಡಿಲ್ಲದಿದ್ದರೆ ಅವರು ಅವುಗಳನ್ನು ತಿನ್ನಬಹುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯಾಜಕನು ದಾವೀದನಿಗೆ ಉತ್ತರವಾಗಿ, “ಪರಿಶುದ್ಧವಾಗಿಸಿದ ರೊಟ್ಟಿಯ ಹೊರತಾಗಿ, ನನ್ನ ಕೈಯಲ್ಲಿ ಸಾಧಾರಣವಾದ ಒಂದು ರೊಟ್ಟಿಯಾದರೂ ಇಲ್ಲ. ಆ ರೊಟ್ಟಿಗಳನ್ನು ಸ್ತ್ರೀಯರೊಂದಿಗೆ ಸಂಪರ್ಕ ಮಾಡದವರಿಗೆ ಕೊಡಬಹುದು,” ಎಂದನು. ಅಧ್ಯಾಯವನ್ನು ನೋಡಿ |