Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:7 - ಕನ್ನಡ ಸತ್ಯವೇದವು C.L. Bible (BSI)

7 ಅದೇ ದಿನ ಸೌಲನ ಪಶುಪಾಲರಲ್ಲಿ ಮುಖ್ಯಸ್ಥನಾದ ದೋಯೇಗನೆಂಬ ಎದೋಮ್ಯನು ಸರ್ವೇಶ್ವರನ ಆಲಯದಲ್ಲಿ ತಂಗಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದೇ ದಿನ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ಉಳಿದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದೇ ದಿವಸ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ತಡೆಯಲ್ಪಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೌಲನ ಅಧಿಕಾರಿಗಳಲ್ಲಿ ಒಬ್ಬನು ಆ ದಿನ ಅಲ್ಲಿದ್ದನು. ಅವನು ದೋಯೇಗನೆಂಬ ಎದೋಮ್ಯನು. ದೋಯೇಗನನ್ನು ಯೆಹೋವನ ಸನ್ನಿಧಿಯಲ್ಲಿ ಇಟ್ಟಿದ್ದರು. ಸೌಲನ ಕುರಿಗಳನ್ನು ಕಾಯುವವರಿಗೆ ದೋಯೇಗನು ನಾಯಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಯೆಹೋವ ದೇವರ ಆಲಯದ ಮುಂದೆ ಉಳಿದುಕೊಂಡಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:7
21 ತಿಳಿವುಗಳ ಹೋಲಿಕೆ  

ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಆ ಜೆಸ್ಸೆಯನ ಮಗ ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆ.


ಶಾರೋನಿನಲ್ಲಿ ಮೇಯುವ ದನಗಳ ಮೇಲೆ‍ ಶಾರೋನ್ಯನಾದ ಶಿಟ್ರೈ; ಕಣಿವೆಗಳಲ್ಲಿ ಮೇಯುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟ್;


‘ಬರಿಯ ಮಾತಿನ ಮನ್ನಣೆಯನ್ನೀಯುತ ಹೃದಯವನು ದೂರವಿರಿಸುತ ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ


“ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ? ಕೊಳಗವನ್ನು ಕಿರಿದು ಮಾಡೋಣ, ತೊಲವನ್ನು ಹಿರಿದು ಮಾಡೋಣ, ಕಳ್ಳತಕ್ಕಡಿಯನ್ನು ಬಳಸೋಣ;


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಅವನಿಗೆ ಇಳಕಲಿನ ಪ್ರದೇಶದಲ್ಲೂ ತಪ್ಪಲ ಸೀಮೆಯಲ್ಲೂ ಅಲ್ಲದೆ ಅಡವಿಯಲ್ಲೂ ಪಶುಪ್ರಾಣಿಗಳ ದೊಡ್ಡಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ವ್ಯವಸಾಯದಲ್ಲಿ ಅವನಿಗೆ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿತೋಟಗಳ ಕೆಲಸಗಾರರನ್ನು ನೇಮಿಸಿದನು.


ಸೌಲನು ಇಸ್ರಯೇಲರ ಅರಸನಾದ ಮೇಲೆ ಅವನು ಸುತ್ತಲಿನ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಜನರು ಗೋಳಾಡುವುದಕ್ಕೇನು ಕಾರಣವೆಂದು ಕೇಳಲು ಯಾಬೇಷಿನವರ ವರ್ತಮಾನವನ್ನು ಅವನಿಗೆ ತಿಳಿಸಲಾಯಿತು.


ಗೆರಾರಿನ ದನಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನಕಾಯುವವರ ಸಂಗಡ ಜಗಳವಾಡಿದರು. ಆದುದರಿಂದ ಇಸಾಕನು ಆ ಬಾವಿಗೆ “ಏಸೆಕ್" ಎಂದು ಹೆಸರಿಟ್ಟರು.


ದಾವೀದನು ಅಹೀಮೆಲೆಕನನ್ನು, “ಅರಸನ ಕಾರ್ಯ ತುರ್ತಾದದ್ದು. ಆದ್ದರಿಂದ ಕತ್ತಿಯನ್ನಾಗಲಿ ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲು ಆಗಲಿಲ್ಲ. ನಿನ್ನ ಬಳಿಯಲ್ಲಿ ಭರ್ಜಿಯಾಗಲಿ, ಕತ್ತಿಯಾಗಲಿ ಇಲ್ಲವೇ?’ ಎಂದು ಕೇಳಿದನು.


ದಾವೀದನು, “ಎದೋಮ್ಯನಾದ ದೋಯೇಗನನ್ನು ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ನೆನೆಸಿಕೊಂಡೆ; ನಿನ್ನ ಸಂಬಂಧಿಕರ ವಧೆಗೆ ನಾನೇ ಕಾರಣನಾದೆನಲ್ಲಾ!


ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್.


“ಯಾಜಕನಲ್ಲದವನು ನೈವೇದ್ಯಪದಾರ್ಥಗಳನ್ನು ಊಟಮಾಡಕೂಡದು. ಅಂತೆಯೇ ಯಾಜಕನ ಅತಿಥಿಯಾಗಲಿ, ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.


ಯಾಜಕನ ಮಗಳು ವಿಧವೆಯಾಗಿದ್ದರೆ, ಗಂಡಬಿಟ್ಟವಳಾಗಿದ್ದರೆ, ಮಕ್ಕಳಿಲ್ಲದೆ ಇದ್ದರೆ, ಬಾಲ್ಯದಲ್ಲಿ ತಂದೆಯ ಬಳಿ ಇದ್ದಂತೆಯೇ ಮತ್ತೆ ತಂದೆಯ ಮನೆ ಸೇರಿದ್ದರೆ ಆಕೆ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.


“ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಕಿಲೋಗ್ರಾಂನದಾಗಿರಬೇಕು.


ಶಾಶ್ವತವಾದ ನಿಬಂಧನೆಯ ಮೇರೆಗೆ ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮಪಡಿಸಿ ಅವುಗಳನ್ನು ಇಸ್ರಯೇಲರ ಪರವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


ಆ ಯಾಜಕ ಇವನಿಗೆ ಸರ್ವೇಶ್ವರನ ಚಿತ್ತವನ್ನು ತಿಳಿಸಿ, ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು