Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:12 - ಕನ್ನಡ ಸತ್ಯವೇದವು C.L. Bible (BSI)

12 ಅರಸನು, “ಅಹೀಟೂಬನ ಮಗನೇ, ನಾನು ಕೇಳುವ ಪ್ರಶ್ನೆಗೆ ಉತ್ತರಕೊಡು,” ಎಂದನು. ಅದಕ್ಕೆ ಅವನು, “ಒಡೆಯಾ, ಅಪ್ಪಣೆಯಾಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೌಲನು, “ಅಹೀಟೂಬನ ಮಗನೇ ಕೇಳು” ಅಂದನು. ಅದಕ್ಕೆ ಅವನು, “ಒಡೆಯಾ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕೆ ಅವನು - ಒಡೆಯಾ, ಅಪ್ಪಣೆಯಾಗಲಿ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸೌಲನು ಅಹೀಮೆಲೆಕನಿಗೆ, “ಅಹೀಟೂಬನ ಮಗನೇ, ಈಗ ನನ್ನ ಮಾತನ್ನು ಕೇಳು” ಎಂದು ಹೇಳಿದನು. ಅಹೀಮೆಲೆಕನು, “ಆಗಲೀ, ಸ್ವಾಮಿ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಸೌಲನು, “ಅಹೀಟೂಬನ ಮಗನೇ, ಕೇಳು,” ಎಂದನು. ಅದಕ್ಕವನು, “ನನ್ನ ಒಡೆಯನೇ, ನಾನು ಇಲ್ಲಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:12
6 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನನ್ನನ್ನು ವಿಚಾರಿಸದವರಿಗೂ ನಾ ದರ್ಶನವಿತ್ತೆ. ನನ್ನನ್ನು ಹುಡುಕದವರಿಗೂ ನಾ ಒಡನೆ ಸಿಕ್ಕಿದೆ. ನನ್ನ ನಾಮಸ್ಮರಣೆ ಮಾಡದ ಜನಾಂಗಕ್ಕೆ, ಇಗೋ, ‘ಇದ್ದೇನೆ, ಇಲ್ಲೇ ಇದ್ದೇನೆ’ ಎನ್ನುತ್ತಿದ್ದೆ.


ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಆ ಮೆಫೀಬೋಶೆತನು ಬಂದು ದಾವೀದನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ದಾವೀದನು, “ಮೆಫೀಬೋಶೆತನೇ,” ಎಂದೊಡನೆ ಅವನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ,” ಎಂದನು.


ಆಗ ಸೌಲನು, “ನೀನು ನನಗೆ ವಿರೋಧವಾಗಿ ಜೆಸ್ಸೆಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿ ಹಾಗು ಕತ್ತಿಯನ್ನು ಕೊಟ್ಟು ದೈವೋತ್ತರವನ್ನು ತಿಳಿಸಿದ್ದೇಕೆ?” ಎಂದು ಕೇಳಿದನು.


ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಕುಲಪುತ್ರರೇ ಕೇಳಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ಮಾಡುವುದೇಕೆ? ಜೆಸ್ಸೆಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಯೇ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುತ್ತಾನೆಯೆ?


ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನು ಹಾಗು ಅವನ ಕುಟುಂಬಕ್ಕೆ ಸೇರಿದ್ದ ನೋಬದ ಬೇರೆ ಎಲ್ಲಾ ಯಾಜಕರನ್ನೂ ಬರಮಾಡಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬಂದರು.


ಸೌಲ ಹಿಂದಿರುಗಿ ನನ್ನನ್ನು ಕರೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು