Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:2 - ಕನ್ನಡ ಸತ್ಯವೇದವು C.L. Bible (BSI)

2 ಇದಲ್ಲದೆ ಶೋಷಿತರು, ಸಾಲಗಾರರು ಹಾಗು ಮನನೊಂದವರು ಆಗಿದ್ದ ಜನಸಾಮಾನ್ಯರು ಬಂದು ಅವನನ್ನು ಆಶ್ರಯಿಸಿಕೊಂಡರು. ಹೀಗೆ ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಕುಗ್ಗಿದವರೂ, ಸಾಲಗಾರರೂ, ಮನನೊಂದವರೂ, ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು, ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಕುಗ್ಗಿದವರೂ ಸಾಲಗಾರರೂ ಮನನೊಂದವರೂ ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾವೀದನ ಜೊತೆ ಅನೇಕ ಜನರು ಸೇರಿಕೊಂಡರು. ತೊಂದರೆಯಲ್ಲಿರುವವರು, ಸಾಲಗಾರರು ಮತ್ತು ಅತೃಪ್ತರಾದವರು ದಾವೀದನನ್ನು ಆಶ್ರಯಿಸಿಕೊಂಡರು. ದಾವೀದನು ಅವರಿಗೆಲ್ಲಾ ನಾಯಕನಾದನು. ದಾವೀದನೊಂದಿಗೆ ನಾನೂರು ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಶ್ರಮಪಟ್ಟವರೂ, ಸಾಲಗಾರರೂ, ಅಸಂತುಷ್ಟರೂ ಅವನ ಸಂಗಡ ಕೂಡಿಕೊಂಡರು. ಆಗ ದಾವೀದನು ಅವರಿಗೆ ಅಧಿಪತಿಯಾದನು. ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:2
22 ತಿಳಿವುಗಳ ಹೋಲಿಕೆ  

“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.


ಆಗ ದಾವೀದನು ತನ್ನ ಜನರಿಗೆ, “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿ,” ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರುಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರುಮಂದಿ ಸಾಮಾಗ್ರಿಗಳನ್ನು ಕಾಯುತ್ತಾ ಅಲ್ಲೇ ಇದ್ದರು.


ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಎಲ್ಲೆಲ್ಲಿಯೋ ಅಲೆದಾಡಿದನು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡನು ಎಂದು ಸೌಲನಿಗೆ ಗೊತ್ತಾಗಲು ಅವನು ಪ್ರಯಾಣವನ್ನು ನಿಲ್ಲಿಸಿಬಿಟ್ಟನು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.


ಹನ್ನಳು ಬಹು ದುಃಖದಿಂದ ಕಣ್ಣೀರಿಡುತ್ತಾ ಸರ್ವೇಶ್ವರನಲ್ಲಿ ಹೀಗೆಂದು ಪ್ರಾರ್ಥಿಸಿದಳು:


ಅವನು ತನ್ನ ಸಹೋದರನನ್ನು ಬಿಟ್ಟು ಟೋಬ್ ದೇಶಕ್ಕೆ ಹೋದನು. ಅಲ್ಲಿನ ಪುಂಡಪೋಕರಿಗಳು ಕೂಡಿ ಅವನನ್ನು ಹಿಂಬಾಲಿಸಿದರು.


ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.


ಯೊವಾನ್ನನು ತನ್ನ ಸಂದೇಶವನ್ನು ಸಾರಿದಂದಿನಿಂದ ಇಂದಿನವರೆಗೆ ಸ್ವರ್ಗಸಾಮ್ರಾಜ್ಯವು ನೂಕುನುಗ್ಗಲಿಗೆ ಗುರಿಯಾಗಿದೆ. ಬಲಪ್ರಯೋಗ ಮಾಡುವವರು ಅದನ್ನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.


ಸಾರಾಯಿ ಸಾಯುತ್ತಿರುವವನಿಗಿರಲಿ; ಮದ್ಯ, ಮನೋವ್ಯಥೆಪಡುವವನಿಗಿರಲಿ.


“ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಒಡೆಯನಾಗಿರುವ ಹಿಜ್ಕೀಯನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ತಮ್ಮ ತಂದೆ ಮತ್ತು ಅವನ ಜನರೂ ಶೂರರಾಗಿದ್ದಾರೆಂದೂ, ಈಗಲಾದರೋ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷ ಉಳ್ಳವರಾಗಿದ್ದಾರೆಂದೂ ತಮಗೆ ಗೊತ್ತುಂಟಲ್ಲವೆ? ಇದಲ್ಲದೆ ತಮ್ಮ ತಂದೆ ಯುದ್ಧ ನಿಪುಣನು; ಜನರ ಮಧ್ಯದಲ್ಲಿ ರಾತ್ರಿ ಕಳೆಯುವುದಿಲ್ಲ.


ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.


ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ಸಿಟ್ಟಿನವರು. ಅವರು ನಿಮ್ಮ ಮೇಲೆ ಬಿದ್ದರೆ ನೀನೂ ನಿನ್ನ ಮನೆಯವರೂ ಪ್ರಾಣನಷ್ಟಪಡುವಿರಿ. ಆದುದರಿಂದ ಬಾಯಿಮುಚ್ಚಿಕೊಂಡು ಹೋಗಿ,” ಎಂದು ಹೇಳಿ ಮುಂದೆ ನಡೆದರು.


ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋದನು. ಅಲ್ಲಿನ ರಾಜನನ್ನು, “ದೇವರು ನನಗೆ ಮಾರ್ಗತೋರಿಸುವವರೆಗೂ ನನ್ನ ತಂದೆತಾಯಿಗಳು ನಿಮ್ಮ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡನು.


ಒಂದು ದಿನ ಪ್ರವಾದಿಮಂಡಲಿಯವರಲ್ಲಿ ಒಬ್ಬನ ಹೆಂಡತಿ ಎಲೀಷನನ್ನು ಭೇಟಿಯಾದಳು. ಅವನಿಗೆ, “ನಿಮ್ಮ ಸೇವಕನಾದ ನನ್ನ ಗಂಡ ಮರಣಹೊಂದಿದನು. ಅವನು ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವನಾಗಿದ್ದನೆಂಬುದು ನಿಮಗೆ ತಿಳಿದ ವಿಷಯ. ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ಗುಲಾಮರನ್ನಾಗಿ ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ,” ಎಂದು ಮೊರೆಯಿಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು