Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:20 - ಕನ್ನಡ ಸತ್ಯವೇದವು C.L. Bible (BSI)

20 ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಏಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬುವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಎಬ್ಯಾತಾರನು ತಪ್ಪಿಸಿಕೊಂಡನು. ಎಬ್ಯಾತಾರನು ಅಹೀಮೆಲೆಕನ ಮಗ. ಅಹೀಮೆಲೆಕನು ಅಹೀಟೂಬನ ಮಗ. ಎಬ್ಯಾತಾರನು ಓಡಿಹೋಗಿ ದಾವೀದನ ಜೊತೆ ಸೇರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಅಹೀಟೂಬನ ಮಗನಾಗಿರುವ ಅಹೀಮೆಲೆಕನ ಮಕ್ಕಳಲ್ಲಿ ಒಬ್ಬನಾದ ಅಬಿಯಾತರನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:20
15 ತಿಳಿವುಗಳ ಹೋಲಿಕೆ  

ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ‘ಏಫೋದ’ನ್ನು ತಂದಿದ್ದನು.


ಆದರೂ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿ ಧೈರ್ಯ ತಂದುಕೊಂಡನು. ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ‘ಏಫೋದ’ನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿದನು. ಅವನು ತಂದನು.


ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆಂದು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿ ತರಿಸಿ,


ಆಗ ತಟ್ಟನೆ ಅರಣ್ಯ ಕಡೆಯಿಂದ ಬಿರುಗಾಳಿ ಎದ್ದಿತು; ನಾಲ್ಕು ಕಡೆಯಿಂದಲೂ ಮನೆಗೆ ಬಡಿಯಿತು. ಮನೆ ಕುಸಿದುಬಿತ್ತು. ಯುವಕಯುವತಿಯರೆಲ್ಲ ಸತ್ತುಹೋದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ತಂದಿದ್ದೇನೆ,” ಎಂದು ತಿಳಿಸಿದನು.


ಅದೇ ದಿನ ಒಬ್ಬ ಬೆನ್ಯಾಮೀನ್ಯನು ರಣರಂಗದಿಂದ ತಪ್ಪಿಸಿಕೊಂಡು, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು,


ನನ್ನ ಸಾನ್ನಿಧ್ಯ ಸೇವೆಯಿಂದ ನಿಮ್ಮಲ್ಲಿ ಒಬ್ಬನನ್ನು ಉಳಿಸಿ ಮಿಕ್ಕವರನ್ನು ತೆಗೆದುಹಾಕುವೆನು. ಉಳಿಸಲಾದವನು ಕೂಡ ಕುರುಡನಾಗಿ ನಿನ್ನ ವ್ಯಥೆಗೆ ಕಾರಣನಾಗುವನು. ನಿನ್ನ ಸಂತಾನದವರೆಲ್ಲರು ಕತ್ತಿಯಿಂದ ಸಾಯುವರು.


ಶೆವನು ಕಾರ್ಯದರ್ಶಿ, ಚಾದೋಕ್ ಹಾಗು ಎಬ್ಯಾತಾರರು ಯಾಜಕರು;


‘ಏಫೋದ’ನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದನು. ಈ ಅಹೀಯನು ಶಿಲೋವಿನಲ್ಲಿ ಸರ್ವೇಶ್ವರನ ಯಾಜಕನಾಗಿದ್ದ ಏಲಿಯ ಮರಿಮಗನೂ ಫೀನೆಹಾಸನ ಮೊಮ್ಮಗನೂ ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.


ಸೌಲನು ಸರ್ವೇಶ್ವರನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಿದನು.


ಚಾದೋಕನೂ ಅವನ ವಶದಲ್ಲಿದ್ದ ಲೇವಿಯರೆಲ್ಲರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು, ಅದನ್ನು ಜನರೆಲ್ಲರು ದಾಟಿ ಹೋಗುವವರೆಗೆ ಕೆಳಗಿಳಿಸಿದ್ದರು. ಎಬ್ಯಾತಾರನೂ ಬಂದಿದ್ದನು.


ಜೆರೂಯಳ ಮಗ ಯೋವಾಬನನ್ನೂ ಯಾಜಕ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡಿದ್ದನು. ಇವರು ಅವನಿಗೆ ಬೆಂಬಲ ವ್ಯಕ್ತಪಡಿಸಿದ್ದರು.


ದಾವೀದನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರೆಂಬುವರನ್ನು ಕರೆಯಿಸಿದನು; ಅಂತೆಯೇ ಲೇವಿಯರಾದ ಊರಿಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೋಲ್ ಮತ್ತು ಅಮ್ಮೀನಾದಾಬ್ ಎಂಬವರನ್ನೂ ಕರೆಯಿಸಿದನು.


ಅಹೀಟೂಬನ ಮಗ ಚಾದೋಕನು ಹಾಗು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಶವ್ಷನು ಅವನಿಗೆ ಲೇಖಕನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು