Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:3 - ಕನ್ನಡ ಸತ್ಯವೇದವು C.L. Bible (BSI)

3 ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋದನು. ಅಲ್ಲಿನ ರಾಜನನ್ನು, “ದೇವರು ನನಗೆ ಮಾರ್ಗತೋರಿಸುವವರೆಗೂ ನನ್ನ ತಂದೆತಾಯಿಗಳು ನಿಮ್ಮ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋಗಿ ಅಲ್ಲಿಯ ಅರಸನಿಗೆ, “ದೇವರು ನನಗೆ ಮಾರ್ಗತೋರಿಸುವವರೆಗೆ ನನ್ನ ತಂದೆತಾಯಿಗಳು ನಿನ್ನ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡು, ಅವರನ್ನು ಅವನ ಬಳಿಯಲ್ಲಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್‍ದೇಶದ ವಿುಚ್ಪೆ ಎಂಬಲ್ಲಿಗೆ ಕರಕೊಂಡು ಹೋಗಿ ಅಲ್ಲಿನ ಅರಸನನ್ನು - ದೇವರು ನನಗೆ ಮಾರ್ಗತೋರಿಸುವವರೆಗೂ ನನ್ನ ತಂದೆತಾಯಿಗಳು ನಿನ್ನ ಬಳಿಯಲ್ಲಿರುವದಕ್ಕೆ ಅಪ್ಪಣೆಯಾಗಬೇಕೆಂದು ಬೇಡಿಕೊಂಡು ಅವರನ್ನು ಅವನ ಬಳಿಯಲ್ಲಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದಾವೀದನು ಅದುಲ್ಲಾಮನ್ನು ಬಿಟ್ಟು ಮೋವಾಬಿನ ಮಿಚ್ಪೆಗೆ ಹೋದನು. ದಾವೀದನು ಮೋವಾಬ್ ರಾಜನಿಗೆ, “ದೇವರು ನನಗೇನು ಮಾಡುತ್ತಾನೆಂಬುದನ್ನು ನಾನು ತಿಳಿದುಕೊಳ್ಳುವ ತನಕ, ನನ್ನ ತಂದೆತಾಯಿಗಳು ನಿನ್ನಲ್ಲಿಗೆ ಬಂದು ಇರಲು ದಯವಿಟ್ಟು ನನಗೆ ಅವಕಾಶ ಕೊಡು” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದಾವೀದನು ಅಲ್ಲಿಂದ ಹೊರಟು ಮೋವಾಬ್ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆ, “ದೇವರು ನನಗೆ ಏನು ಮಾಡುವರೋ ಎಂದು ನಾನು ತಿಳಿಯುವವರೆಗೂ, ನನ್ನ ತಂದೆತಾಯಿಗಳು ಹೊರಟುಬಂದು ನಿನ್ನ ಬಳಿಯಲ್ಲಿ ವಾಸಿಸಿರಲಿ,” ಎಂದು ಹೇಳಿ, ಅವರನ್ನು ಮೋವಾಬಿನ ಅರಸನ ಬಳಿಗೆ ಕರೆತಂದು ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:3
15 ತಿಳಿವುಗಳ ಹೋಲಿಕೆ  

ವಿಧವೆಯಾದವಳಿಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ, ಆ ಮಕ್ಕಳು ಮೊತ್ತಮೊದಲು ತಮ್ಮ ಸ್ವಂತ ಕುಟುಂಬಕ್ಕೆ ಸಹಾಯಮಾಡಬೇಕಾದುದು ಅವರ ಧಾರ್ಮಿಕ ಕರ್ತವ್ಯವೆಂಬುದು ಅವರಿಗೆ ತಿಳಿದಿರಲಿ. ಹೀಗೆ ಅವರು ತಮ್ಮ ತಂದೆತಾಯಿಯರಿಗೆ ಪ್ರತ್ಯುಪಕಾರಮಾಡಿದಂತಾಗುತ್ತದೆ. ಅಲ್ಲದೆ, ಇದು ದೇವರ ದೃಷ್ಟಿಯಲ್ಲಿ ಮೆಚ್ಚುಗೆ ಪಡೆದುದು.


ಸೌಲನು ಇಸ್ರಯೇಲರ ಅರಸನಾದ ಮೇಲೆ ಅವನು ಸುತ್ತಲಿನ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನೂ ತಿಳಿಸಿದನು. ಏಲಿ ಅದನ್ನು ಕೇಳಿ, “ಅವರೇ ಸರ್ವೇಶ್ವರ. ತಮಗೆ ಸರಿಕಂಡಂತೆ ಮಾಡಲಿ,” ಎಂದನು.


ನೆರೆಹೊರೆಯ ಮಹಿಳೆಯರು, “ನವೊಮಿಗೆ ಕುಲಪುತ್ರನೊಬ್ಬನು ಹುಟ್ಟಿದ್ದಾನೆ!” ಎಂದು ಹೇಳಿ ಆ ಮಗುವಿಗೆ “ಓಬೇದ್” ಎಂದು ಹೆಸರಿಟ್ಟರು. ಇವನೇ ಜೆಸ್ಸೆಯ ತಂದೆ, ದಾವೀದನ ತಾತ.


ಇದಲ್ಲದೆ, ಮಹ್ಲೋನನ ಪತ್ನಿಯಾದ ಮೋವಾಬ್ಯದ ರೂತಳನ್ನು ನನ್ನ ಹೆಂಡತಿಯನ್ನಾಗಿ ಸ್ವೀಕರಿಸಿದ್ದೇನೆ. ಇದರಿಂದ ಹೊಲದ ಖಾತೆ ಗತಿಸಿದ ಮಹ್ಲೋನನ ಹೆಸರಿನಲ್ಲೇ ಉಳಿಯುವುದು. ಮಾತ್ರವಲ್ಲ, ಅವನ ವಂಶವೃಕ್ಷವು ಅವನ ಬಂಧುಬಳಗದವರಲ್ಲೂ ಊರಿನಲ್ಲೂ ನೆಲೆಯಾಗಿರುವುದು. ಇದಕ್ಕೆ ನೀವೆಲ್ಲರೂ ಸಾಕ್ಷಿಗಳು,” ಎಂದನು.


ಆಗ ಸರ್ವೇಶ್ವರನ ಆತ್ಮ ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ನಾಡು, ಇವುಗಳಲ್ಲಿ ಸಂಚರಿಸಿ ಮತ್ತೆ ಗಿಲ್ಯಾದಿನ ಮಿಚ್ಫೆಗೆ ಬಂದು ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.


ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.


ಫರೋಹನ ಅಪ್ಪಣೆಯ ಮೇರೆಗೆ ಜೋಸೆಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಈಜಿಪ್ಟಿನಲ್ಲಿ ವಾಸಸ್ಥಾನವನ್ನು ನೇಮಿಸಿ, ಅದರಲ್ಲಿ ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸೊತ್ತನ್ನು ಕೊಟ್ಟನು.


ಇದಲ್ಲದೆ ಶೋಷಿತರು, ಸಾಲಗಾರರು ಹಾಗು ಮನನೊಂದವರು ಆಗಿದ್ದ ಜನಸಾಮಾನ್ಯರು ಬಂದು ಅವನನ್ನು ಆಶ್ರಯಿಸಿಕೊಂಡರು. ಹೀಗೆ ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.


ಅವರನ್ನು ಆ ರಾಜನ ಬಳಿಯಲ್ಲಿ ಬಿಟ್ಟನು. ದಾವೀದನು ದುರ್ಗದಲ್ಲಿದ್ದ ಕಾಲವೆಲ್ಲಾ ಅವನ ತಂದೆತಾಯಿಗಳು ಆ ರಾಜನ ಬಳಿಯಲ್ಲೇ ವಾಸವಾಗಿದ್ದರು.


ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು