Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:4 - ಕನ್ನಡ ಸತ್ಯವೇದವು C.L. Bible (BSI)

4 ಅವರನ್ನು ಆ ರಾಜನ ಬಳಿಯಲ್ಲಿ ಬಿಟ್ಟನು. ದಾವೀದನು ದುರ್ಗದಲ್ಲಿದ್ದ ಕಾಲವೆಲ್ಲಾ ಅವನ ತಂದೆತಾಯಿಗಳು ಆ ರಾಜನ ಬಳಿಯಲ್ಲೇ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಾವೀದನು ದುರ್ಗದಲ್ಲಿದ್ದ ಕಾಲವೆಲ್ಲಾ ಅವನ ತಂದೆತಾಯಿಗಳು ಈ ಅರಸನ ಬಳಿಯಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದಾವೀದನು ದುರ್ಗದಲ್ಲಿದ್ದ ಕಾಲವೆಲ್ಲಾ ಅವನ ತಂದೆತಾಯಿಗಳು ಈ ಅರಸನ ಬಳಿಯಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ರಾಜನ ಹತ್ತಿರ ಬಿಟ್ಟನು. ದಾವೀದನ ತಂದೆತಾಯಿಗಳು ಅವನು ಕೋಟೆಯಲ್ಲಿರುವ ತನಕ ಮೋವಾಬಿನ ರಾಜನೊಂದಿಗೆ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ, ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:4
15 ತಿಳಿವುಗಳ ಹೋಲಿಕೆ  

ನಾನು ಆಶ್ರಯಿಸಿಕೊಂಡಿರಲು ಪ್ರಭುವನು I ನೀವು ಹೇಳುವುದೆಂತು ನನಗೀ ಮಾತನು: II


ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.


ಅದಕ್ಕೆ ನಾನು, “ನನ್ನಂಥ ಗಂಡು ಓಡಿಹೋಗಿ ಅವಿತುಕೊಳ್ಳುವುದು ಸರಿಯೇ? ಇದಲ್ಲದೆ ಪ್ರಾಣರಕ್ಷಣೆಗಾಗಿ ಗರ್ಭಗುಡಿಯನ್ನು ನಾನು ಪ್ರವೇಶಿಸಬಹುದೇ? ಇಲ್ಲ, ನಾನು ಬರುವುದಿಲ್ಲ,” ಎಂದು ಉತ್ತರಕೊಟ್ಟೆ.


ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕಾಗಿ ಲೇವಿಯರನ್ನು ನೇಮಿಸಿದನು. ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿ ನಾತಾನ್ ಇವರ ಆಜ್ಞಾನುಸಾರ ಸರ್ವೇಶ್ವರನ ಆಲಯದಲ್ಲಿ ಈ ಗಾಯಕರನ್ನು ಇರಿಸಿದ್ದನು. ಸರ್ವೇಶ್ವರಸ್ವಾಮಿಯೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದರು.


ದಾವೀದನ ಪೂರ್ವೋತ್ತರ ಚರಿತ್ರೆ, ಅವನ ಆಳ್ವಿಕೆ, ಪರಾಕ್ರಮ ಹಾಗೂ ಅವನಿಗೂ ಇಸ್ರಯೇಲರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖ-ದುಃಖ, ಇವುಗಳ ವರದಿಯು


ದೇವರು ದಾವೀದನ ದರ್ಶಿಯಾದ ಗಾದನಿಗೆ,


ಒಮ್ಮೆ ಬೆನ್ಯಾಮೀನ್ ಹಾಗು ಯೂದ ಗೋತ್ರದ ಜನರ ಒಂದು ಗುಂಪು ದಾವೀದನು ವಾಸವಾಗಿದ್ದ ಕೋಟೆಯಬಳಿಗೆ ಹೋಯಿತು.


ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಸರ್ವೇಶ್ವರ ದರ್ಶನವಿತ್ತು,


ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋದನು. ಅಲ್ಲಿನ ರಾಜನನ್ನು, “ದೇವರು ನನಗೆ ಮಾರ್ಗತೋರಿಸುವವರೆಗೂ ನನ್ನ ತಂದೆತಾಯಿಗಳು ನಿಮ್ಮ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡನು.


ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ನಾಡಿಗೆ ಹೋಗು,” ಎಂದು ಹೇಳಿದ್ದರಿಂದ ಅವನು ಹೆರೆತ್ ಮರುಭೂಮಿಗೆ ಹೋದನು.


ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಆ ಸಮಯದಲ್ಲಿ ದಾವೀದನು ಭದ್ರವಾದ ದಿಣ್ಣೆಯ ಮೇಲಿದ್ದನು. ಫಿಲಿಷ್ಟಿಯರು ಬೆತ್ಲೆಹೇಮನ್ನು ವಶಪಡಿಸಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು