Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:9 - ಕನ್ನಡ ಸತ್ಯವೇದವು C.L. Bible (BSI)

9 ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಆ ಜೆಸ್ಸೆಯನ ಮಗ ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು - ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸೌಲನ ಅಧಿಕಾರಿಗಳೊಂದಿಗೆ ಎದೋಮ್ಯನಾದ ದೋಯೇಗನು ನಿಂತಿದ್ದನು. ದೋಯೇಗನು, “ನಾನು ನೋಬಿನಲ್ಲಿ ಇಷಯನ ಮಗನನ್ನು ನೋಡಿದೆನು. ದಾವೀದನು ಅಹೀಟೂಬನ ಮಗನಾದ ಅಹೀಮೆಲೆಕನನ್ನು ನೋಡಲು ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಸೌಲನು ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಉತ್ತರವಾಗಿ, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:9
8 ತಿಳಿವುಗಳ ಹೋಲಿಕೆ  

ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯೆ ದುರಾಚಾರಗಳನ್ನು ನಡೆಸಿದ್ದಾರೆ.


ಸುಳ್ಳುವರದಿಗೆ ಕಿವಿಗೊಡುವ ರಾಜಸೇವಕರೆಲ್ಲರು ದುರುಳರು.


ಕಳ್ಳಸಾಕ್ಷಿ ದಂಡನೆಯನ್ನು ಪಡೆಯದಿರನು; ಸುಳ್ಳಾಡುವವನು ಅದನ್ನು ತಪ್ಪಿಸಿಕೊಳ್ಳಲಾರನು.


‘ಏಫೋದ’ನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದನು. ಈ ಅಹೀಯನು ಶಿಲೋವಿನಲ್ಲಿ ಸರ್ವೇಶ್ವರನ ಯಾಜಕನಾಗಿದ್ದ ಏಲಿಯ ಮರಿಮಗನೂ ಫೀನೆಹಾಸನ ಮೊಮ್ಮಗನೂ ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.


ಅದೇ ದಿನ ಬೀಡುಬಿಡುವರು ಶತ್ರುಗಳು ನೋಬಿನಲ್ಲಿ; ಸಿಯೋನ್ ಬೆಟ್ಟದ ಕಡೆಗೆ, ಜೆರುಸಲೇಮಿನ ಗುಡ್ಡದ ಕಡೆಗೆ ಮುಷ್ಟಿ ತೋರಿಸುತ್ತಿಹರಿದೊ ಆ ದಿಕ್ಕಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು